Homeಕರ್ನಾಟಕಹಿರಿಯ ಪತ್ರಕರ್ತ, ಲೇಖಕ ಕಾಮರೂಪಿ (ಎಂ.ಎಸ್ ಪ್ರಭಾಕರ) ಇನ್ನಿಲ್ಲ

ಹಿರಿಯ ಪತ್ರಕರ್ತ, ಲೇಖಕ ಕಾಮರೂಪಿ (ಎಂ.ಎಸ್ ಪ್ರಭಾಕರ) ಇನ್ನಿಲ್ಲ

- Advertisement -
- Advertisement -

ಕಾಮರೂಪಿ ಕಾವ್ಯನಾಮದಲ್ಲಿ ಬರೆಯುತ್ತಿದ್ದ ಹಿರಿಯ ಪತ್ರಕರ್ತ, ಲೇಖಕ ಎಂ.ಎಸ್ ಪ್ರಭಾಕರ (87) ಅವರು ಇಂದು ನಿಧನ ಹೊಂದಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ 10 ಗಂಟೆ ಸಮಯಕ್ಕೆ ಕೊನೆಯುಸಿರೆಳೆದಿದ್ದಾರೆ. ಅವರ ಮೃತದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾನ ನೀಡಲಾಗುವುದು ಎನ್ನಲಾಗಿದೆ.

ಕೋಲಾರ ಜಿಲ್ಲೆಯರಾದ ಮೊಟ್ಣಹಳ್ಳಿ ಸೂರಪ್ಪ ಪ್ರಭಾಕರರವರು “ಕಾಮರೂಪಿ” ಎಂದೇ ನಾಡಿನ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡಿದ್ದರು. 8 ವರ್ಷಗಳ ಕಾಲ ಖ್ಯಾತ ‘ಎಕಾನಾಮಿಕ್ ಅಂಡ್ ಪೊಲಿಟಿಕಲ್ ವೀಕ್ಲಿ’ ವಾರಪತ್ರಿಕೆಯ ಸಹಾಯಕ ಸಂಪಾದಕರಾಗಿದ್ದ ಅವರು ಆನಂತರ ದಿ ಹಿಂದೂ ಪತ್ರಿಕೆಯಲ್ಲಿ ಈಶಾನ್ಯ ಭಾರತ ಮತ್ತು ದಕ್ಷಿಣ ಆಫ್ರಿಕಾದ ವಿಶೇ‍ಷ ಭಾತ್ಮೀದಾರರಾಗಿ ದಶಕಗಳ ಕಾಲ ಕೆಲಸ ನಿರ್ವಹಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಸ್ತಿತ್ಯಂತರಗಳನ್ನು ಅಲ್ಲಿಯೇ ಇದ್ದು ವರದಿ ಮಾಡಿದ ಹಿರಿಮೆ ಇವರದ್ದಾಗಿತ್ತು. ಕೇವಲ ಪತ್ರಕರ್ತರಾಗಿ ಮಾತ್ರವಲ್ಲದೆ ಲೇಖಕರಾಗಿ ಕಾಮರೂಪಿಯವರು ಗಮನ ಸೆಳೆದಿದ್ದರು. ‘ಒಂದು ತೊಲ ಪುನುಗು ಮತ್ತು ಇತರ ಕತೆಗಳು’ ಎಂಬ ಕಥಾ ಸಂಕಲನ ಮತ್ತು `ಕುದುರೆ ಮೊಟ್ಟೆ’ ಮತ್ತು ಅಂಜಿಕಿನ್ಯಾತಕಯ್ಯ ‘ ಎಂಬ ಕಿರು ಕಾದಂಬರಿಗಳಾದ ಬರೆದಿದ್ದಾರೆ. ಕಾಮರೂಪಿಯವರ ಕಥೆ, ಕಾದಂಬರಿ, ಕವನ, ಬರಹ, ಬ್ಲಾಗ್ ಬರಹಗಳನ್ನೊಳಗೊಂಡ ಕಾಮರೂಪಿ ಸಮಗ್ರ ಕೃತಿಯನ್ನು ಸಂಚಯ ಪುಸ್ತಕ ಪ್ರಕಾಶನ ಪ್ರಕಟಿಸಿದೆ.

ಇದನ್ನೂ ಓದಿ: ವಿಚಾರಕ್ರಾಂತಿಗೆ ಆಹ್ವಾನ: ಆಗ- ಈಗ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...