Homeಮುಖಪುಟಗಾರ್ಬಾ ಕಾರ್ಯಕ್ರಮಗಳಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ಎಂಬ ವಿಹೆಚ್‌ಪಿ ಫರ್ಮಾನು ಹಿಂಸೆಗೆ ಆಹ್ವಾನ: ಕೇಂದ್ರ ಸಚಿವ...

ಗಾರ್ಬಾ ಕಾರ್ಯಕ್ರಮಗಳಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ಎಂಬ ವಿಹೆಚ್‌ಪಿ ಫರ್ಮಾನು ಹಿಂಸೆಗೆ ಆಹ್ವಾನ: ಕೇಂದ್ರ ಸಚಿವ ಅಠಾವಳೆ

- Advertisement -
- Advertisement -

ನವರಾತ್ರಿಯ ‘ಗಾರ್ಬಾ’ ಕಾರ್ಯಕ್ರಮಗಳಿಗೆ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು ಎಂಬ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಫರ್ಮಾನುಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಭಾನುವಾರ (ಸೆ.21) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಅಂತಹ ಕರೆಗಳು ‘ಹಿಂಸೆಯನ್ನು ಆಹ್ವಾನಿಸಿದಂತೆ” ಎಂದು ಹೇಳಿದ್ದಾರೆ.

ನವರಾತ್ರಿಯು ಸಾಂಪ್ರದಾಯಿಕ ಆಧ್ಯಾತ್ಮಿಕ ಗಾರ್ಬಾ ನೃತ್ಯದೊಂದಿಗೆ ದಾಂಡಿಯಾ (ವರ್ಣರಂಜಿತ ಕೋಲುಗಳ ಹೊಡೆತ) ಪ್ರದರ್ಶನದೊಂದಿಗೆ ಗುರುತಿಸಲ್ಪಟ್ಟಿದೆ. ಇದರಲ್ಲಿ ಜೋಡಿಗಳು ವೃತ್ತಾಕಾರವಾಗಿ ನೃತ್ಯ ಮಾಡುತ್ತಾರೆ, ಈ ವರ್ಷದ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 1 ರವರೆಗೆ ಇದನ್ನು ಆಚರಿಸಲಾಗುತ್ತದೆ.

‘ಗಾರ್ಬಾ’ ಕಾರ್ಯಕ್ರಮಗಳಿಗೆ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಶನಿವಾರ (ಸೆ.20) ವಿಎಚ್‌ಪಿ ಹೇಳಿದೆ. ‘ಲವ್ ಜಿಹಾದ್’ ತಪ್ಪಿಸಲು ಪ್ರವೇಶ ಪಡೆಯುವವರ ಆಧಾರ್ ಕಾರ್ಡ್ ಅನ್ನು ಪರಿಶೀಲಿಸುವಂತೆ ಆಯೋಜಕರಿಗೆ ಸಲಹೆ ನೀಡಿದೆ.

ಗಾರ್ಬಾ ನೃತ್ಯದ ಸಮಯದಲ್ಲಿ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸಬೇಕು ಎಂದು ವಿಎಚ್‌ಪಿ ನಾಯಕರೊಬ್ಬರು ಹೇಳಿದ್ದು, ಗಾರ್ಬಾ ಕೇವಲ ನೃತ್ಯವೋ, ಸಾಂಸ್ಕೃತಿಕ ಕಾರ್ಯಕ್ರಮವೋ ಅಲ್ಲ. ಅದೊಂದು ಪವಿತ್ರ ಪೂಜೆ ಎಂದಿದ್ದಾರೆ.

ವಿಎಚ್‌ಪಿಯ ಸಲಹೆಗೆ ಎಕ್ಸ್‌ ಪೋಸ್ಟ್‌ ಮೂಲಕ ಆಕ್ಷೇಪ ವ್ಯಕ್ತಪಡಿಸಿರುವ ರಾಮದಾಸ್ ಅಠಾವಳೆ, “ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಗಾರ್ಬಾಗೆ ಯಾರು ಹೋಗಬೇಕು, ಯಾರು ಹೋಗಬಾರದು ಎಂದು ನಿರ್ಧರಿಸಲು ವಿಶ್ವ ಹಿಂದೂ ಪರಿಷತ್ ಯಾರು? ಈ ಸಲಹೆಯು ಕೇವಲ ಸಂಘಟಕರಿಗೆ ಮಾತ್ರ ಸೀಮಿತವಾಗಿಲ್ಲ. ಬದಲಿಗೆ, ಕೆಲವು ಮೂಲಭೂತವಾದಿ ಶಕ್ತಿಗಳಿಗೆ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಲು ಹಾಗೂ ಬಲವನ್ನು ಪ್ರಯೋಗಿಸಲು ನೀಡಿರುವ ಮುಕ್ತ ಆಹ್ವಾನವಾಗಿದೆ” ಎಂದು ಬರೆದುಕೊಂಡಿದ್ದಾರೆ.

