Homeಮುಖಪುಟರೈತ ಹೋರಾಟಕ್ಕೆ ಗೆಲುವು: ನಾಳೆಯಿಂದಲೇ ಪಂಜಾಬ್, ಹರಿಯಾಣದಲ್ಲಿ ಭತ್ತ ಖರೀದಿಗೆ ಮುಂದಾದ ಸರ್ಕಾರ

ರೈತ ಹೋರಾಟಕ್ಕೆ ಗೆಲುವು: ನಾಳೆಯಿಂದಲೇ ಪಂಜಾಬ್, ಹರಿಯಾಣದಲ್ಲಿ ಭತ್ತ ಖರೀದಿಗೆ ಮುಂದಾದ ಸರ್ಕಾರ

ಕೇಂದ್ರವು ಅಕ್ಟೋಬರ್ 1 ರಿಂದ ಭತ್ತ ಕೊಳ್ಳಬೇಕಿತ್ತು. ಆದರೆ ಅದನ್ನು ಅಕ್ಟೋಬರ್ 11 ಕ್ಕೆ ಮುಂದೂಡಿತ್ತು. ಈಗ ರೈತರ ಹೋರಾಟ ಮಣಿದಿದೆ..

- Advertisement -
- Advertisement -

ಖಾರಿಫ್ ಭತ್ತ ಖರೀದಿ ಪ್ರಕ್ರಿಯೆಯನ್ನು ಮುಂದೂಡಿದ್ದ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಹರಿಯಾಣ ಮತ್ತು ಪಂಜಾಬ್ ರೈತರು ನಡೆಸಿದ ತೀವ್ರ ಹೋರಾಟಕ್ಕೆ ಜಯ ದೊರಕಿದೆ. ನಾಳೆಯಿಂದಲೇ (ಅಕ್ಟೋಬರ್ 03) ಭತ್ತ ಖರೀದಿ ಮಾಡಲಾಗುವುದು ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣೆ ಅಶ್ವಿನಿ ಕುಮಾರ್ ಚೌಬೆ ತಿಳಿಸಿದ್ದಾರೆ.

ಕೇಂದ್ರವು ಅಕ್ಟೋಬರ್ 1 ರಿಂದ ಭತ್ತ ಕೊಳ್ಳಬೇಕಿತ್ತು. ಆದರೆ ಅದನ್ನು ಅಕ್ಟೋಬರ್ 11 ಕ್ಕೆ ಮುಂದೂಡಿತ್ತು. ಇದರಿಂದ ಕೆರಳಿದ ರೈತರು ಕಳೆದೆರೆಡು ದಿನಗಳಿಂದ ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ತೀವ್ರಥರದ ಪ್ರತಿಭಟನೆ ನಡೆಸಿದ್ದರು.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಉಪ ಮುಖ್ಯಮಂತ್ರಿ ದುಶ್ಯಂತ್ ಚೌತಲಾ ವಿರುದ್ಧ ಘೇರಾವ್ ಹಾಕಿ ಪ್ರತಿಭಟಿಸಿದ್ದರು. ಹಲವೆಡೆ ರೈತರ ಮೇಲೆ ಲಾಠಿಚಾರ್ಜ್, ಜಲಫಿರಂಗಿ ಸಿಡಿಸಲಾಗಿತ್ತು. ಹರಿಯಾಣದ ಜಜ್ಜಾರ್‌ನಲ್ಲಿ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ಅವರ ಕಾರ್ಯಕ್ರಮದ ವಿರುದ್ಧ ರೈತರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ರೈತರನ್ನು ತಡೆಯಲು ಭದ್ರತಾ ಸಿಬ್ಬಂದಿ ಜಲ ಫಿರಂಗಿ ಬಳಸಲಾಗಿತ್ತು.

