Homeಮುಖಪುಟಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು...ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

- Advertisement -
- Advertisement -

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿದೆ.

ಮುಸ್ಲಿಮರಿಗೆ ನಮಾಝ್ ಮಾಡಲು ಅಥವಾ ಮಸೀದಿ ನಿರ್ಮಿಸಲು ಪರ್ಯಾಯ ಭೂಮಿಯನ್ನು ಮಂಜೂರು ಮಾಡುವ ಕುರಿತು ಪರಿಗಣಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ.

ಭೋಜಶಾಲಾ-ಕಮಲ್ ಮೌಲಾ ವಿವಾದವು ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿರುವ ಒಂದೇ ಐತಿಹಾಸಿಕ ಕಟ್ಟಡದ ಮಾಲೀಕತ್ವ ಮತ್ತು ಪೂಜಾ ಹಕ್ಕಿಗೆ ಸಂಬಂಧಿಸಿದ್ದಾಗಿದೆ. ಹಿಂದೂಗಳು ಇದನ್ನು ಸರಸ್ವತಿ ದೇವಸ್ಥಾನ (ಭೋಜಶಾಲಾ) ಎಂದರೆ, ಮುಸ್ಲಿಮರು ಕಮಲ್ ಮೌಲಾ ಮಸೀದಿ ಎಂದು ವಾದಿಸಿಕೊಂಡು ಬಂದಿದ್ದಾರೆ.

11ನೇ ಶತಮಾನದಲ್ಲಿ ರಾಜ ಭೋಜನು ಇದನ್ನು (ವಿವಾದಿತ ಸ್ಮಾರಕವನ್ನು) ಸರಸ್ವತಿ ದೇವಿಯ ಆರಾಧನಾ ಕೇಂದ್ರ ಮತ್ತು ಸಂಸ್ಕೃತ ವಿಶ್ವವಿದ್ಯಾಲಯವಾಗಿ ನಿರ್ಮಿಸಿದನು. ನಂತರ ಬಂದ ಮುಸ್ಲಿಂ ಆಡಳಿತಗಾರರು ಅದನ್ನು ಧ್ವಂಸಗೊಳಿಸಿ ಮಸೀದಿಯಾಗಿ ಪರಿವರ್ತಿಸಿದರು ಎಂಬುವುದು ಹಿಂದೂ ಪಕ್ಷಕಾರರ ವಾದವಾಗಿದೆ.

ವಿವಾದಿತ ಸ್ಮಾರಕ ಸೂಫಿ ಸಂತ ಹಝರತ್ ಕಮಲ್ ಶಾ ವಲಿ ಅವರ ದರ್ಗಾ ಮತ್ತು ಮಸೀದಿಯಾಗಿದೆ. ಇಲ್ಲಿ ಶತಮಾನಗಳಿಂದಲೂ ನಮಾಝ್ ಮಾಡಲಾಗುತ್ತಿದೆ ಎಂಬುವುದು ಮುಸ್ಲಿಂ ಪಕ್ಷಕಾರರ ವಾದವಾಗಿದೆ.

ಮುಸ್ಲಿಂ ಸಮುದಾಯವು 1935ರಲ್ಲಿ ಧಾರ್ ಸಂಸ್ಥಾನದ ರಾಜರು ತಮಗೆ ನಮಾಝ್ ಮಾಡಲು ನೀಡಿದ್ದ ಆದೇಶವನ್ನು (ಐಲಾನ್) ಪ್ರಮುಖ ಸಾಕ್ಷ್ಯವಾಗಿ ಮಂಡಿಸಿತ್ತು.

ಆದರೆ, ನ್ಯಾಯಾಲಯವು, “ಈ ಇಡೀ ಜಾಗವನ್ನು 1904ರಲ್ಲೇ ಬ್ರಿಟಿಷ್ ಕಾನೂನಿನಡಿ ‘ಸಂರಕ್ಷಿತ ಸ್ಮಾರಕ’ ಎಂದು ಘೋಷಿಸಲಾಗಿತ್ತು. ಹಾಗಾಗಿ 1935ರಲ್ಲಿ ಧಾರ್ ರಾಜರು ಅಂತಹ ಆದೇಶ ನೀಡಲು ಕಾನೂನಾತ್ಮಕವಾಗಿ ಅಧಿಕಾರ ಹೊಂದಿರಲಿಲ್ಲ” ಎಂದು ಹೇಳಿ ಆ ವಾದವನ್ನು ತಿರಸ್ಕರಿಸಿದೆ ಎಂದು ವರದಿಯಾಗಿದೆ.

