Homeಕರ್ನಾಟಕಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಅವ್ಯವಹಾರ: ಸಿಬಿಐ ತನಿಖೆಗೆ ಆದೇಶ

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಅವ್ಯವಹಾರ: ಸಿಬಿಐ ತನಿಖೆಗೆ ಆದೇಶ

- Advertisement -
- Advertisement -

ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್‌ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳಲ್ಲಿ ನಡೆದ ಹಗರಣವನ್ನು ಸಿಬಿಐ ತನಿಖೆಗೆ ರಾಜ್ಯ ಸರಕಾರ ಒಪ್ಪಿಸಿದೆ.

ಕಳೆದ ಸರಕಾರದ ಅವಧಿಯಲ್ಲಿ ಪ್ರತಿಪಕ್ಷದ ನಾಯಕರಾಗಿದ್ದಾಗ ಸಿದ್ದರಾಮಯ್ಯ ಅವರು ಈ ವಿಚಾರದಲ್ಲಿ ಬ್ಯಾಂಕ್‌ಗಳಿಂದ ಠೇವಣಿದಾರರಿಗೆ ಆಗಿರುವ ನಷ್ಟ ಮತ್ತು ವಂಚನೆಯ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ಮಾಡಿ ಸೂಕ್ತ ತನಿಖೆ ನಡೆಸಿ ಬ್ಯಾಂಕಿನ ಗ್ರಾಹಕರಿಗೆ ನ್ಯಾಯ ಒದಗಿಸಲು ಆಗ್ರಹಿಸಿದ್ದರು. ಇದೀಗ ಪ್ರರಕಣವನ್ನು ಸಿಎಂ ಸಿದ್ದರಾಮಯ್ಯ ಸಿಬಿಐ ತನಿಖೆಗೆ ಒಪ್ಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಠೇವಣಿ ಹಣ ಕಳೆದುಕೊಂಡವರ ಹತಾಶೆ, ಸಂಕಟವನ್ನು ಕಣ್ಣಾರೆ ಕಂಡಿದ್ದೇನೆ. ಈ ಕಾರಣಕ್ಕಾಗಿ ಸೂಕ್ತ ತನಿಖೆ ನಡೆದು, ಎಲ್ಲ ಸಂತ್ರಸ್ತರಿಗೂ ನ್ಯಾಯ ಸಿಗಲಿ ಎಂಬ ಉದ್ದೇಶದಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಕೇಳಿ ಬಂದಿತ್ತು. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂ.ಠೇವಣಿ ಇಟ್ಟಿದ್ದರು. ಸಾಲಗಾರರು, ಸಂಸ್ಥೆಯ ಆಡಳಿತ ಮಂಡಳಿ ಮತ್ತು ಉದ್ಯೋಗಿಗಳೊಂದಿಗೆ ಶಾಮೀಲಾಗಿ ಭಾರೀ ಮೊತ್ತದ ಸಾಲ ಪಡೆದು ಮರು ಪಾವತಿಸದೆ ವಂಚಿಸಿರುವ ಆರೋಪ ಕೇಳಿ ಬಂದಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಬಡ್ಡಿ ಠೇವಣಿದಾರರ ರಕ್ಷಣಾ ಕಾಯಿದೆ-2004 ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳಡಿಯಲ್ಲಿ ಸಂಸ್ಥೆ ಹಾಗೂ ಇತರರ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಮೊದಲು ಸಂಸ್ಥೆಯ ಅಧ್ಯಕ್ಷರು ಸೇರಿದಂತೆ 4 ಮಂದಿಯನ್ನು ಬಂಧಿಸಲಾಗಿತ್ತು. ಬಳಿಕ ಇ.ಡಿ. ಅಧಿಕಾರಿಗಳು 2020ರಲ್ಲಿ ಪಿಎಂಎಲ್‌ಎಯಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು, ಬ್ಯಾಂಕ್‌ಗೆ ಸೇರಿದ 114.19 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಜೊತೆಗೆ ಸಂಸ್ಥೆಯ ಖಾತೆಯಲ್ಲಿದ್ದ 3.15 ಕೋಟಿ ರೂ. ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಇನ್ನು ಬೆಂಗಳೂರಿನ ಹನುಮಂತ ನಗರದಲ್ಲಿರುವ ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 450 ರಿಂದ 500 ಕೋಟಿ ವಂಚನೆ ನಡೆದಿದೆ. ಬ್ಯಾಂಕ್‌ನ ಅಧ್ಯಕ್ಷರ ಕುಟುಂಬಕ್ಕೆ 100 ಕೋಟಿಗೂ ಹೆಚ್ಚಿನ ಸಾಲ ನೀಡಲಾಗಿದೆ. ಬ್ಯಾಂಕ್ ಅಧ್ಯಕ್ಷರ ಮಗನ ಹೆಸರಿನಲ್ಲಿ ಅನೇಕ ರೀತಿಯ ಲೋನ್‌ಗಳನ್ನು ನೀಡಲಾಗಿದೆ. ನೂರಾರು ಕೋಟಿ ಲೋನ್ ನೀಡಿದರೂ ಯಾವುದೇ ದಾಖಲೆಗಳನ್ನು ಪಡೆದಿಲ್ಲ ಎಂದು ಗ್ರಾಹಕರು ಆರೋಪಿಸಿದ್ದಾರೆ.

ಇದನ್ನು ಓದಿ: ನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಜಯಪುರ: ಗೋ ಸಾಗಾಟಗಾರನ ಮೇಲೆ ಬಜರಂಗದಳದಿಂದ ಥಳಿತ

0
ರಾಜ್ಯದಲ್ಲಿ ಮತ್ತೆ ಗೂಂಡಾಗಿರಿ ವರದಿಯಾಗಿದ್ದು, ದನ-ಕರುಗಳನ್ನು ಸಾಗಾಟ ಮಾಡುವಾಗ ವಾಹನ ತಡೆದು ಯುವಕನಿಗೆ ಬಜರಂಗದಳ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ. ಬಂದೇನವಾಝ್‌...