Homeಮುಖಪುಟವೆಟ್ರಿವೇಲ್ ಯಾತ್ರೆ: ಅನುಮತಿ ನಿರಾಕರಿಸಿದರೂ ಕೋಮುಪ್ರಚೋದನೆ ಆರಂಭಿಸಿದ ಬಿಜೆಪಿ!

ವೆಟ್ರಿವೇಲ್ ಯಾತ್ರೆ: ಅನುಮತಿ ನಿರಾಕರಿಸಿದರೂ ಕೋಮುಪ್ರಚೋದನೆ ಆರಂಭಿಸಿದ ಬಿಜೆಪಿ!

ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ನಗರಾಜನ್ ಮದ್ರಾಸ್ ಹೈಕೋರ್ಟ್‌ಗೆ, "15 ಕಾರುಗಳಲ್ಲಿ ಕೇವಲ 30 ಜನರು ಮಾತ್ರ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ" ಎಂದು ತಿಳಿಸಿದ್ದರು.

- Advertisement -
- Advertisement -

ಶುಕ್ರವಾರ ವೆಟ್ರಿವೇಲ್ ಯಾತ್ರೆಯನ್ನು ಒತ್ತಾಯಪೂರ್ವಕವಾಗಿ ಮಾಡಿದ್ದಕ್ಕಾಗಿ ಬಿಜೆಪಿಯ ತಮಿಳುನಾಡು ಘಟಕದ ಮುಖ್ಯಸ್ಥ ಎಲ್ ಮುರುಗನ್ ಮತ್ತು ಇತರರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದರು. ಅಧಿಕಾರಿಗಳಿಂದ ಯಾವುದೇ ಒಪ್ಪಿಗೆ ಇಲ್ಲದಿದ್ದರೂ ಬಿಜೆಪಿಯು ಇಂದು ವೆಟ್ರಿವೇಲ್ ಯಾತ್ರೆಯನ್ನು ಪ್ರಾರಂಭಿಸಿತು.

ಪಕ್ಷದ ಸದಸ್ಯರು ಪ್ರಾರ್ಥನೆ ಸಲ್ಲಿಸಲು ಚೆನ್ನೈನ ತಿರುವೋಟ್ರಿಯೂರಿನಲ್ಲಿರುವ ವಡಿವುಡೈ ಅಮ್ಮನ್ ದೇವಸ್ಥಾನಕ್ಕೆ ಭೇಟಿ ನೀಡುವ ನಿರೀಕ್ಷೆಯಿತ್ತು. ಮುರುಗನ್ ಸೇರಿದಂತೆ ಕೆಲವು ನಾಯಕರು ಮತ್ತು 200 ಕ್ಕೂ ಹೆಚ್ಚು ಜನರು ಕಾರು ಮತ್ತು ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿದ್ದು, ರಸ್ತೆಗಳಲ್ಲಿ ಸಾಕಷ್ಟು ಸಂಚಾರ ಮತ್ತು ಅವ್ಯವಸ್ಥೆ ಉಂಟಾಗಿತ್ತು.

ಇದನ್ನೂ ಓದಿ: ವೆಟ್ರಿವೇಲ್ ಯಾತ್ರೆ ನಡೆಸಲು ಬಿಜೆಪಿ ಕೋರಿದ್ದ ಅನುಮತಿ ತಿರಸ್ಕರಿಸಿದ ತಮಿಳುನಾಡು ಸರ್ಕಾರ!

ವೆಟ್ರಿವೇಲ್ ಯಾತ್ರೆ ಒಂದು ತಿಂಗಳ ಕಾಲ ನಡೆಯುವ ಮೆರವಣಿಗೆಯಾಗಿದ್ದು, ನವೆಂಬರ್ 6 ರಿಂದ ಡಿಸೆಂಬರ್ 6 ರವರೆಗೆ ತಿರುತ್ತಣಿ ದೇವಸ್ಥಾನದಿಂದ ತಮಿಳುನಾಡಿನ ತಿರುಚೆಂದೂರು ದೇವಸ್ಥಾನದವರೆಗೆ, ಸುಬ್ರಹ್ಮಣ್ಯ ಸ್ವಾಮಿಯ (ಮುರುಗ) ಒಟ್ಟು ಆರು ದೇವಸ್ಥಾನಗಳಿಗೆ ಭಕ್ತರು ಭೇಟಿ ನೀಡುತ್ತಾರೆ.

2021 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಹಿಂದೂ ಮತಗಳನ್ನು ಕ್ರೋಢೀಕರಿಸುವ ಪ್ರಯತ್ನವಾಗಿ ಬಿಜೆಪಿ ಈ ಪ್ರಯತ್ನ ಮಾಡುತ್ತಿದೆ ಎಂದು ಹಲವರು ಟೀಕಿಸಿದ್ದಾರೆ.