1306-07ರಲ್ಲಿ ಹಜರತ್ ಮೌಲಾನಾ ಕಮಾಲುದ್ದೀನ್ ಚಿಸ್ತಿ ಅವರು ಇಲ್ಲಿ ಮಸೀದಿಗೆ ಅಡಿಪಾಯ ಹಾಕಿದ್ದರು ಎಂಬ ಮುಸ್ಲಿಂ ಸಮುದಾಯದ ವಾದವನ್ನು ಕೋರ್ಟ್ ಒಪ್ಪಿಲ್ಲ.

ಪುರಾತತ್ವ ಇಲಾಖೆಯ ವೈಜ್ಞಾನಿಕ ವರದಿಯನ್ನು ಆಧರಿಸಿ, “ಕ್ರಿಸ್ತಶಕ 1034 ಕ್ಕಿಂತ ಮುಂಚೆ ಇಲ್ಲಿ ಮಸೀದಿ ಇತ್ತು ಅನ್ನಲು ಯಾವುದೇ ಆಧಾರಗಳಿಲ್ಲ. ಈಗಿರುವ ರಚನೆಯನ್ನು ಮೊದಲೇ ಅಲ್ಲಿದ್ದ ಹಿಂದೂ ದೇವಾಲಯದ ಕಂಬಗಳು ಮತ್ತು ಕೆತ್ತನೆಗಳ ಮೇಲೆಯೇ ಕಟ್ಟಲಾಗಿದೆ” ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಅಲ್ಲದೆ, ಈ ಜಾಗವು ಇಸ್ಲಾಮಿಕ್ ಕಾನೂನಿನಡಿ ಎಂದಿಗೂ ‘ವಕ್ಫ್ ಆಸ್ತಿ’ ಆಗಿರಲಿಲ್ಲ ಎಂದೂ ನ್ಯಾಯಾಲಯ ಹೇಳಿದೆ. 

ವಿವಾದ ಪ್ರಾರಂಭಗೊಂಡಿದ್ದು ಯಾವಾಗ?

ಭೋಜಶಾಲಾ-ಕಮಲ್ ಮೌಲಾ ವಿವಾದವು ಪ್ರಾರಂಭಗೊಂಡಿದ್ದು 1902-1903ರ ಹೊತ್ತಿಗೆ. ಧಾರ್ ಸಂಸ್ಥಾನದ ಶಿಕ್ಷಣ ಮತ್ತು ಪುರಾತತ್ವ ಅಧಿಕಾರಿಯಾಗಿದ್ದ ಕೆ.ಕೆ. ಲೆಲೆ ಎಂಬುವವರು ಈ ವಿವಾದಿತ ಕಟ್ಟಡದ ನೆಲದ ಮೇಲೆ ಮತ್ತು ಗೋಡೆಗಳಲ್ಲಿ ಸಂಸ್ಕೃತ ಶ್ಲೋಕಗಳು ಹಾಗೂ ಶಾಸನಗಳನ್ನು ಪತ್ತೆಹಚ್ಚಿದರು ಎನ್ನಲಾಗಿದೆ.

ನಂತರ ಈ ಕಟ್ಟಡವೇ ರಾಜ ಭೋಜನ ಕಾಲದ ಐತಿಹಾಸಿಕ ‘ಭೋಜಶಾಲಾ’ ಕಲಿಕಾ ಕೇಂದ್ರ ಎಂದು ಅವರು ವರದಿ ನೀಡಿದಾಗ ವಿವಾದದ ಕಿಡಿ ಹೊತ್ತಿಕೊಂಡಿತು. ಕಾಲಕ್ರಮೇಣ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಇಲ್ಲಿನ ಪೂಜಾ ಹಕ್ಕಿಗಾಗಿ ತೀವ್ರ ಜಗಳಗಳು ಆರಂಭವಾದವು. 1935ರಲ್ಲಿ ಧಾರ್ ಸಂಸ್ಥಾನದ ದಿವಾನರು ಈ ಜಾಗದಲ್ಲಿ ಮುಸ್ಲಿಮರಿಗೆ ಶುಕ್ರವಾರದ ನಮಾಝ್ ಮಾಡಲು ಅಧಿಕೃತ ಆದೇಶ ಹೊರಡಿಸಿದಾಗ ವಿವಾದ ಮತ್ತಷ್ಟು ತೀವ್ರವಾಯಿತು.

