Homeಕರ್ನಾಟಕವೀರಶೈವ ಲಿಂಗಾಯತ, ಒಕ್ಕಲಿಗರ ನಿಗಮ ಸ್ಥಾಪನೆಯನ್ನು ಸ್ವಾಗತಿಸುತ್ತೇನೆ: ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

ವೀರಶೈವ ಲಿಂಗಾಯತ, ಒಕ್ಕಲಿಗರ ನಿಗಮ ಸ್ಥಾಪನೆಯನ್ನು ಸ್ವಾಗತಿಸುತ್ತೇನೆ: ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

- Advertisement -
- Advertisement -

‘ಆಪರೇಷನ್ ಕಮಲ’ ಎಂಬ ಅನೈತಿಕ ರಾಜಕೀಯದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ರಾಜ್ಯವನ್ನು ದಶಕಗಳ ಹಿಂದಕ್ಕೆ ಒಯ್ಯುವ “ಆಪರೇಷನ್ ಬರ್ಬಾದ್” ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡುತ್ತಿದೆ. ಇದಕ್ಕೆ ಕಳೆದ ಮತ್ತು ಈ ವರ್ಷದ ಎರಡು ಬಜೆಟ್‍ಗಳೇ ಸಾಕ್ಷಿ ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರ್ಕಾರ ಪಾರದರ್ಶಕವಾಗಿ ಕೆಲಸ ಮಾಡಬೇಕೆನ್ನುವುದು ಸಂವಿಧಾನಬದ್ಧ ಬದ್ಧತೆ. ಆದರೆ, ಇದೊಂದು ಮುಚ್ಚುಮರೆಯ ಸರ್ಕಾರ. ಈ ಬಜೆಟ್‍ನಲ್ಲಿ ಸರ್ಕಾರ ಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಚ್ಚು. ಆಯವ್ಯಯವನ್ನು ಇಲಾಖಾವಾರು ನೀಡದೆ ಆರು ವಲಯಗಳಾಗಿ ವಿಂಗಡಿಸಿ ಯಾವ ಇಲಾಖೆಗೆ ಎಷ್ಟು ಅನುದಾನ ನೀಡಲಾಗಿದೆ. ಇಲಾಖೆಗಳ ಕಾರ್ಯಕ್ರಮಗಳೇನು, ಕಳೆದ ವರ್ಷದ ಸಾಧನೆಗಳೇನು, ಹೊಸ ಯೋಜನೆಗಳೇನು ಎಂಬ ವಿವರಗಳೇ ಇಲ್ಲ ಎಂದು ಆರೋಪಿಸಿದರು.

ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಬಜೆಟ್‍ಗೆ ಇದ್ದ ಮಹತ್ವ ಮತ್ತು ಪಾವಿತ್ರ್ಯವನ್ನೇ ಹಾಳು ಮಾಡಿದ್ದಾರೆ. ರಾಜ್ಯದಲ್ಲಿರುವ 33 ಇಲಾಖೆಗಳನ್ನು ಆರು ವಲಯಗಳನ್ನಾಗಿ ಮಾಡಿ ಗೊಂದಲ ಸೃಷ್ಟಿಸಲಾಗಿದೆ. ಈ ಆರೂ ವಲಯಗಳಿಗೆ ಕಳೆದ ಬಜೆಟ್‍ನಲ್ಲಿ ನಿಗದಿಪಡಿಸಲಾಗಿದ್ದ ಅನುದಾನಕ್ಕಿಂತ ಕಡಿಮೆ ಹಣ ನಿಗದಿಪಡಿಸಲಾಗಿದೆ. ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ರೂ 1231 ಕೋಟಿ , ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ ರೂ 9943 ಕೋಟಿ, ಆರ್ಥಿಕ ಅಭಿವೃದ್ಧಿ ಪ್ರಚೋದನೆ ವಲಯಕ್ಕೆ ರೂ 3203 ಕೋಟಿ, ಬೆಂಗಳೂರು ಸಮಗ್ರ ಅಭಿವೃದ್ಧಿಗೆ ರೂ 997 ಕೋಟಿ, ಸಂಸ್ಕೃತಿ – ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲ ವಲಯಕ್ಕೆ 1907 ಕೋಟಿ ಕಡಿಮೆ ಅನುದಾನವನ್ನು ನಿಗದಿಪಡಿಸಲಾಗಿದೆ. ಆಡಳಿತ ಸುಧಾರಣಾ ವಲಯಕ್ಕೆ ಮಾತ್ರ ರೂ.42,325 ಕೋಟಿಯಷ್ಟು ಅನುದಾವನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಈ ಹೆಚ್ಚುವರಿ ಅನುದಾನಕ್ಕೆ ಯಾವ ಹೊಸ ಯೋಜನೆಗಳನ್ನೂ ಪ್ರಕಟಮಾಡಿಲ್ಲ ಎಂದು ಆರೋಪಿಸಿದರು.