ಶುಕ್ರವಾರ ಮತ್ತು ಇಂದು ನಡೆದ ವೆಟ್ರಿವೇಲ್ ಯಾತ್ರೆಯಲ್ಲಿ ಭಾಗವಹಿಸಿದ ಹಲವರು ಮಾಸ್ಕ್‌ಗಳನ್ನು ಧರಿಸಿರುವುದಿಲ್ಲ ಮತ್ತು ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸಿದ್ದಾರೆ.

ಇದನ್ನೂ ಓದಿ: ಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

ಸ್ಮಿತ ಟಿ.ಕೆ ಎಂಬುವವರು ವೀಡಿಯೋವೊಂದನ್ನು ಟ್ವೀಟ್ ಮಾಡಿ, “ವೆಟ್ರಿವೇಲ್‌ ಯಾತ್ರೆಯಲ್ಲಿ 30 ಜನರು 15 ಕಾರುಗಳಲ್ಲಿ ಭಾಗವಹಿಸುತ್ತೇವೆ ಎಂದು ಬಿಜೆಪಿಯ ರಾಜ್ಯ ಕಾರ್ಯದರ್ಶಿ ಮದ್ರಾಸ್‌ ಹೈಕೋರ್ಟ್‌ಗೆ ಹೇಳಿದ್ದರು. ನೀವು ಈ ಗುಂಪನ್ನು ನೋಡಿ. ಮಾಸ್ಕ್‌ಗಳು ಎಲ್ಲಿ? ಸಾಮಾಜಿಕ ಅಂತರ ಎಲ್ಲಿ? ನಾವು ಸಾಂಕ್ರಾಮಿಕ ಸಮಯದಲ್ಲಿ ವಾಸಿಸುತ್ತಿದ್ದೇವೆ ಎಂಬುದು ನೆನಪಿದೆಯೇ?” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಕೊರೊನಾ ವೈರಸ್ ಸಾಂಕ್ರಾಮಿಕ ಮತ್ತು ರಾಜ್ಯದ ಜನರ ಹಿತದೃಷ್ಟಿಯಿಂದ ಎಐಎಡಿಎಂಕೆ ಆಡಳಿತದಲ್ಲಿರುವ ತಮಿಳುನಾಡು ಸರ್ಕಾರ ಗುರುವಾರ ಮೆರವಣಿಗೆಗೆ ಅನುಮತಿ ನಿರಾಕರಿಸಿತ್ತು.

ಯಾತ್ರೆ ವಿರುದ್ಧ ಮದ್ರಾಸ್ ಹೈಕೋರ್ಟ್‌ನಲ್ಲಿ ಹಲವಾರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಇವು ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಗಳನ್ನು ಸೃಷ್ಟಿಸುವುದರ ಜೊತೆಗೆ ಕೊರೊನಾ ಹರಡುವಿಕೆಯನ್ನು ಹೆಚ್ಚಿಸುವಲ್ಲಿ ಮೆರವಣಿಗೆ ಅಪಾಯವನ್ನುಂಟುಮಾಡುತ್ತದೆ ಎಂಬ ವಿಷಯವನ್ನು ಎತ್ತಿದ್ದವು.

ಇದನ್ನೂ ಓದಿ: ವಿದ್ಯಾರ್ಥಿ ಮಾರ್ಗದರ್ಶಿ: ಪಿಯುಸಿ ನಂತರ ಮುಂದೇನು?: ಆಯ್ಕೆಗಳ ಬಗ್ಗೆ ಸ್ಪಷ್ಟತೆ ಇರಲಿ; ಗೊಂದಲ ಬೇಡ

ಶನಿವಾರ ಬಿಜೆಪಿ ಸಲ್ಲಿಸಿದ ತುರ್ತು ರಿಟ್ ಅರ್ಜಿಯ ವಿಚಾರಣೆಗೆ ವಿಶೇಷ ಸಭೆಯ ಸಂದರ್ಭದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ನಗರಾಜನ್ ಮದ್ರಾಸ್ ಹೈಕೋರ್ಟ್‌ಗೆ, “15 ಕಾರುಗಳಲ್ಲಿ ಕೇವಲ 30 ಜನರು ಮಾತ್ರ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ಹೇಳಿದ್ದರು.

ಇದುವರೆಗೂ ತಮಿಳುನಾಡಿನಲ್ಲಿ ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುತ್ತಿರಲಿಲ್ಲ. ಆದರೆ ಈಗ ಬಿಜೆಪಿ ಅದನ್ನೂ ಮಾಡುತ್ತಿದೆ. ಈ ಮೂಲಕ ತನ್ನ ನೀಚ ರಾಜಕೀಯ ದಾಳವನ್ನು ಬಳಸಿಕೊಳ್ಳುತ್ತಿದೆ.


ಇದನ್ನೂ ಓದಿ: ‍ಶಾಲೆ ಪುನರಾರಂಭದ ಬಗ್ಗೆ ತೀರ್ಮಾನವಾಗಿಲ್ಲ- ಸಚಿವ ಸುರೇಶ್ ಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...