ಸ್ವಾತಂತ್ರ್ಯದ ನಂತರ, ಅಂದರೆ 1951ರಲ್ಲಿ ಭಾರತೀಯ ಪುರಾತತ್ವ ಇಲಾಖೆ ಈ ಇಡೀ ಸಂಕೀರ್ಣವನ್ನು ‘ರಾಷ್ಟ್ರೀಯ ಮಹತ್ವದ ಸಂರಕ್ಷಿತ ಸ್ಮಾರಕ’ ಎಂದು ಘೋಷಿಸಿ, ತನ್ನ ಸಂಪೂರ್ಣ ನಿಯಂತ್ರಣಕ್ಕೆ ತೆಗೆದುಕೊಂಡಿತು. ಆದರೂ, ಮಸೀದಿ-ದೇವಸ್ಥಾನ ಎಂಬ ವಿವಾದ ಹಾಗೆಯೇ ಮುಂದುವರಿಯಿತು.

ವಿವಾದ ತಾರಕಕ್ಕೇರಿದಾಗ, ಅದನ್ನು ಶಮನ ಮಾಡಲು ಪುರಾತತ್ವ ಇಲಾಖೆ 2003ರಲ್ಲಿ ಮಧ್ಯಂತರ ಮಾರ್ಗವೊಂದನ್ನು ರೂಪಿಸಿತು.

ಅದರ ಪ್ರಕಾರ, ವಿವಾದಿತ ಜಾಗದಲ್ಲಿ ಪ್ರತಿ ಮಂಗಳವಾರ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಪೂಜೆ ಮತ್ತು ಹವನ ಮಾಡಲು ಹಿಂದೂಗಳಿಗೆ ಅವಕಾಶ ನೀಡಿತು. ಪ್ರತಿ ಶುಕ್ರವಾರ ಮಧ್ಯಾಹ್ನ 1 ರಿಂದ 3 ಗಂಟೆಯವರೆಗೆ ನಮಾಝ್ ಮಾಡಲು ಮುಸ್ಲಿಮರಿಗೆ ಅವಕಾಶ ನೀಡಿತು. ಉಳಿದ ದಿನಗಳಲ್ಲಿ ಕೇವಲ ಒಂದು ರೂಪಾಯಿ ಟಿಕೆಟ್ ಇಟ್ಟು ಸಾರ್ವಜನಿಕ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿತ್ತು.

ಪುರಾತತ್ವ ಇಲಾಖೆಯ ಆದೇಶದ ಬಳಿಕ ಏನಾಯಿತು?

2003ರಲ್ಲಿ ಭಾರತೀಯ ಪುರಾತತ್ವ ಇಲಾಖೆ ನೀಡಿದ ಪೂಜಾ ಹಂಚಿಕೆ ಆದೇಶದ (ಮಂಗಳವಾರ ಹಿಂದೂಗಳಿಗೆ ಪೂಜೆ, ಶುಕ್ರವಾರ ಮುಸ್ಲಿಮರಿಗೆ ನಮಾಝ್) ಬಳಿಕ, ಧಾರ್ ಜಿಲ್ಲೆಯಲ್ಲಿ ತಾತ್ಕಾಲಿಕ ಶಾಂತಿ ನೆಲೆಸಿದರೂ ಕಾನೂನು ಹೋರಾಟ ಮತ್ತು ಸಾಮಾಜಿಕ ಉದ್ವಿಗ್ನತೆ ನಿರಂತರವಾಗಿ ಮುಂದುವರಿಯಿತು.