ಕೇಂದ್ರದ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ಮತ್ತು ಇತರ ರಾಜ್ಯ ಏಜೆನ್ಸಿಗಳು ಭತ್ತ ಕೊಳ್ಳುತ್ತವೆ. ಈಗಾಗಲೇ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಬೆಳೆಗೆ ಹಾನಿಯಾಗುತ್ತಿದ್ದು, ಕೇಂದ್ರವು ಖಾರೀಫ್ ಭತ್ತ ಕೊಳ್ಳುವುದನ್ನು ತ್ವರಿತಗೊಳಿಸಬೇಕೆಂದು ರೈತರು ಒತ್ತಾಯಿಸಿ ಹೋರಾಟಕ್ಕಿಳಿದಿದ್ದರು. ಪಂಜಾಬ್ ಮತ್ತು ಹರಿಯಾಣ ರಾಜ್ಯಗಳು ಬಹುಪಾಲು ಭತ್ತ ಬೆಳೆಯುವುದರಿಂದ ಅಲ್ಲಿನ ಚಳವಳಿ ತೀವ್ರ ರೂಪ ಪಡೆದುಕೊಂಡಿತ್ತು. ಅದಕ್ಕೆ ಮಣಿದ ಸರ್ಕಾರ ನಾಳೆಯಿಂದಲೇ ಭತ್ತ ಖರೀದಿಗೆ ಮುಂದಾಗಿದೆ.

“ಇದು ರೈತರಿಗೆ ಸಂದ ದೊಡ್ಡ ಗೆಲುವು. ನಾಳೆಯಿಂದ ಹರಿಯಾಣ ಮತ್ತು ಪಂಜಾಬ್ ನಲ್ಲಿ ಖಾರಿಫ್ ಖರೀದಿ ಆರಂಭವಾಗಲಿದೆ. ರೈತರು ಸೇರಿದಂತೆ ಅವರ ಹೋರಾಟಕ್ಕೆ ಬೆಂಬಲ ನೀಡಿದ ಎಲ್ಲಾ ನಾಗರಿಕರಿಗೆ ಅಭಿನಂದನೆಗಳು” ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಟ್ವಿಟರ್ ಹ್ಯಾಂಡಲ್ ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.

ಮತ್ತೊಮ್ಮೆ ರೈತ ಚಳುವಳಿ ಗೆದ್ದಿದೆ! ನಾಳೆ ಬೆಳಿಗ್ಗೆಯಿಂದ ಕೇಂದ್ರ ಸರ್ಕಾರ ಪಂಜಾಬ್ ಮತ್ತು ಹರಿಯಾಣದಲ್ಲಿ ಭತ್ತದ ಸಂಗ್ರಹವನ್ನು ಆರಂಭಿಸಲಿದೆ ಎಂದು ರೈತ ಹೋರಾಟಗಾರ ದೀಪಕ್ ಲಂಬಾ ತಿಳಿಸಿದ್ದಾರೆ.

ಪಂಜಾಬ್‌ನ ನೂತನ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿಯವರು ಇತ್ತೀಚಿನ ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ವೇಳೆ ಭತ್ತ ಖರೀದಿ ಪ್ರಕ್ರಿಯೆ ಮುಂದೂಡಿರುವುದನ್ನು ರದ್ದುಗೊಳಿಸಿ ಕೂಡಲೇ ಭತ್ತ ಖರೀದಿ ಮಾಡಬೇಕೆಂದು ಒತ್ತಾಯಿಸಿದ್ದರು. ಪಂಜಾಬ್ ರಾಜ್ಯವು ದೇಶದಲ್ಲಿಯೇ ಅತಿ ಹೆಚ್ಚು ಭತ್ತ ಬೆಳೆಯುವ ರಾಜ್ಯವಾಗಿದ್ದು ಕೇಂದ್ರದ ಕ್ರಮದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಚನ್ನಿ ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿದ್ದರು.


ಇದನ್ನೂ ಓದಿ: ಪಿಎಂ ಭೇಟಿಯಾದ ಪಂಜಾಬ್ ನೂತನ ಸಿಎಂ ಚನ್ನಿ: ಕೃಷಿ ಕಾಯ್ದೆಗಳನ್ನು ಕೈಬಿಡಲು ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...