Homeಮುಖಪುಟಬಿಲ್ಕಿಸ್ ಬಾನೊ ಅತ್ಯಾಚಾರ ಅಪರಾಧಿಗಳಿಗೆ ಹಾರ ಹಾಕಿ ಸ್ವಾಗತಿಸಿದ BJP ಬೆಂಬಲಿತ ಸಂಘಟನೆ VHP

ಬಿಲ್ಕಿಸ್ ಬಾನೊ ಅತ್ಯಾಚಾರ ಅಪರಾಧಿಗಳಿಗೆ ಹಾರ ಹಾಕಿ ಸ್ವಾಗತಿಸಿದ BJP ಬೆಂಬಲಿತ ಸಂಘಟನೆ VHP

- Advertisement -
- Advertisement -

ಬಿಲ್ಕಿಸ್‌ ಬಾನೊ ಅತ್ಯಾಚಾರ ಪ್ರಕರಣದಲ್ಲಿ ಗುಜರಾತ್ ಸರ್ಕಾರದ ಕ್ಷಮಾದಾನ ನೀತಿಯಡಿ ಜೈಲಿನಿಂದ ಬಿಡುಗಡೆಗೊಂಡ 11 ಅಪರಾಧಿಗಳನ್ನು ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಯಾದ ವಿಎಚ್‌ಪಿ ಕಚೇರಿಯಲ್ಲಿ ಹೂಮಾಲೆ ಹಾಕಿ ಸ್ವಾಗತಿಸಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

2002 ರ ಗೋಧ್ರಾ ನಂತರದ ನಡೆದ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾದ ಎಲ್ಲಾ 11 ಅಪರಾಧಿಗಳು ಗುಜರಾತ್ ಸರ್ಕಾರವು ತನ್ನ ಕ್ಷಮಾದಾನ ನೀತಿಯ ಅಡಿಯಲ್ಲಿ ಬಿಡುಗಡೆಗೆ ಅವಕಾಶ ನೀಡಿದ ನಂತರ, ಅಪರಾಧಿಗಳು ಗೋಧ್ರಾ ಉಪ ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

11 ಆರೋಪಿಗಳಾದ ರಾಧೇಶ್ಯಾಮ್ ಶಾ, ಜಸ್ವಂತ್ ಚತುರ್ಭಾಯಿ ನಾಯ್, ಕೇಶುಭಾಯಿ ವಡಾನಿಯಾ, ಬಕಾಭಾಯಿ ವಡಾನಿಯಾ, ರಾಜಿಭಾಯಿ ಸೋನಿ, ರಮೇಶ್‌ಭಾಯ್ ಚೌಹಾಣ್, ಶೈಲೇಶ್‌ಭಾಯ್ ಭಟ್, ಬಿಪಿನ್ ಚಂದ್ರ ಜೋಶಿ, ಗೋವಿಂದಭಾಯ್ ನಾಯ್, ಮಿತೇಶ್ ಭಟ್, ಪ್ರದೀಪ್ ಮೋಧಿಯಾ ಸೋಮವಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.

ಜನವರಿ 21, 2008 ರಂದು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು ಬಿಲ್ಕಿಸ್ ಬಾನೊ ಅವರ ಸಾಮೂಹಿಕ ಅತ್ಯಾಚಾರ ಮತ್ತು ಅವರ ಕುಟುಂಬದ ಏಳು ಸದಸ್ಯರ ಹತ್ಯೆಯ ಆರೋಪದ ಮೇಲೆ ಹನ್ನೊಂದು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿಯಿತು.

ಇದನ್ನೂ ಓದಿ: ಬಿಲ್ಕಿಸ್‌ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣ; ಎಲ್ಲ ಅಪರಾಧಿಗಳಿಗೆ ಕ್ಷಮೆ ನೀಡಿ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರ!

ಅಪರಾಧಿಗಳು 15 ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಇದ್ದರು. ಅವರಲ್ಲಿ ಒಬ್ಬ ತನ್ನ ಅವಧಿಪೂರ್ವ ಬಿಡುಗಡೆಗಾಗಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು.

ಅಪರಾಧಿಗಳ ಶಿಕ್ಷೆಯ ವಿನಾಯತಿ ವಿಷಯವನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಈ ಹಿನ್ನಲೆಯಲ್ಲಿ ಸರ್ಕಾರವು ಸಮಿತಿಯನ್ನು ರಚಿಸಿದೆ ಎಂದು  ಸಮಿತಿಯ ನೇತೃತ್ವ ವಹಿಸಿರುವ ಪಂಚಮಹಲ್ ಜಿಲ್ಲಾಧಿಕಾರಿ ಸುಜಲ್ ಮಾಯಾತ್ರಾ ಅವರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಈ ಬಿ.ಜೆ.ಪಿ., ವಿ.ಹೆಚ್.ಪಿ.ಗಳಿಗೆ ಮಹಿಳೆಯರ ಮೇಲೆ ಕಿಂಚಿತ್ತೂ ಗೌರವ ಇಲ್ಲ ಎಂಬುದು ಸಾಬೀತಾಗಿದೆ.

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...