ಪುರಾತತ್ವ ಇಲಾಖೆಯ ಆದೇಶದ ಪ್ರಕಾರ ಹಿಂದೂ ಮತ್ತು ಮುಸ್ಲಿಮರಿಗೆ ದಿನಗಳನ್ನು ಹಂಚಲಾಗಿದ್ದರೂ, ಹಿಂದೂಗಳ ಪವಿತ್ರ ಹಬ್ಬ ‘ವಸಂತ ಪಂಚಮಿ’ ಶುಕ್ರವಾರ ಬಂದಾಗಲೆಲ್ಲಾ ತೀವ್ರ ವಿವಾದ ಸೃಷ್ಟಿಯಾಗುತ್ತಿತ್ತು.

2003, 2006, 2013, 2016 ಮತ್ತು 2026ರಲ್ಲಿ ವಸಂತ ಪಂಚಮಿ ಹಬ್ಬವು ಶುಕ್ರವಾರದಂದೇ ಬಂದಿತ್ತು. ಈ ಸಂದರ್ಭದಲ್ಲಿ ಹಿಂದೂ ಸಂಘಟನೆಗಳು ಆ ದಿನ ಇಡೀ ದಿನ ಪೂಜೆ ಮಾಡಲು ಪಟ್ಟು ಹಿಡಿದರೆ, ಮುಸ್ಲಿಮರು ನಮಾಝ್‌ಗಾಗಿ ಜಾಗ ಬಿಟ್ಟುಕೊಡುವಂತೆ ಒತ್ತಾಯಿಸುತ್ತಿದ್ದರು. ಇದರಿಂದಾಗಿ ಹಲವಾರು ಬಾರಿ ಧಾರ್ ಜಿಲ್ಲೆಯಲ್ಲಿ ಕರ್ಫ್ಯೂ, ಲಾಠಿಚಾರ್ಜ್ ಮತ್ತು ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು.

ಪುರಾತತ್ವ ಇಲಾಖೆಯ 2003ರ ಆದೇಶವನ್ನು ವಿರೋಧಿಸಿ ‘ಹಿಂದೂ ಫ್ರಂಟ್ ಫಾರ್ ಜಸ್ಟಿಸ್’ ಎಂಬ ಸಂಘಟನೆಯು 2022ರಲ್ಲಿ ಮಧ್ಯಪ್ರದೇಶ ಹೈಕೋರ್ಟ್‌ನಲ್ಲಿ ಹೊಸ ಅರ್ಜಿ ಸಲ್ಲಿಸಿತ್ತು. ಈ ಇಡೀ ಸಂಕೀರ್ಣವು ಹಿಂದೂ ದೇವಸ್ಥಾನವಾಗಿದ್ದು, ಮುಸ್ಲಿಮರಿಗೆ ನಮಾಝ್ ಮಾಡಲು ನೀಡಿರುವ ಆದೇಶವನ್ನು ರದ್ದುಗೊಳಿಸಬೇಕು ಮತ್ತು ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಎಂದು ಅದು ಕೋರಿತ್ತು.

ಹೈಕೋರ್ಟ್ ಅರ್ಜಿಯನ್ನು ಪುರಸ್ಕರಿಸಿ, ಇಡೀ ಸಂಕೀರ್ಣದ ಮೂಲ ಸ್ವರೂಪ ಪತ್ತೆಹಚ್ಚಲು ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ 2024 ಮಾರ್ಚ್‌ನಲ್ಲಿ ಪುರಾತತ್ವ ಇಲಾಖೆಗೆ ಆದೇಶಿಸಿತ್ತು.

ಪುರಾತತ್ವ ಇಲಾಖೆಯು ಜಿಪಿಆರ್ ತಂತ್ರಜ್ಞಾನದ ಮೂಲಕ 98 ದಿನಗಳ ಸಮೀಕ್ಷೆ ನಡೆಸಿ, ಜುಲೈ 2024ರಲ್ಲಿ 2,000ಕ್ಕೂ ಹೆಚ್ಚು ಪುಟಗಳ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಪ್ರಸ್ತುತ ಇರುವ ಮಸೀದಿಯಂತಹ ರಚನೆಯನ್ನು ಹಿಂದೂ ದೇವಾಲಯದ ಅವಶೇಷಗಳ ಮೇಲೆಯೇ ನಿರ್ಮಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು.

