Homeಮುಖಪುಟಭಗವದ್ಗೀತೆಗೆ ರಾಷ್ಟ್ರೀಯ ಗ್ರಂಥದ ಸ್ಥಾನಮಾನ ನೀಡಿ: ವಿಎಚ್‌ಪಿ ಆಗ್ರಹ

ಭಗವದ್ಗೀತೆಗೆ ರಾಷ್ಟ್ರೀಯ ಗ್ರಂಥದ ಸ್ಥಾನಮಾನ ನೀಡಿ: ವಿಎಚ್‌ಪಿ ಆಗ್ರಹ

- Advertisement -
- Advertisement -

ಭಗವದ್ಗೀತೆಗೆ ರಾಷ್ಟ್ರೀಯ ಪುಸ್ತಕದ ಸ್ಥಾನಮಾನವನ್ನು ನೀಡುವಂತೆ ಮತ್ತು ಶಾಲಾ ಪಠ್ಯಕ್ರಮದಲ್ಲಿ ಅದನ್ನು ಕಡ್ಡಾಯಗೊಳಿಸುವಂತೆ ಸರ್ಕಾರದ ಮನವೊಲಿಸಲು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮುಂದಾಗಿದೆ.

“15 ಸಂಸದರ ನಿಯೋಗವು ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ, ಭಗವದ್ಗೀತೆಗೆ ರಾಷ್ಟ್ರೀಯ ಪುಸ್ತಕದ ಸ್ಥಾನಮಾನ ನೀಡುವಂತೆ ಮತ್ತು ಶಾಲಾ ಪಠ್ಯಕ್ರಮದಲ್ಲಿ ಬದಲಾವಣೆ ಮಾಡುಂತೆ ಪ್ರಸ್ತಾವನೆ ಸಲ್ಲಿಸಲಿದೆ ಎಂದು ವಿಎಚ್‌ಪಿಯ ರಾಷ್ಟ್ರೀಯ ಕಾರ್ಯದರ್ಶಿ ರಾಧಾ ಕೃಷ್ಣ ಮನೋಡಿ ಗುರುವಾರ ಹೇಳಿದ್ದಾರೆ.

“ವಿಶ್ವ ಗೀತ ಸಂಸ್ಥಾನವು ಸಮಾಜಕ್ಕೆ ಬೌದ್ಧಿಕ ಸಾಮರ್ಥ್ಯವನ್ನು ಒದಗಿಸುವಲ್ಲಿ ಗೀತೆಯ ಉಪಯುಕ್ತತೆಯ ಬಗ್ಗೆ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸುತ್ತದೆ. ನಾವು ಭಗವದ್ಗೀತೆಗೆ ಮನ್ನಣೆ ಪಡೆಯುವ ಸಲುವಾಗಿ ಪ್ರಮುಖ ಅಂಶಗಳ ಕುರಿತು ವ್ಯಾಪಕ ಚರ್ಚೆ ನಡೆಸಲು ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಅವರಿಂದ ಸಮಯ ಕೋರಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ಶಿಕ್ಷಕರಿಗೆ ಸಾಕಷ್ಟು ಸಂಭಾವನೆ ಪಾವತಿಸಿದರೂ ಶಿಕ್ಷಕರಲ್ಲಿ ಕರ್ತವ್ಯ ಪ್ರಜ್ಞೆಯ ಕೊರತೆಯು ಕಳವಳಕ್ಕೆ ಕಾರಣವಾಗಿದೆ ಎಂದು ವಿಶ್ವ ಗೀತಾ ಪ್ರತಿಷ್ಠಾನದ ಸಂಸ್ಥಾಪಕ ಹೇಳಿದ್ದಾರೆ.

“ನೈತಿಕ ಮೌಲ್ಯಗಳ ಕುಸಿತ ಮತ್ತು ಶಿಕ್ಷಣದಲ್ಲಿ ಇದೇ ರೀತಿಯ ಪ್ರವೃತ್ತಿಯಿಂದಾಗಿ ಭಾರತದ ಸಂಘಟಿತ ಬೌದ್ಧಿಕ ಪರಂಪರೆಗೆ ಅವಮಾನವಾಗಿದೆ. ಶಿಕ್ಷಕರ ತರಬೇತಿಯಲ್ಲಿ ಗೀತೆಯನ್ನು ಕಡ್ಡಾಯಗೊಳಿಸಬೇಕು ಇದರಿಂದ ವಿದ್ಯಾರ್ಥಿಗಳಿಗೆ ಅವರ ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಲು ಸಹಾಯವಾಗುತ್ತದೆ ಎಂದು ಮನೋಡಿ ಹೇಳಿದ್ದಾರೆ.

ಪ್ರತಿಯೊಬ್ಬ ಶಿಕ್ಷಕರು ಗೀತಾದ ಅಧ್ಯಾಯಗಳನ್ನು ಅಧ್ಯಯನ ಮಾಡಬೇಕು ಮತ್ತು ವಿದ್ಯಾರ್ಥಿಗಳಿಗೆ ಅದರ ಪಾಠಗಳನ್ನು ನೀಡಬೇಕು ಎಂದು ಹೇಳಿದರು. ಅಧಿಕಾರಿಗಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಲು ಸಹಾಯ ಮಾಡಲು ಪ್ರತಿ ಸರ್ಕಾರಿ ಇಲಾಖೆಯಲ್ಲಿ ಗೀತಾದ ಸಾಪ್ತಾಹಿಕ ಪಠಣಗಳನ್ನು ಆಯೋಜಿಸಬೇಕೆಂದು ವಿಎಚ್‌ಪಿ ನಾಯಕ  ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಗೋಮಾಂಸ ತಿನ್ನುವವರ ಡಿಎನ್‌ಎ ನಮ್ಮಲಿಲ್ಲ- RSS ಮುಖ್ಯಸ್ಥರ ಹೇಳಿಕೆಗೆ ವಿಎಚ್‌ಪಿ ಸದಸ್ಯೆ ಸಾಧ್ವಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...