ಸಂಕಷ್ಟಗಳ ಸರಮಾಲೆಗೆ ಸಿಲುಕಿರುವ ರೈತರು ದೇಶಾದ್ಯಂತ ಬೀದಿಗಿಳಿದಿದ್ದಾರೆ. ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರನ್ನು ದಿವಾಳಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ಜೊತೆ ಸೇರಿರುವ ರಾಜ್ಯ ಸರ್ಕಾರ ತನ್ನ ಬಜೆಟ್‍ನಲ್ಲೂ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದೆ. ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲೂ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ‘ಒಂದು ಲಕ್ಷದವರೆಗಿನ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರ ಬ್ಯಾಂಕ್‍ಗಳಲ್ಲಿನ ಕೃಷಿ ಸಾಲವನ್ನು ಮನ್ನಾ ಮಾಡುತ್ತೇವೆ’ ಎಂದು ಭರವಸೆ ನೀಡಿತ್ತು. ಈ ಸರಕಾರ ಅಧಿಕಾರಕ್ಕೆ ಬಂದ ನಂತರ ಮಂಡಿಸಿದ ಎರಡೂ ಬಜೆಟ್‍ಗಳಲ್ಲೂ ರೈತರ ಸಾಲ ಮನ್ನಾದ ಪ್ರಸ್ತಾಪವೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃಷಿ, ತೋಟಗಾರಿಕೆ, ಜಲಸಂಪನ್ಮೂಲ, ಸಹಕಾರ, ಮೀನುಗಾರಿಕೆ, ರೇಷ್ಮೆ ಮೊದಲಾದ ಕೃಷಿ ಸಂಬಂಧಿತ ಇಲಾಖೆಗಳಿಗೆ ಕಳೆದ ಬಜೆಟ್‍ನಲ್ಲಿ ರೂ. 32,259 ಕೋಟಿ ಅನುದಾನ ನೀಡಿದ್ದರೆ ಪ್ರಸಕ್ತ ಬಜೆಟ್‍ನಲ್ಲಿ ರೂ 31,028 ಕೋಟಿ ಅನುದಾನ ಒದಗಿಸಲಾಗಿದೆ. ಅಂದರೆ, ರೂ 1,231 ಕೋಟಿ ಅನುದಾನ ಕಡಿಮೆ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತನ್ನ ಎರಡನೇ ಬಜೆಟ್‍ನಲ್ಲಿ ಕೂಡ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿ ಹಾಗೂ ಅಲ್ಪಸಂಖ್ಯಾತ ವರ್ಗಗಳನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಗಂಗೂಲಿ ಕ್ಯಾಚ್ ಮಾಡಲು ಹೋಗಿ ‘ಕೋಬ್ರಾ’ ಹಿಡಿದ ಬಿಜೆಪಿ