“ಈ ಸಲಹೆಯಿಂದಾಗಿ ನವರಾತ್ರಿಯ ಸಮಯದಲ್ಲಿ ದೇಶದಲ್ಲಿ ಎಲ್ಲಿಯಾದರೂ ಯಾವುದಾದರು ಘರ್ಷಣೆಗಳು, ಹಲ್ಲೆಗಳು ಅಥವಾ ಧಾರ್ಮಿಕ ಸಂಘರ್ಷಗಳು ಸಂಭವಿಸಿದಲ್ಲಿ, ಸಂಪೂರ್ಣ ಜವಾಬ್ದಾರಿ ವಿಎಚ್‌ಪಿ ಮತ್ತು ಅದರ ಸಂಬಂಧಿತ ಸಂಸ್ಥೆಗಳ ಮೇಲಿರುತ್ತದೆ” ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆಯ ರಾಜ್ಯ ಸಚಿವ ಹೇಳಿದ್ದಾರೆ.

ಇಂತಹ ನಡೆಗಳು ಭಾರತದ ಏಕತೆ, ವೈವಿಧ್ಯತೆ ಮತ್ತು ಧಾರ್ಮಿಕ ಸಹಿಷ್ಣುತೆಯ ಹೃದಯಭಾಗಕ್ಕೆ ಹೊಡೆತ ನೀಡುತ್ತವೆ ಎಂದಿದ್ದಾರೆ.

“ನವರಾತ್ರಿ ಪೂಜೆ ಮತ್ತು ಸಂತೋಷದ ಹಬ್ಬವಾಗಿದ್ದು, ಅದನ್ನು ದ್ವೇಷ ಮತ್ತು ಅನುಮಾನದ ವೇದಿಕೆಯನ್ನಾಗಿ ಪರಿವರ್ತಿಸುವ ಪ್ರಯತ್ನ ನಡೆಯುತ್ತಿದೆ, ಇದು ಅತ್ಯಂತ ಖಂಡನೀಯ” ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಮುಖ್ಯಸ್ಥ ಕಿಡಿಕಾರಿದ್ದಾರೆ.

ಸಂವಿಧಾನವು 14, 15 ಮತ್ತು 25 ನೇ ವಿಧಿಗಳ ಅಡಿಯಲ್ಲಿ ಸಮಾನತೆ ಮತ್ತು ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.

“ಯಾರು ಹಬ್ಬವನ್ನು ಆಚರಿಸಬೇಕೆಂದು ಯಾವುದೇ ಸಂಸ್ಥೆ ನಿರ್ಧರಿಸಲು ಸಾಧ್ಯವಿಲ್ಲ. ಗಾರ್ಬಾ ಕೇವಲ ಧಾರ್ಮಿಕ ಸಂಪ್ರದಾಯವಲ್ಲ, ಸಂಗೀತ, ನೃತ್ಯ ಮತ್ತು ಸಾಮಾಜಿಕ ಸಾಮರಸ್ಯದ ಆಚರಣೆಯೂ ಆಗಿದೆ. ಒಂದು ಸಿದ್ಧಾಂತದೊಂದಿಗೆ ಅದನ್ನು ಏಕಸ್ವಾಮ್ಯಗೊಳಿಸಲು ಪ್ರಯತ್ನಿಸುವುದು ಅನ್ಯಾಯ ಮತ್ತು ಪ್ರತಿಗಾಮಿ” ಎಂದು ಕೇಂದ್ರ ಸಚಿವ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನವರಾತ್ರಿಯ ಸಮಯದಲ್ಲಿ ಆಯೋಜಕರು ಮತ್ತು ಭಾಗವಹಿಸುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕೆಂದು ಅಠಾವಳೆ ಸರ್ಕಾರ ಮತ್ತು ಆಡಳಿತವನ್ನು ಒತ್ತಾಯಿಸಿದ್ದಾರೆ.

“ಬಲವಂತ, ಗುರುತಿನ ಪರಿಶೀಲನೆ ಅಥವಾ ಧಾರ್ಮಿಕ ತಾರತಮ್ಯದ ಯಾವುದೇ ಪ್ರಯತ್ನಗಳನ್ನು ಕಾನೂನಿನ ಅಡಿಯಲ್ಲಿ ಕಟ್ಟುನಿಟ್ಟಾಗಿ ನಿಲ್ಲಿಸಬೇಕು. ನವರಾತ್ರಿ ಎಲ್ಲರಿಗೂ ಸೇರಿದ್ದು – ಅದರ ಸಾರವು ಭಾಗವಹಿಸುವಿಕೆ ಮತ್ತು ಶಾಂತಿಯಲ್ಲಿದೆ, ಹೊರಗಿಡುವಿಕೆಯಲ್ಲಿ ಅಲ್ಲ” ಎಂದು ತಿಳಿಸಿದ್ದಾರೆ.

ಇಂದಿನ ಯುವ ಪೀಳಿಗೆ ಪ್ರಗತಿ, ಒಳಗೊಳ್ಳುವಿಕೆ ಮತ್ತು ಆಚರಣೆಯನ್ನು ಬಯಸುತ್ತಿದೆಯೇ ಹೊರತು “ದ್ವೇಷ ಅಥವಾ ಬೆದರಿಕೆಯ ರಾಜಕೀಯವಲ್ಲ” ಎಂದು ಅವರು ಹೇಳಿದ್ದಾರೆ.

ಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ ಕ್ರಮಕ್ಕೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...