ಹೈಕೋರ್ಟ್ ತೀರ್ಪು

ಪುರಾತತ್ವ ಇಲಾಖೆಯ ಸಮೀಕ್ಷೆಯ ವರದಿಯ ಆಧಾರದ ಮೇಲೆ ಮಧ್ಯಪ್ರದೇಶ ಹೈಕೋರ್ಟ್ ಶುಕ್ರವಾರ (ಮೇ 15, 2026) ತೀರ್ಪು ನೀಡಿದೆ. 2003ರ ಆದೇಶದ ಮೂಲಕ ಪುರಾತತ್ವ ಇಲಾಖೆ ಮುಸ್ಲಿಮರಿಗೆ ಶುಕ್ರವಾರ ನಮಾಝ್ ಮಾಡಲು ನೀಡಿದ್ದ ಅನುಮತಿಯನ್ನು ನ್ಯಾಯಾಲಯ ಸಂಪೂರ್ಣವಾಗಿ ರದ್ದುಗೊಳಿಸಿದೆ.

ಇಡೀ ವಿವಾದಿತ ಸಂಕೀರ್ಣವು ‘ವಾಗ್ದೇವಿ (ಸರಸ್ವತಿ) ದೇವಸ್ಥಾನ’ ಎಂದು ನ್ಯಾಯಾಲಯ ಘೋಷಿಸಿದೆ. : ಲಂಡನ್‌ನ ಬ್ರಿಟಿಷ್ ಮ್ಯೂಸಿಯಂನಲ್ಲಿರುವ ಮೂಲ ವಾಗ್ದೇವಿ ವಿಗ್ರಹವನ್ನು ಭಾರತಕ್ಕೆ ಮರಳಿ ತರಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. 

ಹೀಗೆ, 2003ರಲ್ಲಿ ಪುರಾತತ್ವ ಇಲಾಖೆ ಜಾರಿಗೆ ತಂದಿದ್ದ ತಾತ್ಕಾಲಿಕ ‘ಹಂಚಿಕೆ ಸೂತ್ರ’ವು 23 ವರ್ಷಗಳ ಸುದೀರ್ಘ ಕಾನೂನು ಪ್ರಕ್ರಿಯೆಯ ನಂತರ ಸಂಪೂರ್ಣವಾಗಿ ರದ್ದಾಗಿದ್ದು, ಇಡೀ ಸಂಕೀರ್ಣದ ಮಾಲೀಕತ್ವವು ಈಗ ಹಿಂದೂ ಸಮುದಾಯಕ್ಕೆ ಲಭಿಸಿದೆ. 

ಮುಸ್ಲಿಂ ಸಮುದಾಯದ ಧಾರ್ಮಿಕ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ನ್ಯಾಯಾಲಯವು ಅಯೋಧ್ಯೆ ತೀರ್ಪಿನ ಮಾದರಿಯನ್ನು ಅನುಸರಿಸಿದೆ. ಮುಸ್ಲಿಂ ಸಮುದಾಯವು ಹೊಸದಾಗಿ ಮಸೀದಿ ನಿರ್ಮಿಸಿಕೊಳ್ಳಲು ಧಾರ್ ಜಿಲ್ಲೆಯಲ್ಲೇ ಬೇರೆ ಕಡೆ ಸೂಕ್ತವಾದ ಪರ್ಯಾಯ ಜಾಗವನ್ನು ಕೇಳಿದರೆ ಮಂಜೂರು ಮಾಡುವ ಕುರಿತು ಪರಿಗಣಿಸುವಂತೆ ಮಧ್ಯಪ್ರದೇಶ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. 

ಈ ತೀರ್ಪಿನ ವಿರುದ್ಧ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಗಳಿವೆ.

ಹಿಂದೂ-ಮುಸ್ಲಿಂ ಪಕ್ಷಕಾರರು ಹೇಳಿದ್ದೇನು?

