Homeಮುಖಪುಟಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಆರೋಪಗಳನ್ನು ರೂಪಿಸಲು ಸಂತ್ರಸ್ತ ವ್ಯಕ್ತಿಯ ಹೇಳಿಕೆ ಸಾಕು : ಕೇರಳ ಹೈಕೋರ್ಟ್

ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಆರೋಪಗಳನ್ನು ರೂಪಿಸಲು ಸಂತ್ರಸ್ತ ವ್ಯಕ್ತಿಯ ಹೇಳಿಕೆ ಸಾಕು : ಕೇರಳ ಹೈಕೋರ್ಟ್

- Advertisement -
- Advertisement -

ಸಾಕ್ಷಿಗಳ ಹೇಳಿಕೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 2018 ರ ಸೆಕ್ಷನ್ 3(1)(ಆರ್) ಮತ್ತು 3(1)(ಎಸ್‌) ಅಡಿಯಲ್ಲಿ ಅಪರಾಧದ ಅಂಶಗಳನ್ನು ಬಹಿರಂಗಪಡಿಸುವುದಿಲ್ಲ ಎಂಬ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತಗೊಳಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ.

ಸಂತ್ರಸ್ತ ವ್ಯಕ್ತಿಯ ಹೇಳಿಕೆಯು ಮೇಲ್ನೋಟಕ್ಕೆ ಅಪರಾಧವನ್ನು ಬಹಿರಂಗಪಡಿಸಿದರೆ, ಆರೋಪ ರೂಪಿಸಲು ಅದು ಸಾಕಾಗುತ್ತದೆ ಎಂದು ನ್ಯಾಯಮೂರ್ತಿ ಎ. ಬದ್ರುದ್ದೀನ್ ಸ್ಪಷ್ಟಪಡಿಸಿದ್ದಾರೆ.

ಕಾನೂನಿಗೆ ಬಹು ಸಾಕ್ಷಿಗಳ ಅಗತ್ಯವಿಲ್ಲ ಮತ್ತು ಸಂಪೂರ್ಣ ವಿಶ್ವಾಸಾರ್ಹ ಏಕೈಕ ಸಾಕ್ಷಿಯ ಸಾಕ್ಷ್ಯವು ಸಾಕಾಗುತ್ತದೆ ಎಂದು ಹೇಳಿದ ನ್ಯಾಯಾಲಯವು, ಸಾಕ್ಷಿಗಳ ಹೇಳಿಕೆಗಳು ಪ್ರಾಸಿಕ್ಯೂಷನ್ ಪ್ರಕರಣವನ್ನು ಬೆಂಬಲಿಸದ ಕಾರಣ ತಾನು ಬಿಡುಗಡೆಗೆ ಅರ್ಹನಾಗಿದ್ದೇನೆ ಎಂಬ ಮೇಲ್ಮನವಿದಾರನ ವಾದವನ್ನು ತಿರಸ್ಕರಿಸಿದೆ.

ಸೆಕ್ಷನ್ 3(1)(ಆರ್) ಇತರ ಸಮುದಾಯದವರಿಂದ ಎಸ್‌ಸಿ/ಎಸ್‌ಟಿ ಸಮುದಾಯದ ಸದಸ್ಯರ ಉದ್ದೇಶಪೂರ್ವಕ ಅವಮಾನ ಅಥವಾ ಬೆದರಿಕೆಗೆ ಸಂಬಂಧಿಸಿದ್ದರೆ, ಸೆಕ್ಷನ್ 3(1)(ಎಸ್) ಜಾತಿಯ ಹೆಸರಿನಲ್ಲಿ ನಿಂದಿಸುವುದನ್ನು ಅಪರಾಧವೆಂದು ಪರಿಗಣಿಸುತ್ತದೆ.

ಬಿಡುಗಡೆ ಅರ್ಜಿಯನ್ನು ಪರಿಶೀಲಿಸುವಾಗ ಮೇಲ್ನೋಟಕ್ಕೆ ಪ್ರಕರಣವು ಅಸ್ತಿತ್ವದಲ್ಲಿದೆಯೇ ಅಥವಾ ಆರೋಪಗಳನ್ನು ರೂಪಿಸಲು ಅಗತ್ಯವಿರುವ ಕನಿಷ್ಠ ಒಂದಾದರೂ ಬಲವಾದ ಶಂಕಿತ ಅಂಶವಿದೆಯೇ ಎನ್ನುವುದನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಸೇರಿರದ ಆರೋಪಿಯು ಸಭೆಯೊಂದರಲ್ಲಿ ಸ್ವಚ್ಛತಾ ಸಿಬ್ಬಂದಿಯ ಎದುರು ಸಂತ್ರಸ್ತೆಯನ್ನು ಜಾತಿಯ ಹೆಸರಿನಿಂದ ಕರೆದು ಅವಮಾನಿಸಿದ್ದಾಗಿ ಪ್ರಾಸಿಕ್ಯೂಷನ್ ಆರೋಪಿಸಿದೆ.

ಪ್ರಕರಣವು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಹೇಳಿದ್ದ ವಿಶೇಷ ನ್ಯಾಯಾಲಯ, ಆರೋಪಿಯ ಬಿಡುಗಡೆ ಅರ್ಜಿಯನ್ನು ತಿರಸ್ಕರಿಸಿದ ಬಳಿಕ ಆತ ಹೈಕೋರ್ಟ್ ಮೆಟ್ಟಿಲೇರಿದ್ದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...