2020-21 ನೇ ಸಾಲಿನಲ್ಲಿ ಎಸ್‍ಸಿಎಸ್‍ಪಿ/ಟಿಎಸ್‍ಪಿ ಯೋಜನೆಗೆ 26,930 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಬಜೆಟ್ ಗಾತ್ರ ಹೆಚ್ಚಳಕ್ಕೆ ಅನುಗುಣವಾಗಿ ಈ ಯೋಜನೆಗೆ ಅನುದಾನವನ್ನು ಹೆಚ್ಚಿಸಬೇಕಿತ್ತು. ಆದರೆ ಈ ವರ್ಷದ ಬಜೆಟ್‍ನಲ್ಲಿ ನೀಡಲಾಗಿರುವ ಅನುದಾನ ರೂ 26,005 ಕೋಟಿ ಮಾತ್ರ. ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮಾಜದ ಅಭಿವೃದ್ಧಿಗಾಗಿ ನಿಗಮವನ್ನು ಸ್ಥಾಪಿಸಿ ತಲಾ ರೂ.500 ಕೋಟಿ ಅನುದಾನ ನಿಗದಿಪಡಿಸಿರುವುದನ್ನು ನಾನು ಸ್ವಾಗತಿಸುತ್ತೇನೆ. ಅಂಬೇಡ್ಕರ್, ವಾಲ್ಮೀಕಿ, ಆದಿಜಾಂಬವ, ಬೋವಿ, ವಿಶ್ವಕರ್ಮ, ಕಾಡುಗೊಲ್ಲರ, ಅಂಬಿಗರ ಚೌಡಯ್ಯ, ಸವಿತಾ ಸಮಾಜ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಒಟ್ಟು ಕೇವಲ 500 ಕೋಟಿ ಅನುದಾನ ನೀಡುವ ಮೂಲಕ ತಳಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳು ಆರ್ಥಿಕತೆ ಸಕಾರಾತ್ಮಕ ಹಾದಿಯಲ್ಲಿ ಇದೆ ಎಂದು ಬಜೆಟ್‍ನಲ್ಲಿ ಹೇಳಿದ್ದಾರೆ. ಆದರೆ ಶೇ.14 ರಷ್ಟು ಪ್ರಗತಿಯಲ್ಲಿದ್ದ ರಾಜ್ಯದ ಆರ್ಥಿಕತೆ ಈ ಬಾರಿಯ ಬಜೆಟ್‌ನಲ್ಲಿರುವ ಅಂಕಿಅಂಶಗಳನ್ನು ನೋಡಿದರೆ ಗಾಬರಿ ಹುಟ್ಟಿಸುವಂತೆ ಇವೆ. ರಾಜ್ಯ ಆದಾಯ ಎಂದು ಹೇಳುತ್ತಿರುವುದು ಬರಿ ಸಾಲವನ್ನು. ತೆರಿಗೆ ಸಂಗ್ರಹವು ಮುಖ್ಯಮಂತ್ರಿಗಳ ಭಾಷಣದ ಪ್ರಕಾರ ಕರ್ನಾಟಕದಲ್ಲಿ ತುಸು ಸಮಾಧಾನಕರವಾಗಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾದ ಪ್ರಮಾಣದಲ್ಲಿ ನೀಡದೆ ಹೋದ ಕಾರಣಕ್ಕೆ ರಾಜ್ಯವು ಭೀಕರ ಹಣಕಾಸಿನ ಸಮಸ್ಯೆಯನ್ನು ಎದುರಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ರಾಜ್ಯದ ಇತ್ತೀಚಿನ ವರ್ಷಗಳಲ್ಲಿಯೆ ಪ್ರಥಮ ಬಾರಿ ರೂ.19,485.84 ಕೋಟಿ ರಾಜಸ್ವ ಕೊರತೆ 2020-21 ರಲ್ಲಿ ಎದುರಾಗಿದೆ. 2021-22 ಕ್ಕೆ ರೂ.15,133 ಕೋಟಿ ರಾಜಸ್ವದ ಕೊರತೆ ಆಗುವುದೆಂದು ಬಜೆಟ್‍ನಲ್ಲಿ ತಿಳಿಸಿದ್ದಾರೆ. 2020-21 ರಲ್ಲಿ ಬಜೆಟ್ ಮಂಡಿಸಿದಾಗ ರೂ.143 ಕೋಟಿ ರಾಜಸ್ವ ಉಳಿಕೆ ಇರುತ್ತದೆ ಎಂದು ಅಂದಾಜಿಸಲಾಗಿತ್ತು ನಂತರದ ಪರಿಷ್ಕೃತ ಬಜೆಟ್‌ನಲ್ಲಿ ರಾಜಸ್ವ ಕೊರತೆ ಎದುರಾಯಿತು. 5 ವರ್ಷದ ನಮ್ಮ ಸರ್ಕಾರದಲ್ಲಿ ರಾಜಸ್ವದ ಕೊರತೆ ಎಂದೂ ಆಗಿಲ್ಲ. ಬಜೆಟ್‍ನ ಅಂದಾಜಿನ ಪ್ರಕಾರ ವಿತ್ತೀಯ ಕೊರತೆ ಜಿ.ಎಸ್.ಡಿ.ಪಿ.ಯ ಶೇ.3.48 ರಷ್ಟು ಇರುತ್ತದೆ. ಇದರ ಪ್ರಕಾರ 2021-22 ರಲ್ಲಿ ವಿತ್ತೀಯ ಕೊರತೆ ರೂ.59,240 ಕೋಟಿ ಇರುತ್ತದೆ. ಈ ವರ್ಷ ರೂ.71,332 ಕೋಟಿಗಳಷ್ಟು ರಾಜ್ಯ ಸರ್ಕಾರ ಸಾಲ ಪಡೆಯುವುದಾಗಿ ಘೋಷಿಸಿದೆ. ಇದರಿಂದ ಸರ್ಕಾರದ ಮೇಲೆ ಬಹಳಷ್ಟು ಹೊರೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಎಫ್.ಆರ್.ಬಿ.ಎಂ. ಕಾಯ್ದೆ ಪ್ರಕಾರ ವಿತ್ತೀಯ ಕೊರತೆಯು ಜಿ.ಡಿ.ಪಿ.ಯ ಶೇ.3 ಕ್ಕಿಂತ ಕಡಿಮೆ ಇರಬೇಕೆಂದು ನಿಯಮವಿದೆ. ಆದರೆ ಸರ್ಕಾರವು ಕೊರೋನಾ ಸಂದರ್ಭದಲ್ಲಿ ಸರಿಯಾದ ಆಡಳಿತವನ್ನು ನಡೆಸದೇ ಸರ್ಕಾರದ ವೈಫಲ್ಯವನ್ನು ಮುಚ್ಚಿ ಹಾಕಲು ಜಿ.ಎಸ್.ಡಿ.ಪಿ.ಯ ಶೇ.4 ರಷ್ಟು ಹೆಚ್ಚಿಗೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿಕೊಳ್ಳಲಾಗಿದೆ. ಇದು ಒಳ್ಳೆಯ ಆರ್ಥಿಕ ನೀತಿಯ ಲಕ್ಷಣವಲ್ಲ.
5 ವರ್ಷದ ನಮ್ಮ ಸರ್ಕಾರದಲ್ಲಿ ವಿತ್ತೀಯ ಕೊರತೆಯು ಜಿ.ಎಸ್.ಡಿ.ಪಿಯ. ಶೇ.2.5 ರ ಆಸುಪಾಸಿನಲ್ಲೇ ಇತ್ತು. 2020-21 ರಲ್ಲಿ ಬಿಡುಗಡೆ ಮಾಡಿದ ಮಧ್ಯಮಾವಧಿ ವಿತ್ತೀಯ ಯೋಜನೆ – 2020-2024 ರ ಪ್ರಕಾರ ಹೆಚ್ಚುವರಿ ರಾಜಸ್ವ ನಿರೀಕ್ಷೆಯಲ್ಲಿದ್ದ ರಾಜ್ಯ 2020-21 ರಲ್ಲೇ ದೊಡ್ಡ ಮಟ್ಟದ ರಾಜಸ್ವ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಿದರು.