“ಏಪ್ರಿಲ್ 7, 2003ರ ಪುರಾತತ್ವ ಇಲಾಖೆಯ ಆದೇಶವನ್ನು ಭಾಗಶಃ ರದ್ದುಗೊಳಿಸುವ ಮೂಲಕ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ” ಎಂದು ಹಿಂದೂ ಪಕ್ಷಕಾರರ ಪರ ವಕೀಲ ವಿಷ್ಣುಶಂಕರ್ ಜೈನ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

“ಭೋಜಶಾಲಾ ಸಂಕೀರ್ಣವು ರಾಜ ಭೋಜನಿಗೆ ಸೇರಿದ್ದು ಎಂದು ಗುರುತಿಸಿ, ಹಿಂದೂಗಳಿಗೆ ಪೂಜೆ ಸಲ್ಲಿಸುವ ಹಕ್ಕನ್ನು ಹೈಕೋರ್ಟ್ ನೀಡಿದೆ” ಎಂದು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಮುಸ್ಲಿಂ ಪಕ್ಷಕಾರರು ಮತ್ತು ಅವರ ಪರ ವಕೀಲರು ಹೈಕೋರ್ಟ್ ತೀರ್ಪನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ನ್ಯಾಯಾಲಯದ ಆದೇಶ ಹೊರಬಿದ್ದ ಬೆನ್ನಲ್ಲೇ ತಮ್ಮ ಅಸಮಾಧಾನ ಮತ್ತು ಮುಂದಿನ ಕಾನೂನು ನಡೆಯನ್ನು ಅವರು ಸ್ಪಷ್ಟಪಡಿಸಿದ್ದಾರೆ.

ಮುಸ್ಲಿಂ ಪಕ್ಷಕಾರರ ಪರವಾಗಿ ಧಾರ್ ನಗರದ ಖಾಜಿ ವಕಾರ್ ಸಾದಿಕ್ ಮತ್ತು ಅವರ ವಕೀಲರಾದ ಮುಷ್ತಾಕ್ ಅಹ್ಮದ್ ವಾರ್ಸಿ ಅವರು, “ನಾವು ಈ ತೀರ್ಪನ್ನು ಒಪ್ಪುವುದಿಲ್ಲ ಮತ್ತು ಇದನ್ನು ಪ್ರಶ್ನಿಸಿ ಆದಷ್ಟು ಬೇಗ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಘೋಷಿಸಿದ್ದಾರೆ. ಸುಪ್ರೀಂ ಕೋರ್ಟ್ ತಮ್ಮ ವಾದವನ್ನು ಆಲಿಸಿ ತಮಗೆ ಮತ್ತೆ ನಮಾಝ್ ಮಾಡಲು ಅನುಮತಿ ನೀಡುತ್ತದೆ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ. 

ಹೈಕೋರ್ಟ್ ಯಾವ ಪುರಾತತ್ವ ಇಲಾಖೆಯ ವರದಿಯನ್ನು ಆಧರಿಸಿ ತೀರ್ಪು ನೀಡಿದೆಯೋ, ಆ ಇಡೀ ಸಮೀಕ್ಷೆಯೇ ತಾರತಮ್ಯದಿಂದ ಕೂಡಿದೆ ಎಂದು ಮುಸ್ಲಿಂ ಪಕ್ಷಕಾರರು ಆರೋಪಿಸಿದ್ದಾರೆ.

“ಪುರಾತತ್ವ ಇಲಾಖೆ ನಡೆಸಿದ ವೈಜ್ಞಾನಿಕ ಸಮೀಕ್ಷೆ ಮತ್ತು ಸಿದ್ಧಪಡಿಸಿದ ವರದಿಯು ದೋಷಪೂರಿತವಾಗಿದೆ. ಅದು ಹಿಂದೂ ಅರ್ಜಿದಾರರ ವಾದವನ್ನು ಪುಷ್ಟೀಕರಿಸುವ ಉದ್ದೇಶದಿಂದಲೇ ಏಕಪಕ್ಷೀಯವಾಗಿ ತಯಾರಾಗಿದೆ” ಎಂದು ಮುಸ್ಲಿಂ ಸಂಘಟನೆಯಾದ ‘ಮೌಲಾನಾ ಕಮಾಲುದ್ದೀನ್ ವೆಲ್ಫೇರ್ ಸೊಸೈಟಿ’ ದೂರಿದೆ.

