Homeಕರ್ನಾಟಕಜಾತಿಗಣತಿ ವರದಿ ವಿರುದ್ಧ ವೀರಶೈವ-ಲಿಂಗಾಯತ ಮಹಾಸಭೆ ನಿರ್ಣಯ : ಸಚಿವರು, ಶಾಸಕರಿಂದ ಸಹಿ

ಜಾತಿಗಣತಿ ವರದಿ ವಿರುದ್ಧ ವೀರಶೈವ-ಲಿಂಗಾಯತ ಮಹಾಸಭೆ ನಿರ್ಣಯ : ಸಚಿವರು, ಶಾಸಕರಿಂದ ಸಹಿ

- Advertisement -
- Advertisement -

ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿಯನ್ನು ಸಂಪುಟ ಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಯತ್ನದ ವಿರುದ್ದ ವೀರಶೈವ-ಲಿಂಗಾಯತ ಮಹಾಸಭಾ ಕೈಗೊಂಡಿರುವ ನಿರ್ಣಯಕ್ಕೆ ಸಚಿವರು, ಶಾಸಕರು ಸಹಿ ಹಾಕಿದ್ದಾರೆ.

ಜಾತಿಗಣತಿ ವರದಿ ಅಂಗೀಕಾರ ವಿರೋಧಿಸಿ ವೀರಶೈವ-ಲಿಂಗಾಯತ ಮಹಾಸಭಾದ ನೇತೃತ್ವದಲ್ಲಿ ಸಮುದಾಯದ ರಾಜಕೀಯ ಮತ್ತು ವಿವಿಧ ಸಂಘಟನೆಗಳ ಪ್ರಮುಖ ಸಭೆ ಮಂಗಳವಾರ ಬೆಂಗಳೂರಿನಲ್ಲಿ ನಡೆಯಿತು. ಸಭೆಯಲ್ಲಿ ವರದಿ ಸ್ವೀಕರಿಸದಂತೆ ಆಗ್ರಹಿಸುವುದು ಸೇರಿದಂತೆ ಐದು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ವೀರಶೈವ-ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸಚಿವರಾದ ಎಂ.ಬಿ ಪಾಟೀಲ್, ಈಶ್ವರ್ ಖಂಡ್ರೆ, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್, ಮುಖ್ಯಮಂತ್ರಿಯ ಸಲಹೆಗಾರ ಬಿ.ಆರ್ ಪಾಟೀಲ್ ಪಾಲ್ಗೊಂಡಿದ್ದರು.

ಮಹಾಸಭಾದ ನಿರ್ಣಯಗಳು

  • ಹತ್ತು ವರ್ಷಗಳ ಹಿಂದೆ ನಡೆಸಲಾದ ಸಮೀಕ್ಷೆಯ ವರದಿಯು ಹಲವು ಲೋಪಗಳಿಂದ ಕೂಡಿದೆ. ಆದ್ದರಿಂದ ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು.
  • ಕಾಂತರಾಜ್ ನೇತೃತ್ವದ ಆಯೋಗ ನಡೆಸಿದ ಸಮೀಕ್ಷೆಯ ವರದಿಯನ್ನು ಆಧರಿಸಿ, ಈಗ ಹಿಂದುಳಿದ ವರ್ಗಗಳ ಆಯೋಗ ಶಿಫಾರಸು ಸಲ್ಲಿಸಿದೆ. ಅದು ಅವೈಜ್ಞಾನಿಕ ಮತ್ತು ಅಸಂವಿಧಾನಿಕವಾಗಿದೆ. ಆದ್ದರಿಂದ ವರದಿಗೆ ಸಂಬಂಧಿಸಿದ ಉದ್ದೇಶಿತ ಪ್ರಕ್ರಿಯೆಯನ್ನು ಸಿಎಂ ಕೈಬಿಡಬೇಕು.
  • ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಲಿಂಗಾಯತ ಉಪ ಜಾತಿಗಳ ಹೆಸರನ್ನು ಮಾತ್ರ ನಮೂದಿಸಲಾಗಿದೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ತೀರ್ಪಿನಂತೆ ಎಲ್ಲಾ ಲಿಂಗಾಯತ ಉಪ ಪಂಗಡಗಳನ್ನು ‘ಲಿಂಗಾಯತ’ ಎಂದು ನಮೂದಿಸಲು ಅವಕಾಶ ನೀಡಬೇಕು.
  • ವೀರಶೈವ-ಲಿಂಗಾಯತ ಎಲ್ಲಾ ಉಪಪಂಗಡಗಳನ್ನು ಕೇಂದ್ರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿಗಳು ಶಿಫಾರಸು ಮಾಡಬೇಕು.
  • ಸಾಮಾಜಿಕ ಅಸಮಾನತೆಯ ನಿರಾಕರಣೆ ಮತ್ತು ಸಾಮಾಜಿಕ ನ್ಯಾಯ ಕುರಿತಾದ ಸರ್ಕಾರದ ಎಲ್ಲಾ ಸೈದ್ಧಾಂತಿಕ, ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಪ್ರಕ್ರಿಯೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯ ಮುಂಚೂಣಿಯಲ್ಲಿ ನಿಂತು ಬೆಂಬಲಿಸುತ್ತದೆ ಎಂದು ನಮ್ಮ ಸಮುದಾಯದ ಪರವಾಗಿ ಮಹಾಸಭೆಯ ಅಧ್ಯಕ್ಷನಾಗಿ ನಾನು ತುಂಬು ಹೃದಯದಿಂದ ಆಶ್ವಾಸನೆಯನ್ನು ನೀಡುತ್ತೇನೆ ಎಂದು ಶಾಮನೂರು ಶಿವಶಂಕರಪ್ಪ ಪ್ರಕಟಿಸಿದ್ದಾರೆ.

ಇದನ್ನೂ ಓದಿ : ಚನ್ನಪಟ್ಟಣ ಉಪಕದನ | ರೋಚಕ ಘಟ್ಟ ತಲುಪಿದ ಮೈತ್ರಿ ಜಟಾಪಟಿ : ಕಾದು ನೋಡುವ ತಂತ್ರದಲ್ಲಿ ಯೋಗೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...