2022-23 ರಿಂದ ಜಿ.ಎಸ್.ಟಿ. ಪರಿಹಾರ ಸ್ಥಗಿತಗೊಳ್ಳುವುದರಿಂದ ಇದರ ಜೊತೆಗೆ ರೂ.30,743 ಕೋಟಿ ರಾಜಸ್ವ ಕೊರತೆಯಾಗಲಿದೆ ಎಂದು ಅಂದಾಜು ಮಾಡಲಾಗಿದೆ. 2023-24 ರಲ್ಲಿ ಈ ರಾಜಸ್ವ ಕೊರತೆಯು ರೂ.46,831 ಕೋಟಿಯಾಗಲಿದೆ. 2020-21 ರಲ್ಲಿ ರೂ.70,411 ಕೋಟಿ ಸಾಲ ಮಾಡಿದೆ. 2019-20 ರವರೆಗೆ ರೂ.3,27,209 ಕೋಟಿ ಸಾಲ ರಾಜ್ಯದ ಮೇಲಿತ್ತು. ನಮ್ಮ ಸರ್ಕಾರದ ಅಂತಿಮ ವರ್ಷದಲ್ಲಿ (2017-18)ರಲ್ಲಿ ರೂ.2,42,420 ಕೋಟಿ ಸಾಲ ಮಾಡಲಾಗಿತ್ತು. ಜಿ.ಎಸ್.ಡಿ.ಪಿಯ ಮೇಲೆ ಸಾಲದ ಪ್ರಮಾಣ ಶೇ.18.93 ಇತ್ತು. 2020-21 ರ ಫೆಬ್ರವರಿ ಅಂತ್ಯಕ್ಕೆ ರಾಜ್ಯದ ಸಾಲ ರೂ.3,97,881 ಕೋಟಿ ಇದೆ. ಮುಂದಿನ ವರ್ಷಕ್ಕೆ ರೂ.4,57,889 ಕೋಟಿಗಳಷ್ಟು ಸಾಲ ರಾಜ್ಯದ ಜನರ ಮೇಲೆ ಇರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಜಿ.ಎಸ್.ಡಿ.ಪಿ.ಯ ಶೇ.26.9 ರಷ್ಟು ಆಗಿದೆ. ಎಫ್.ಆರ್.ಬಿ.ಎಂ. ಕಾಯ್ದೆಯ ನಿಯಮದ ಪ್ರಕಾರ ಜಿ.ಎಸ್.ಡಿ.ಪಿಯ ಶೇ.25 ರಷ್ಟು ಕಡಿಮೆ ಇರಬೇಕು. 5 ವರ್ಷದ ನಮ್ಮ ಸರ್ಕಾರವು ಅದು ಶೇ.20 ರ ಆಸುಪಾಸಿನಲ್ಲಿ ಇತ್ತು ಎಂದು ವಿವರಿಸಿದರು.