ಮುಸ್ಲಿಂ ಧಾರ್ಮಿಕ ಮುಖಂಡರು ಪ್ರತಿಕ್ರಿಯಿಸುತ್ತಾ, “ಹೈಕೋರ್ಟ್‌ನಲ್ಲಿ ನಮ್ಮ ಕಡೆಯ ವಾದಗಳು ಮತ್ತು ಪ್ರಮುಖ ಸಾಕ್ಷ್ಯಗಳನ್ನು ಸರಿಯಾಗಿ ಆಲಿಸಿಲ್ಲ ಅಥವಾ ಪರಿಗಣಿಸಿಲ್ಲ ಅನಿಸುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಇಂತಹ ಸಂಕೀರ್ಣವಾದ ಐತಿಹಾಸಿಕ ಮತ್ತು ವಿವಾದಿತ ಪ್ರಕರಣಗಳನ್ನು ಸಂವಿಧಾನದ ಆರ್ಟಿಕಲ್ 226ರ ಅಡಿಯಲ್ಲಿ (ನೇರವಾಗಿ ಹೈಕೋರ್ಟ್‌ನಲ್ಲಿ) ಇತ್ಯರ್ಥಪಡಿಸುವ ಬದಲು ಸಿವಿಲ್ ನ್ಯಾಯಾಲಯಕ್ಕೆ ಒಪ್ಪಿಸಬೇಕಿತ್ತು ಎಂಬುದು ಅವರ ವಾದವಾಗಿದೆ.

ಅಸಮಾಧಾನ ವ್ಯಕ್ತಪಡಿಸಿದ ಓವೈಸಿ

ಈ ತೀರ್ಪಿನ ಕುರಿತು ಎಐಎಂಐಎಂ ಮುಖ್ಯಸ್ಥ ಹಾಗೂ ಅಸಾದುದ್ದೀನ್ ಓವೈಸಿ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, “ಸುಪ್ರೀಂ ಕೋರ್ಟ್ ಈ ತೀರ್ಪನ್ನು ಸರಿಪಡಿಸಲಿದೆ ಎಂಬ ನಂಬಿಕೆ ಇದೆ” ಎಂದು ಹೇಳಿದ್ದಾರೆ. ಅಲ್ಲದೆ ದೇಶದಲ್ಲಿ ‘ಆರಾಧನಾ ಸ್ಥಳಗಳ ಕಾಯ್ದೆ 1991’ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸದಿದ್ದರೆ ಮುಸ್ಲಿಮರ ಧಾರ್ಮಿಕ ಸ್ಥಳಗಳಿಗೆ ರಕ್ಷಣೆ ಇಲ್ಲದಂತಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಮುಸ್ಲಿಂ ಸಮುದಾಯದ ಕೆಲವು ಮುಖಂಡರು ಭಿನ್ನ ನಿಲುವನ್ನು ತಳೆದಿದ್ದಾರೆ. ‘ಇಂಡಿಯನ್ ಸೂಫಿ ಫೌಂಡೇಶನ್’ ಅಧ್ಯಕ್ಷ ಕಶಿಶ್ ವಾರ್ಸಿ ಅವರಂತಹ ಕೆಲವು ನಾಯಕರು, “ನ್ಯಾಯಾಲಯದ ತೀರ್ಪನ್ನು ಗೌರವಿಸಿ ಎಲ್ಲರೂ ಶಾಂತಿಯುತವಾಗಿ ಒಪ್ಪಿಕೊಳ್ಳಬೇಕು. ಈ ಹಿಂದೆ ಬಾಬರಿ ಮಸೀದಿ ತೀರ್ಪನ್ನು ಒಪ್ಪಿಕೊಂಡಂತೆ ಇದನ್ನೂ ಒಪ್ಪಿ ವಿವಾದಕ್ಕೆ ಮುಕ್ತಾಯ ಹಾಡಬೇಕು. ಒಬ್ಬ ನಿಜವಾದ ಮುಸ್ಲಿಂ ವಿವಾದಿತ ಜಾಗದಲ್ಲಿ ನಮಾಝ್ ಮಾಡಲು ಇಷ್ಟಪಡುವುದಿಲ್ಲ” ಎಂದು ಹೇಳಿದ್ದಾರೆ.

 


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...