Homeಮುಖಪುಟಕೇರಳದ ‘ಆರೋಗ್ಯ’ ಮತ್ತೆ ಮಹಿಳೆಯ ಕೈಗೇ!: ಟೀಚರ್ ಜಾಗಕ್ಕೆ ಬಂದರು ಪತ್ರಕರ್ತೆ....

ಕೇರಳದ ‘ಆರೋಗ್ಯ’ ಮತ್ತೆ ಮಹಿಳೆಯ ಕೈಗೇ!: ಟೀಚರ್ ಜಾಗಕ್ಕೆ ಬಂದರು ಪತ್ರಕರ್ತೆ….

- Advertisement -
- Advertisement -

ಕೇರಳದ ಹೊಸ ಸಚಿವ ಸಂಪುಟದಲ್ಲಿ ಆರೋಗ್ಯ ಖಾತೆ ಮತ್ತೆ ಮಹಿಳೆಯ ಕೈಗೇ ಬಂದಿದೆ. ಈ ಸಲ ಟೀಚರ್ ಜಾಗದಲ್ಲಿ ಪತ್ರಕರ್ತೆ ಇದ್ದಾರೆ. ಟೀಚರ್ ಅವರಷ್ಟೇ ಇವರೂ ತುಂಬ ಕ್ರಿಯಾಶೀಲರು ಎನ್ನಲಾಗಿದೆ.

ಅರಣ್ಮುಲ ಕ್ಷೇತ್ರದ ಶಾಸಕಿ ವೀಣಾ ಜಾರ್ಜ್ ಅವರನ್ನು ಆರೋಗ್ಯ ಸಚಿವರಾಗಿ ಆಯ್ಕೆ ಮಾಡಲಾಗಿದೆ. ಹೊಸ ಹುದ್ದೆಯ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ವೀಣಾ ಜಾರ್ಜ್, ಪಕ್ಷವು ವಹಿಸಿದ ಕರ್ತವ್ಯಗಳನ್ನು ಪೂರೈಸಲು ತನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತೇನೆ ಎಂದು ಕೇರಳದ ಮಾತೃಭೂಮಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಮೇ 18 ರಂದು, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಂ) ನಾಯಕ ಪಿಣರಾಯಿ ವಿಜಯನ್ ತಮ್ಮ ಸಂಪುಟವನ್ನು ಆಯ್ಕೆ ಮಾಡಿದರು. ಆದರೆ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ನಿಪಾ ಮತ್ತು ಕೋವಿಡ್ ವಿರುದ್ಧ ಕೇರಳದ ಹೋರಾಟದ ಮುಖವಾದ ಶೈಲಜಾ ‘ಟೀಚರ್’ ಅವರನ್ನು ಕೈಬಿಟ್ಟರು. ಬದಲಾಗಿ, ಅವರನ್ನು ಪಕ್ಷದ ವಿಪ್ ಆಗಿ ನೇಮಿಸಲಾಗುತ್ತಿದೆ.

ಶೈಲಜಾರೇ ಆರೋಗ್ಯ ಸಚಿವೆಯಾಗಿ ಮುಂದುವರೆಯಬೇಕಿತ್ತು ಎಂಬ ವಾದಗಳ ನಡುವೆಯೇ, ಪಿಣರಾಯಿ ಅವರನ್ನು ಹೊರತುಪಡಿಸಿ ಎಲ್ಲ ಹೊಸಮುಖಗಳಿಗೆ ಸಚಿವ ಸ್ಥಾನ ನೀಡಿರುವ ಎಲ್‌ಡಿಎಫ್ ಆರೋಗ್ಯ ಖಾತೆಗೆ ಶಾಸಕಿ ವೀಣಾ ಜಾರ್ಜ್ ಅವರನ್ನು ಆಯ್ಕೆ ಮಾಡಿದೆ.
ವೀಣಾ ಜಾರ್ಜ್ ಶಾಸಕಿಯಾಗುವ ಮೊದಲು ವಿವಿಧ ಮಲಯಾಳಂ ಮಾಧ್ಯಮಗಳಲ್ಲಿ ಪತ್ರಕರ್ತೆಯಾಗಿ ಮತ್ತು ಸುದ್ದಿ ನಿರೂಪಕರಾಗಿ ಕೆಲಸ ಮಾಡಿದ್ದಾರೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

21 ಸದಸ್ಯರ ಕೇರಳ ಕ್ಯಾಬಿನೆಟ್ ಮೇ 20 ರ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದೆ.
ಬೇಪುರ ಸ್ಥಾನದಿಂದ ಮೊದಲ ಬಾರಿಗೆ ಶಾಸಕರಾಗಿರುವ ಸಿ.ಎಂ ವಿಜಯನ್ ಅವರ ಅಳಿಯ ಪಿ.ಎ. ಮೊಹಮ್ಮದ್ ರಿಯಾಜ್ ಲೋಕೋಪಯೋಗಿ ಇಲಾಖೆ ಸಚಿವರಾಗಲಿದ್ದರೆ, ಕೆ.ಎನ್. ಬಾಲಗೋಪಾಲ್ ಅವರು ಹೊಸ ಹಣಕಾಸು ಸಚಿವರಾಗಲಿದ್ದಾರೆ.

ಮತ್ತೊಬ್ಬ ಮಹಿಳಾ ಶಾಸಕಿ ಆರ್. ಬಿಂದು ಕೇರಳದ ಹೊಸ ಉನ್ನತ ಶಿಕ್ಷಣ ಸಚಿವರಾಗಲಿದ್ದಾರೆ.
ಪಕ್ಷದ ತೀರ್ಮಾನಗಳಿಗೆ ಆದ್ಯತೆ ನೀಡುವ ಎಡಪಕ್ಷಗಳಲ್ಲಿ ಶೈಲಜಾ ಟೀಚರ್ ಸೇರಿದಂತೆ ಎಲ್ಲರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಚುನಾವಣೆಗಳಲ್ಲಿ ಕೇರಳದ ಎಡ ಪಕ್ಷಗಳು ಹೊಸಬರಿಗೆ, ಯುವಕರಿಗೆ ಮತ್ತು ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಿದ್ದವು ಮತ್ತು ಹಲವಾರು ಕಡೆ ಮಹಿಳೆಯರಿಗೇ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಸ್ಥಾನ ಅಥವಾ ಮೇಯರ್ ಸ್ಥಾನ ನೀಡಿದ್ದವು.
ಈಗ ಶೈಲಜಾ ಟೀಚರ್ ಜಾಗಕ್ಕೆ ವೀಣಾ ಜರ್ನಲಿಸ್ಟ್ ಬಂದಿದ್ದಾರೆ. ಅದು ಸಿಪಿಎಂ ಪಕ್ಷದ ನೀತಿಯೂ ಆಗಿದೆ. ಟೀಚರ್ ಈಗ ಚೀಫ್ ವಿಪ್ ಆಗಲಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ; ಕೇರಳ ಸಂಪುಟದಿಂದ ಶೈಲಜಾ ಟೀಚರ್ ಕೈಬಿಟ್ಟಿದ್ದು ಏಕೆ? ಅವರೇ ಸಿಎಂ ಆಗಬೇಕಿತ್ತಲ್ಲವೆ?: ಜಾಲತಾಣದಲ್ಲಿ ಭಾರೀ ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...