Homeಮುಖಪುಟಹಿಂದಿ ಚಿತ್ರರಂಗದ ಹಿರಿಯ ನಟ ರಿಷಿ ಕಪೂರ್ ನಿಧನ

ಹಿಂದಿ ಚಿತ್ರರಂಗದ ಹಿರಿಯ ನಟ ರಿಷಿ ಕಪೂರ್ ನಿಧನ

- Advertisement -
- Advertisement -

ಬಾಲಿವುಡ್‌ನ ಹಿರಿಯ ನಟ ರಿಷಿ ಕಪೂರ್ ತಮ್ಮ 67 ನೇ ವಯಸ್ಸಿನಲ್ಲಿ ಮುಂಬೈನಲ್ಲಿ ನಿಧನರಾದರು. ಅವರು ಕ್ಯಾನ್ಸರ್‌ ರೋಗದಿಂದ ಬಳಲುತ್ತಿದ್ದು ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು.

ಬಾಬಿ ಮತ್ತು ಚಾಂದನಿ ಮುಂತಾದ ಚಿತ್ರಗಳಲ್ಲಿ ಕೆಲಸ ಮಾಡಿದ್ದ ಅವರಿಗೆ ಕ್ಯಾನ್ಸರ್ ನಿಂದ ನ್ಯೂಯಾರ್ಕ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು ಮತ್ತು ಕಳೆದ ವರ್ಷ ಮುಂಬೈಗೆ ಮರಳಿದ್ದರು.

ರಿಷಿ ಕಪೂರ್ ಅವರು ಕ್ಯಾನ್ಸರ್ ವಿರುದ್ಧ ಸುದೀರ್ಘ ಹೋರಾಟ ನಡೆಸಿದರು. ನಿನ್ನೆ, ಅವರ ಸಹೋದರ ರಣಧೀರ್ ಕಪೂರ್ “ಅವರು ಆಸ್ಪತ್ರೆಯಲ್ಲಿದ್ದಾರೆ. ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಮತ್ತು ಅವರಿಗೆ ಉಸಿರಾಟದ ತೊಂದರೆ ಇದೆ, ಆದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಈಗ ಸ್ಥಿರವಾಗಿದ್ದಾರೆ” ಎಂದು ಹೇಳಿದ್ದರು. ಆದರೆ ಇಂದು ಮುಂಜಾನೆಯೇ ಕಪೂರ್‌ ಇಹಲೋಕ ತ್ಯಜಿಸಿದ್ದಾರೆ.

ಕಪೂರ್‌ ಅವರಿಗೆ ಪತ್ನಿ ನೀತು ಕಪೂರ್, ಮಗ ರಣಬೀರ್ ಮತ್ತು ಮಗಳು ರೋಧಿಮಾ ಇದ್ದಾರೆ.


ಇದನ್ನೂ ಓದಿ: Irrfan Khan Passes Away: ಪ್ರಸಿದ್ಧ ಹಿಂದಿ ನಟ ಇರ್ಫಾನ್ ಖಾನ್ ಇನ್ನಿಲ್ಲ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...