Homeಮುಖಪುಟಸರ್ಕಾರಿ ಬಸ್‌ ಹತ್ತಿ ಜನರ ಸಮಸ್ಯೆ ಆಲಿಸಿದ ತಮಿಳುನಾಡು ಸಿಎಂ ಸ್ಟಾಲಿನ್!

ಸರ್ಕಾರಿ ಬಸ್‌ ಹತ್ತಿ ಜನರ ಸಮಸ್ಯೆ ಆಲಿಸಿದ ತಮಿಳುನಾಡು ಸಿಎಂ ಸ್ಟಾಲಿನ್!

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸರ್ಕಾರಿ ಬಸ್‌ ಏರಿ ಸಮಾನ್ಯ ಜನರೊಂದಿಗೆ ಬೆರೆತು ಅವರ ಸಮಸ್ಯೆಗಳನ್ನು ಆಲಿಸಿರುವ ಘಟನೆ ಇತ್ತೀಚೆಗೆ ನಡೆದಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ಭಾರಿ ಮೆಚ್ಚುಗೆ ಗಳಿಸಿದೆ.

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಶನಿವಾರ ಚೆನ್ನೈನಲ್ಲಿರುವ ಕನ್ನಕಿ ನಗರಕ್ಕೆ ತೆರಳಿ ಸರ್ಕಾರಿ ಬಸ್ ಏರಿದ್ದಾರೆ. ಈ ವೇಳೆ ಅವರು ಪ್ರಯಾಣಿಕರೊಂದಿಗೆ ಸಂವಾದ ನಡೆಸಿದ್ದು, ನಗರದ ಸ್ಥಳೀಯ ಬಸ್‌ಗಳ ಕುಂದುಕೊರತೆಗಳು ಮತ್ತು ಜನರ ಪ್ರತಿಕ್ರಿಯೆಗಳನ್ನು ಆಲಿಸಿದ್ದಾರೆ.

ಇದನ್ನೂ ಓದಿ: ಮುಂದಿನ ಚುನಾವಣೆಗೆ ಮುನ್ನೆಲೆಗೆ ಬರುವುದೇ ‘ತಮಿಳುನಾಡು ಮಾದರಿ?’

ಈ ವರ್ಷದ ಆರಂಭದಲ್ಲಿ ತಮಿಳುನಾಡಿನಲ್ಲಿ ಜಾರಿಗೆ ತಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಬಗ್ಗೆ ನೀವು ಹೇಗೆ ಭಾವಿಸುತ್ತೀರಿ ಎಂದು ಸ್ಟಾಲಿನ್ ನಿರ್ದಿಷ್ಟವಾಗಿ ಮಹಿಳಾ ಪ್ರಯಾಣಿಕರನ್ನು ಉದ್ದೇಶಿಸಿ ಕೇಳಿದ್ದಾರೆ. ಬಸ್‌ಗಳಲ್ಲಿ ಹೆಚ್ಚುವರಿ ಸೌಲಭ್ಯಗಳ ಅಗತ್ಯವಿದೆಯೇ ಎಂದು ಕೂಡಾ ಅವರು ವಿಚಾರಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು – ರಾಜ್ಯದ ಸರ್ಕಾರಿ ಉದ್ದಿಮೆಗಳ 2.87 ಲಕ್ಷ ಸಿಬ್ಬಂದಿಗೆ 216.38 ಕೋಟಿ ‘ದೀಪಾವಳಿ ಬೋನಸ್’!

ಈ ವರ್ಷ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಡಿಎಂಕೆ ಪ್ರಕಟಿಸಿದ್ದ 400 ಪುಟಗಳ ಪ್ರಣಾಳಿಕೆಯಲ್ಲಿ ಸಿಟಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪಾಸ್‌ಗಳು ಕೂಡಾ ಸೇರಿವೆ.

ಪಕ್ಷವು ಸರ್ಕಾರಿ ವಲಯದ ಮಹಿಳಾ ಉದ್ಯೋಗಿಗಳಿಗೆ ಇದ್ದ ಆರು ತಿಂಗಳ ಹೆರಿಗೆ ರಜೆಯನ್ನು ಒಂದು ವರ್ಷಕ್ಕೆ ಏರಿಸುವುದು, ಹೆರಿಗೆ ಸಹಾಯ ಧನವಾಗಿ 24,000 ರೂ.ಗಳನ್ನು ನೀಡುವುವುದು, ಮಹಿಳೆಯರ ವಿರುದ್ಧದ ಅಪರಾಧಗಳ ತನಿಖೆಗಾಗಿ ವಿಶೇಷ ಸೈಬರ್ ಅಪರಾಧ ಪೊಲೀಸ್ ಠಾಣೆಗಳನ್ನು ತೆರೆಯುವುದಾಗಿ ಪ್ರಸ್ತಾಪಿಸಿದೆ.

ಜೂನ್‌ನಲ್ಲಿ, ಡಿಎಂಕೆ ಸರ್ಕಾರವು ನಗರ ಪ್ರದೇಶಗಳಲ್ಲಿ ವಿಕಲಚೇತನರು ಮತ್ತು ಮಹಿಳಾ ಟ್ರಾನ್ಸ್‌ಜೆಂಡರ್‌‌‌ಗೆ ಉಚಿತ ಬಸ್ ಪ್ರಯಾಣದ ಪಾಸ್‌ಗಳನ್ನು ಪರಿಚಯಿಸುತ್ತಿದ್ದೇವೆ ಎಂದು ಘೋಷಿಸಿದೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ: ಕೇವಲ ಒಂದು ಮತ ಪಡೆದ ಬಿಜೆಪಿ ಅಭ್ಯರ್ಥಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...