Homeಮುಖಪುಟಬಾಕಿ ಪ್ರಕರಣಗಳು, ತೀರ್ಪಿನ ಕುರಿತ ವಕೀಲರ ಅಭಿಪ್ರಾಯಗಳು ಬೇಸರ ತರಿಸಿದೆ: ಸಿಜೆಐ ಚಂದ್ರಚೂಡ್

ಬಾಕಿ ಪ್ರಕರಣಗಳು, ತೀರ್ಪಿನ ಕುರಿತ ವಕೀಲರ ಅಭಿಪ್ರಾಯಗಳು ಬೇಸರ ತರಿಸಿದೆ: ಸಿಜೆಐ ಚಂದ್ರಚೂಡ್

- Advertisement -
- Advertisement -

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಬಗ್ಗೆ ವಕೀಲರ ಪರಿಷತ್‌ ಸದಸ್ಯರು ಮಾತನಾಡುವುದಕ್ಕೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಶುಕ್ರವಾರ ಬೇಸರ ವ್ಯಕ್ತಪಡಿಸಿದ್ದಾರೆ.

ಬಾಂಬೆ ಹೈಕೋರ್ಟ್‌ನ ನಾಗಪುರ ಪೀಠದ ಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ 3 ದಿನಗಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮೊಟ್ಟ ಮೊದಲಿಗೆ ನೀವೆಲ್ಲಾ ನ್ಯಾಯಾಲಯದ ಅಧಿಕಾರಿಗಳು. ನ್ಯಾಯಾಲಯದ ಘನತೆ ಮತ್ತು ಸತ್ಯ ಎತ್ತಿ ಹಿಡಿಯುವುದು ನಿಮ್ಮ ಕೈಯಲ್ಲಿದೆ ಎಂದು ಕಿವಿಮಾತು ಹೇಳಿದರು.

ವಕೀಲರಿಗೂ ತಮ್ಮದೇ ಆದ ರಾಜಕೀಯ ಸೆಳೆತ ಮತ್ತು ನಂಬಿಕೆಗಳಿವೆ. ವಕೀಲರು ನ್ಯಾಯಾಲಯಗಳು ಮತ್ತು ಸಂವಿಧಾನವನ್ನು ಎಲ್ಲದಕ್ಕಿಂತ ಮಿಗಿಲಾಗಿ ಕಾಣಬೇಕು. ಸ್ವತಂತ್ರವಾದ ವಕೀಲರ ಪರಿಷತ್‌ ಕಾನೂನು ಸುವ್ಯವಸ್ಥೆ ಮತ್ತು ಸಾಂವಿಧಾನಿಕ ಆಡಳಿತವನ್ನು ರಕ್ಷಿಸುವ ನೈತಿಕ ಭದ್ರಕೋಟೆಯಾಗಿದೆ ಎಂದು ಹೇಳಿದರು.

ಇತ್ತೀಚೆಗೆ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್, ಬಾಂಡ್‌ಗಳ ಮಾಹಿತಿ ಚುನಾವಣಾ ಆಯೋಗಕ್ಕೆ ನೀಡುವಂತೆ ಎಸ್‌ಬಿಐಗೆ ಸೂಚಿಸಿತ್ತು. ಈ ನಡುವೆ ರಾಷ್ಟ್ರಪತಿಗೆ ಪತ್ರ ಬರೆದಿದ್ದ ಸುಪ್ರೀಂ ಕೋರ್ಟ್ ವಕೀಲರ ಸಂಘದ ಅಧ್ಯಕ್ಷ ಆದಿಷ್ ಅಗರ್ವಾಲ್, ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಮರು ಪರಿಶೀಲಿಸುವಂತೆ ನಿರ್ದೇಶನ ನೀಡಲು ಕೋರಿದ್ದರು.

ಈ ವಿಚಾರಕ್ಕೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ಆದಿಷ್ ಅಗರ್ವಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದೇ ಅದಿಷ್ ಅಗರ್ವಾಲ್, ಪ್ರತಿಪಕ್ಷಗಳು ನ್ಯಾಯಾಂಗದಲ್ಲಿ ಹಸ್ತಕ್ಷೇಪ ಮಾಡುತ್ತಿವೆ ಎಂದು ಸಿಜೆಐಗೆ ಪತ್ರ ಬರೆ ವಕೀಲರಲ್ಲಿ ಒಬ್ಬರು ಎಂಬುವುದು ಇಲ್ಲಿ ಗಮನಾರ್ಹ.

ಇದನ್ನೂ ಓದಿ: ಬಿಜೆಪಿಯ ಕೋಮುವಾದಿ ರಾಜಕೀಯ ರಾಜ್ಯದಲ್ಲಿ ಬೇರೂರಲು ಬಿಡುವುದಿಲ್ಲ: ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...