Homeಮುಖಪುಟಡೀಸೆಲ್ ಮೇಲಿನ ವ್ಯಾಟ್ ಕಡಿತ; ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 8 ರೂ. ಇಳಿಕೆ

ಡೀಸೆಲ್ ಮೇಲಿನ ವ್ಯಾಟ್ ಕಡಿತ; ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 8 ರೂ. ಇಳಿಕೆ

ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ 32.98 ರೂ ಹಾಗೂ ಡೀಸೆಲ್ ಮೇಲೆ 31.83 ಸುಂಕ ವಿಧಿಸುತ್ತದೆ.

- Advertisement -
- Advertisement -

ಕೊರೊನಾ ಬಿಕ್ಕಟ್ಟಿನಿಂದಾದ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶಕ್ಕಾಗಿ ಡೀಸೆಲ್ ಮೇಲೆ ಶೇ. 30 ರಷ್ಟು ವ್ಯಾಟ್ ತೆರಿಗೆ ವಿಧಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ವ್ಯಾಟ್ ತೆರಿಗೆಯನ್ನು ಶೇ. 16.75 ಕ್ಕೆ ಇಳಿಸಿದ್ದಾರೆ.

ಇದರಿಂದಾಗಿ ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 8.36 ರೂಪಾಯಿಯಷ್ಟು ಕಡಿಮೆ ಆಗಲಿದೆ. ಲೀಟರ್‌ಗೆ 82 ರೂ ಇದ್ದ ಡೀಸೆಲ್ ಬೆಲೆ ವ್ಯಾಟ್ ಕಡಿತದಿಂದಾಗಿ 73.64ಕ್ಕೆ ಇಳಿಕೆಯಾಗಲಿದೆ.

ದೆಹಲಿಯ ಉದ್ಯಮಿಗಳು ಮತ್ತು ವರ್ತಕರ ಬೇಡಿಕೆ ಮೇರೆಗೆ ವ್ಯಾಟ್ ಇಳಿಕೆಯ ಈ ಕ್ರಮ ಕೈಗೊಳ್ಳಲಾಗಿದೆ. ಡೀಸೆಲ್ ಬೆಲೆ ಇಳಿಕೆಯಿಂದ ದೆಹಲಿಯ ಆರ್ಥಿಕತೆಗೆ ಪುಷ್ಟಿ ಸಿಗುತ್ತದೆ ಎಂದು ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಮೊದಲಿಂದಲೂ ಡೀಸೆಲ್‌ಗೆ ಕಡಿಮೆ ಸುಂಕ ವಿಧಿಸಲಾಗುತ್ತಿದೆ. ಇದರಿಂದಾಗಿ ಡೀಸೆಲ್ ಯಾವಾಗಲೂ ಪೆಟ್ರೋಲ್‌ಗಿಂತಲೂ ಬೆಲೆ ಕಡಿಮೆ ಇರುತ್ತಿತ್ತು. ಆದರೆ, ಕೊರೋನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಆರ್ಥಿಕತೆ ಸುಧಾರಿಸಲು ಮತ್ತು ಮಾಲಿನ್ಯಕಾರಕ ಡಿಸೆಲ್ಗೆ ಕಡಿವಾಣ ಹಾಕುವ ಉದ್ದೇಶದಿಂದ ದೆಹಲಿ ಸರ್ಕಾರ ಡೀಸೆಲ್ ಮೇಲೆ ವ್ಯಾಟ್ ತೆರಿಗೆಯನ್ನು ಶೇ. 30ರಷ್ಟು ಹೇರಲು ನಿರ್ಧರಿಸಿತ್ತು.


ಇದನ್ನೂ ಓದಿ: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?


ಇದರಿಂದಾಗಿ ದೆಹಲಿಯಲ್ಲಿ ಪೆಟ್ರೋಲ್‌‌ಗಿಂತ ಡೀಸೆಲ್ ದುಬಾರಿಯಾಗಿತ್ತು. ಕಳೆದ ತಿಂಗಳ 18 ದಿನಗಳಲ್ಲಿ ಪೆಟ್ರೋಲ್ ಬೆಲೆ 8.50 ರೂ ಏರಿಕೆಯಾದರೆ, ಡೀಸೆಲ್ 10.48 ರೂ ಬೆಲೆ ಹೆಚ್ಚಳ ಕಂಡಿತ್ತು. ಸರ್ಕಾರದ ಈ ಕ್ರಮಕ್ಕೆ ಹಲವು ಕಡೆಗಳಿಂದ ವಿರೋಧ ವ್ಯಕ್ತವಾಗಿತ್ತು.

ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸೇರಲಾಗಿದ್ದ ಸಂಪುಟ ಸಭೆಯಲ್ಲಿ ಡೀಸೆಲ್ ಮೇಲಿನ ವ್ಯಾಟ್ ಇಳಿಕೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ.

ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್‌ ಅನ್ನು ಹೆಚ್ಚುವರಿಯಾಗಿ ವಿಧಿಸುತ್ತವೆ. ಹೀಗಾಗಿ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ವ್ಯತ್ಯಾಸ ಇರುತ್ತದೆ.

ಡೀಸೆಲ್ ಮತ್ತು ಪೆಟ್ರೋಲ್‌ಗೆ ಕೇಂದ್ರ ಸರ್ಕಾರ ಈಗ ಸರಿ ಸುಮಾರು ಒಂದೇ ಮೊತ್ತದ ತೆರಿಗೆ ವಿಧಿಸುತ್ತದೆ. ಪೆಟ್ರೋಲ್ ಮೇಲೆ ಕೇಂದ್ರ ಸರ್ಕಾರದ ಸುಂಕ 32.98 ರೂ ಇದ್ದು, ಡೀಸೆಲ್ ಮೇಲೆ 31.83 ಸುಂಕ ವಿಧಿಸುತ್ತದೆ.


ಓದಿ: ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ಪ್ರಾಧ್ಯಾಪಕನ ಬಂಧನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...