ಇದನ್ನೂ ಓದಿ: ಮಹಿಳಾ ದಿನಾಚರಣೆಯ ದಿನವೇ ಪೊದೆಯಲ್ಲಿ ಪತ್ತೆಯಾದ ನವಜಾತ ಹೆಣ್ಣುಮಗು!

ರಾಜಸ್ವ ಆದಾಯವು ಕಳೆದ ಬಜೆಟ್ ಅಂದಾಜಿಗಿಂತ ಈ ವರ್ಷದ ಅಂದಾಜಿನಲ್ಲಿ ಸುಮಾರು ರೂ.7,000 ಕೋಟಿಯಷ್ಟು ಕಡಿಮೆಯಾಗಿದೆ. ಕಳೆದ ಬಜೆಟ್‍ನ ಅಂದಾಜು ಮತ್ತು ಪರಿಷ್ಕೃತ ರಾಜಸ್ವ ಸ್ವೀಕೃತಿಯಲ್ಲಿ ರೂ.20,000 ಕೋಟಿಯಷ್ಟು ಕಡಿಮೆಯಾಗಿದೆ. ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ಮತ್ತು ಅನುದಾನದ ಕೊರತೆಯೇ ಇದಕ್ಕೆ ಹೊಣೆ. 2020-21 ರ ಪರಿಷ್ಕೃತ ವೆಚ್ಚವು ರೂ.2,29,924.73 ಕೋಟಿ ಇರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಬಜೆಟ್‍ನ ಅಂದಾಜಿಗಿಂತ ರೂ.8,000 ಕೋಟಿಯಷ್ಟು ಕಡಿಮೆಯಾಗಿದೆ ಎಂದು ಹೇಳಿದರು.

2020-21 ರಲ್ಲಿ ರೂ.2,37,893 ಕೋಟಿಗಳಷ್ಟು ಬಜೆಟ್ ಅನ್ನು ಮಂಡಿಸಿದ್ದರೂ ಕಡೆಯದಾಗಿ ಇಲಾಖೆಗಳಿಗೆ ನೀಡಲು ಉದ್ದೇಶಿಸಿದ್ದ ಮೊತ್ತ ರೂ.1,96,369.2 ಕೋಟಿ. ಅದರಲ್ಲಿ ಹಳೆಯ ಬಾಕಿ ರೂ.13,491.7 ಕೋಟಿ. ಒಟ್ಟಿಗೆ ಸೇರಿ ಖರ್ಚು ಮಾಡಲು ಲಭ್ಯವಿದ್ದ ಅನುದಾನ ರೂ.2,09,860 ಕೋಟಿ. ಇಲಾಖೆಗಳಿಗೆ ಜನವರಿಯವರೆಗೆ ಬಿಡುಗಡೆ ಮಾಡಿದ್ದು ರೂ.1,42,851 ಕೋಟಿ. ಖರ್ಚಾಗಿರುವುದು ರೂ.1,30,998 ಕೋಟಿ ಮಾತ್ರ. 2020-21 ರಲ್ಲಿ ರೂ.2,37,893 ಕೋಟಿಯನ್ನು ಪರಿಷ್ಕರಿಸಿ ರೂ.2,29,925 ಕೋಟಿಗಳಿಗೆ ಇಳಿಸಿಕೊಂಡರು ಎಂದು ಹೇಳಿದ್ದಾರೆ.

ಕೊರೋನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಿಯೂ ಒಟ್ಟು ಖರ್ಚು ಅವರ ಬಜೆಟ್ ಅಂದಾಜಿಗಿಂತ ಕಡಿಮೆಯಿದೆ. ಇದರಲ್ಲಿ ಇಲಾಖೆಗಳಿಗೆ ಖರ್ಚು ಮಾಡಲು ಸಿಕ್ಕಿದ್ದು ರೂ.1,96,369 ಕೋಟಿ. ಇನ್ನು ಉಳಿದ ರೂ.33,556 ಕೋಟಿಗಳು ಸಾಲ ಮರುಪಾವತಿ ಮತ್ತು ಬಡ್ಡಿ ಪಾವತಿಗೆ ಖರ್ಚಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 2021-22 ರಲ್ಲಿ ಜಿ.ಡಿ.ಪಿ.ಯು ಶೇ.11 ರಷ್ಟು ಬೆಳವಣಿಗೆ ಕಾಣುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಆದರೆ ರಾಜ್ಯದ ಸ್ವಂತ ತೆರಿಗೆಗಳ ಸಂಗ್ರಹಗಳ ಗುರಿಯು 2020-21 ರ ಮೂಲ ಬಜೆಟ್‍ಗೆ ಹೋಲಿಸಿದರೆ ಶೇ.3.12 ರಷ್ಟು ಕಡಿಮೆಯಾಗಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರದ ತೆರಿಗೆ ಪಾಲು 2020-21ರ ಮೂಲ ಬಜೆಟ್‍ನಲ್ಲಿ ರೂ.28,591.23 ಕೋಟಿ ನಿರೀಕ್ಷೆ ಮಾಡಲಾಗಿತ್ತು. 2021-22 ರ ಆಯವ್ಯಯದಲ್ಲಿ ಇದು ರೂ.24,273.6 ಕೋಟಿಗೆ ಇಳಿಯಲಿದೆ. ರೂ.4,318 ಕೋಟಿಗಳಷ್ಟು ಕಡಿಮೆಯಾಗಿದೆ. ಅಂದರೆ ಶೇ.15 ರಷ್ಟು ಕಡಿಮೆಯಾಗಿದೆ. ದೇಶದ ಜಿ.ಡಿ.ಪಿ.ಯು ಶೇ.11 ಕ್ಕೂ ಹೆಚ್ಚು ಪ್ರಗತಿಯಾಗುವುದಾದರೆ ನಮಗೆ ನೀಡಬೇಕಾದ ತೆರಿಗೆ ಹಂಚಿಕೆಯೂ ಅಷ್ಟೇ ಪ್ರಮಾಣದಲ್ಲಿ ಹೆಚ್ಚಾಗಿ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಆದಾಯ ಬರಬೇಕಿತ್ತು ಅಲ್ಲವೇ? ಕೇಂದ್ರ ಮತ್ತು ರಾಜ್ಯಗಳಲ್ಲಿನ ಎರಡೂ ಬಿ.ಜೆ.ಪಿ. ಸರ್ಕಾರಗಳು ಜನರ ತಲೆಗೆ ಟೋಪಿ ಹಾಕುತ್ತಿವೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯ ಬಜೆಟ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್‌ ಮೇಲೆ ವಿಧಿಸಲಾಗುತ್ತಿದ್ದ ಮಾರಾಟ ತೆರಿಗೆಯನ್ನು ಕಡಿಮೆ ಮಾಡುವ ಮೂಲಕ ಜನರಿಗೆ ನೆರವಾಗಬೇಕಿತ್ತು ಹಾಗೂ ಕೇಂದ್ರ ಸರ್ಕಾರದ ಮೇಲೆ ತೆರಿಗೆ ಕಡಿತಗೊಳಿಸುವಂತೆ ಒತ್ತಡ ಹೇರಬೇಕಿತ್ತು. ಈ ಅಂಶಗಳೇ ಇಂದಿನ ಬಜೆಟ್‌ನಲ್ಲಿ ಇಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ: ‘ಜಿಹಾದ್’‌ಗೆ ಕಾರಣವಾಗುವ ಎಲ್ಲ ‘ಲವ್‌’ಗೂ ವಿರೋಧ: ಮಧ್ಯಪ್ರದೇಶ ಗೃಹ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...