Homeಮುಖಪುಟವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

- Advertisement -
- Advertisement -

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು ಇದೇ ಮೊದಲ ಬಾರಿಯಾಗಿದೆ. ವೆನೆಜುವೆಲಾದ ತೈಲ ಕ್ಷೇತ್ರಗಳ ನಿರ್ವಹಣೆಯನ್ನು ಅಮೆರಿಕಕ್ಕೆ ವಹಿಸುವ ಐತಿಹಾಸಿಕ ಒಪ್ಪಂದಕ್ಕೆ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಸಹಿ ಹಾಕಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

‘ನಾವು ಬಲಿಷ್ಠವಾಗಿದ್ದೇವೆ, ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ’

ಅಮೆರಿಕದ ವಿಶೇಷ ಪಡೆಗಳು ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್‌ನಿಂದ ಮಡುರೊ ಹಾಗೂ ಅವರ ಪತ್ನಿ ಸಿಲಿಯಾ ಫ್ಲೋರೆಸ್ ಅವರನ್ನು ವಶಕ್ಕೆ ಪಡೆದು ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಬಂಧನ ಕೇಂದ್ರದಲ್ಲಿ ಇರಿಸಿವೆ. ಮಾದಕವಸ್ತು ಕಳ್ಳಸಾಗಣೆ ಮತ್ತು ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಆರೋಪವನ್ನು ಅಮೆರಿಕ ಇವರ ಮೇಲೆ ಹೊರಿಸಿದ್ದು, ದಂಪತಿ ಈ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ ಅವರು ಅಮೆರಿಕದ ಬಂಧನ ಕೇಂದ್ರದಿಂದ ಹಂಚಿಕೊಂಡಿದ್ದಾರೆ ಎನ್ನಲಾದ ಫೋಟೊ. PC: aljazeera

ಸಾಮಾಜಿಕ ಮಾಧ್ಯಮವಾದ ‘ಎಕ್ಸ್’ ಮತ್ತು ‘ಟೆಲಿಗ್ರಾಂ’ನಲ್ಲಿ ಫೋಟೋ ಹಂಚಿಕೊಂಡಿರುವ ಮಡುರೊ, ಸ್ಪ್ಯಾನಿಷ್ ಭಾಷೆಯಲ್ಲಿ ಭಾವುಕ ಸಂದೇಶ ಬರೆದುಕೊಂಡಿದ್ದಾರೆ. “ನನ್ನ ಎಲ್ಲಾ ಮೊಮ್ಮಕ್ಕಳಿಗೆ ಹಾಗೂ ನಮ್ಮನ್ನು ಪ್ರೀತಿಸುವ ಸಜ್ಜನರಿಗೆ ಈ ಫೋಟೋಗಳನ್ನು ಸಣ್ಣ ಉಡುಗೊರೆಯಾಗಿ ಕಳುಹಿಸುತ್ತಿದ್ದೇನೆ. ನಿಮ್ಮ ಪ್ರೀತಿಯ ಬಲದಿಂದ ನಾವು ದೃಢವಾಗಿ ನಿಂತಿದ್ದೇವೆ. ನಾವು ಬಲಿಷ್ಠವಾಗಿ, ಶಾಂತವಾಗಿ ಮತ್ತು ಆತ್ಮವಿಶ್ವಾಸದಿಂದ ಇದ್ದೇವೆ. ವೆನೆಜುವೆಲಾ ಮತ್ತೆ ಎದ್ದು ನಿಲ್ಲುತ್ತದೆ, ಎಂದು ಅವರು ಹೇಳಿದ್ದಾರೆ.

2027ರಲ್ಲಿ ವಿಚಾರಣೆ ಆರಂಭ

ಭಾನುವಾರ(ಆ.30) ಈ ಪೋಸ್ಟ್‌ಗಳನ್ನು ಪ್ರಕಟಿಸಲಾಗಿದ್ದರೂ, ಫೋಟೋಗಳಲ್ಲಿರುವ ಟೈಮ್ ಸ್ಟ್ಯಾಂಪ್ ಪ್ರಕಾರ ಅವುಗಳನ್ನು ಜೂನ್ 25ರಂದು ತೆಗೆಯಲಾಗಿದೆ. ಈ ಚಿತ್ರಗಳ ಅಧಿಕೃತತೆ ಕುರಿತು ಅಮೆರಿಕದ ಬಂಧನ ಕೇಂದ್ರವನ್ನು ಸಂಪರ್ಕಿಸಲು ಯತ್ನಿಸಿದರೂ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ ಎಂದು ಸುದ್ದಿ ಸಂಸ್ಥೆ ಎಎಫ್‌ಪಿ (AFP) ವರದಿ ಮಾಡಿದೆ.

ಆಪ್ತ ಮೂಲಗಳ ಪ್ರಕಾರ, ಮಡುರೊ ಅವರಿಗೆ ಜೈಲಿನಲ್ಲಿ ಇಂಟರ್ನೆಟ್ ಅಥವಾ ದಿನಪತ್ರಿಕೆಗಳ ಬಳಕೆಗೆ ಅವಕಾಶವಿಲ್ಲ. ಆದರೆ, ತಮ್ಮ ಕುಟುಂಬ ಮತ್ತು ವಕೀಲರೊಂದಿಗೆ ತಿಂಗಳಿಗೆ ಒಟ್ಟು 300 ನಿಮಿಷಗಳ ಕಾಲ (ಪ್ರತಿ ಕರೆ ಗರಿಷ್ಠ 15 ನಿಮಿಷ) ದೂರವಾಣಿಯಲ್ಲಿ ಮಾತನಾಡಲು ಅನುಮತಿ ನೀಡಲಾಗಿದೆ. ನ್ಯೂಯಾರ್ಕ್‌ನ ಫೆಡರಲ್ ನ್ಯಾಯಾಲಯದ ಪ್ರಕಾರ, ಮಡುರೊ ದಂಪತಿ ವಿರುದ್ಧದ ಪ್ರಕರಣದ ವಿಚಾರಣೆ 2027ರ ಜೂನ್ 1ರಿಂದ ಪ್ರಾರಂಭವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...