Homeಮುಖಪುಟಸರ್ಕಾರ ಬದಲಾಗುತ್ತಿದ್ದಂತೆ ದೇಶದ್ರೋಹ ಪ್ರಕರಣಗಳು ದಾಖಲಿಸುವ ಬಗ್ಗೆ ಸುಪ್ರೀಂ ಆತಂಕ

ಸರ್ಕಾರ ಬದಲಾಗುತ್ತಿದ್ದಂತೆ ದೇಶದ್ರೋಹ ಪ್ರಕರಣಗಳು ದಾಖಲಿಸುವ ಬಗ್ಗೆ ಸುಪ್ರೀಂ ಆತಂಕ

- Advertisement -
- Advertisement -

ದೇಶ, ರಾಜ್ಯದಲ್ಲಿ ಆಡಳಿತಗಳು ಬದಲಾಗುತ್ತಿದ್ದ ಹಾಗೆ ದೇಶದ್ರೋಹ ಪ್ರಕರಣಗಳನ್ನು ದಾಖಲಿಸುವುದು ಗೊಂದಲದ ಪ್ರವೃತ್ತಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಆತಂಕ ವ್ಯಕ್ತಪಡಿಸಿದೆ. ಈ ವೇಳೆ ಅಮಾನತುಗೊಂಡಿರುವ ಹಿರಿಯ ಐಪಿಎಸ್ ಅಧಿಕಾರಿಗೆ ಬಂಧನದ ವಿರುದ್ಧ ಜಾಮೀನು ನೀಡಿದೆ.

ಛತ್ತೀಸ್‌ಗಢ ಸರ್ಕಾರ ಅಮಾನತುಗೊಂಡಿರುವ ಹಿರಿಯ ಐಪಿಎಸ್ ಅಧಿಕಾರಿ ಗುರ್ಜಿಂದರ್ ಪಾಲ್ ಸಿಂಗ್ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ ಎರಡು ಕ್ರಿಮಿನಲ್ ಪ್ರಕರಣಗಳು ಮತ್ತು ಅಕ್ರಮ ಆಸ್ತಿ ಸಂಗ್ರಹಣೆಗಾಗಿ ಮತ್ತೊಂದು ಪ್ರಕರಣ ದಾಖಲಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ನ್ಯಾಯಪೀಠವು, ಅಮಾನತುಗೊಂಡ ಹಿರಿಯ ಐಪಿಎಸ್ ಅಧಿಕಾರಿ ಗುರ್ಜಿಂದರ್ ಪಾಲ್ ಸಿಂಗ್ ಅವರನ್ನು ಬಂಧಿಸದಂತೆ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದೆ. ಜೊತೆಗೆ ಪ್ರಕರಣಗಳ ತನಿಖೆಯಲ್ಲಿ ತನಿಖಾ ಏಜೆನ್ಸಿಗಳೊಂದಿಗೆ ಸಹಕರಿಸುವಂತೆ ಗುರ್ಜಿಂದರ್ ಪಾಲ್ ಸಿಂಗ್‌ ಅವರಿಗೆ ನಿರ್ದೇಶಿಸಿದೆ.

ಇದನ್ನೂ ಓದಿ: ಸಂಸದರು, ಶಾಸಕರ ವಿರುದ್ಧದ ತನಿಖೆ ವಿಳಂಬ: ತನಿಖಾ ಏಜೆನ್ಸಿಗಳಿಗೆ ಸುಪ್ರೀಂಕೋರ್ಟ್ ಛೀಮಾರಿ

“ಇದು ದೇಶದಲ್ಲಿ ಬಹಳ ಗೊಂದಲದ ಪ್ರವೃತ್ತಿಯಾಗಿದೆ. ಇದಕ್ಕೆ ಪೊಲೀಸ್ ಇಲಾಖೆಯೂ ಕಾರಣವಾಗಿದೆ. ಒಂದು ರಾಜಕೀಯ ಪಕ್ಷ ಅಧಿಕಾರದಲ್ಲಿದ್ದಾಗ, ಪೊಲೀಸ್ ಅಧಿಕಾರಿಗಳು ನಿರ್ದಿಷ್ಟ (ಆಡಳಿತ) ಪಕ್ಷದ ಪರವಾಗಿರುತ್ತಾರೆ. ನಂತರ ಮತ್ತೊಂದು ಹೊಸ ಪಕ್ಷ ಅಧಿಕಾರಕ್ಕೆ ಬಂದಾಗ, ಸರ್ಕಾರವು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತದೆ. ಇದನ್ನು ನಿಲ್ಲಿಸಬೇಕು” ಎಂದು ನ್ಯಾಯಪೀಠ ಹೇಳಿದೆ.

ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನೊಳಗೊಂಡ ಪೀಠವು ನಾಲ್ಕು ವಾರಗಳಲ್ಲಿ, ಐಪಿಎಸ್ ಅಧಿಕಾರಿ ಗುರ್ಜಿಂದರ್ ಪಾಲ್ ಸಿಂಗ್ ಪ್ರಕರಣದಲ್ಲಿ ಸಲ್ಲಿಸಲಾಗಿರುವ ಎರಡು ಪ್ರತ್ಯೇಕ ಅರ್ಜಿಗಳಿಗೆ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಜೊತೆಗೆ ಈ ಅವಧಿದಲ್ಲಿ ಪೊಲೀಸ್ ಅಧಿಕಾರಿ ಐಪಿಎಸ್ ಅಧಿಕಾರಿ ಗುರ್ಜಿಂದರ್ ಪಾಲ್ ಸಿಂಗ್ ಅವರನ್ನು ಬಂಧಿಸುವಂತಿಲ್ಲ ಎಂದು ಸೂಚಿಸಿದೆ.

ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿಯ ಪರವಾಗಿ ಹಿರಿಯ ವಕೀಲರಾದ ಎಫ್.ಎಸ್. ನಾರಿಮನ್ ಮತ್ತು ವಿಕಾಸ್ ಸಿಂಗ್ ಹಾಜರಿದ್ದರು. ಛತ್ತೀಸ್‌ಗಢ ರಾಜ್ಯ ಸರ್ಕಾರವನ್ನು ಹಿರಿಯ ವಕೀಲರಾದ ಮುಕುಲ್ ರೋಹ್ಟಗಿ ಮತ್ತು ರಕ್ಷ್ ದ್ವಿವೇದಿ ಪ್ರತಿನಿಧಿಸಿದ್ದರು.

ಕಾಂಗ್ರೆಸ್ ನೇತೃತ್ವದ ಛತ್ತೀಸ್‌ಗಢ ಸರ್ಕಾರವು ಐಪಿಎಸ್ ಅಧಿಕಾರಿ ಗುರ್ಜಿಂದರ್ ಪಾಲ್ ಸಿಂಗ್ ವಿರುದ್ಧ ದೇಶದ್ರೋಹ ಅಪರಾಧ ಮತ್ತು ಅಕ್ರಮ ಆಸ್ತಿ ಗಳಿಸಿದ ಎರಡು ಪ್ರಕರಣಗಳನ್ನು ದಾಖಲಿಸಿದೆ.


ಇದನ್ನೂ ಓದಿ: ಮಹಿಳೆಯರು ಎನ್‌ಡಿಎ ಪರೀಕ್ಷೆ ಬರೆಯಬಹುದು: ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...