Homeಮುಖಪುಟಬಿಜೆಪಿ ರಾಜ್ಯಗಳಲ್ಲಿ ಬಂಗಾಳಿಗಳಿಗೆ ಕಿರುಕುಳ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನೆ-video

ಬಿಜೆಪಿ ರಾಜ್ಯಗಳಲ್ಲಿ ಬಂಗಾಳಿಗಳಿಗೆ ಕಿರುಕುಳ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನೆ-video

- Advertisement -
- Advertisement -

ಕೋಲ್ಕತ್ತಾ: ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಸಮುದಾಯದವರಿಗೆ “ಕಿರುಕುಳ” ನೀಡಲಾಗುತ್ತಿದೆ ಎಂದು ಆರೋಪಿಸಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಕೋಲ್ಕತ್ತಾದಲ್ಲಿ ಬೃಹತ್ ಶಕ್ತಿ ಪ್ರದರ್ಶನ ನಡೆಸಿದರು. ನೂರಾರು ಬೆಂಬಲಿಗರೊಂದಿಗೆ ಸಾಗಿದ ಈ ರ‍್ಯಾಲಿಯಲ್ಲಿ, ಬಂಗಾಳಿಗಳ ಬಗೆಗಿನ ಬಿಜೆಪಿಯ ವರ್ತನೆ ತೀವ್ರ ಬೇಸರ ತರಿಸಿದೆ ಎಂದು ಅವರು ಖಂಡಿಸಿದರು.

“ಬಿಜೆಪಿಯ ಬಂಗಾಳಿ ವಿರೋಧಿ ಧೋರಣೆ ನನಗೆ ತೀವ್ರ ಮುಜುಗರ ಮತ್ತು ಬೇಸರ ತರಿಸಿದೆ. ಇನ್ನು ಮುಂದೆ ನಾನು ಹೆಚ್ಚಾಗಿ ಬಂಗಾಳಿಯಲ್ಲೇ ಮಾತನಾಡುತ್ತೇನೆ; ನಿಮಗೆ ಧೈರ್ಯವಿದ್ದರೆ ನನ್ನನ್ನು ಬಂಧನ ಶಿಬಿರಗಳಿಗೆ ಕಳುಹಿಸಿ!” ಎಂದು ಮಮತಾ ಬ್ಯಾನರ್ಜಿ ಬಿಜೆಪಿಗೆ ಸವಾಲು ಹಾಕಿದರು. ರ್ಯಾಲಿಯಲ್ಲಿ ಆಕ್ರೋಶ ಹೊರಹಾಕಿದ ಅವರು, “ಬಂಗಾಳಿ ಮಾತನಾಡುವ ವಲಸಿಗರು ರೋಹಿಂಗ್ಯಾ ಮುಸ್ಲಿಮರು ಎಂಬುದನ್ನು ಸಾಬೀತುಪಡಿಸಲು ನಾನು ನಿಮಗೆ ಸವಾಲು ಹಾಕುತ್ತೇನೆ. ದೇಶಾದ್ಯಂತ 22 ಲಕ್ಷ ಬಂಗಾಳಿ ವಲಸೆ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅವರೆಲ್ಲರಿಗೂ ಮಾನ್ಯ ಗುರುತಿನ ದಾಖಲೆಗಳಿವೆ” ಎಂದು ಹೇಳಿದರು.

ಈ ಪ್ರತಿಭಟನಾ ಮೆರವಣಿಗೆಯಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್ ಸೇರಿದಂತೆ ಹಲವು ಹಿರಿಯ ಟಿಎಂಸಿ ನಾಯಕರು ಸಾಥ್ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮದೊಂದಿಗೆ, ಮಧ್ಯಾಹ್ನ 1.45ಕ್ಕೆ ಮಧ್ಯ ಕೋಲ್ಕತ್ತಾದ ಕಾಲೇಜು ಸ್ಕ್ವೇರ್‌ನಿಂದ ಮೆರವಣಿಗೆ ಆರಂಭವಾಯಿತು. ಸುಮಾರು ಮೂರು ಕಿಲೋಮೀಟರ್ ದೂರ ಸಾಗಿದ ಈ ಮೆರವಣಿಗೆ, ಧರ್ಮತಲಾದ ಡೊರಿನಾ ಕ್ರಾಸಿಂಗ್‌ನಲ್ಲಿ ಅಂತ್ಯಗೊಂಡಿತು. ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಮತ್ತು ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಸುಮಾರು 1,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಮೆರವಣಿಗೆಯಿಂದಾಗಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಬೇರೆ ಮಾರ್ಗಗಳಿಗೆ ತಿರುಗಿಸಬೇಕಾಯಿತು.

ಚುನಾವಣಾ ಕದನಕ್ಕೆ ನಾಂದಿ: ಮೋದಿ ಭೇಟಿಗೂ ಮುನ್ನ ಮಮತಾ ಆರ್ಭಟ:

ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಭೇಟಿಗೆ ಕೇವಲ 24 ಗಂಟೆಗಳ ಮುಂಚಿತವಾಗಿ ಈ ಪ್ರತಿಭಟನೆ ನಡೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. “ಬಿಜೆಪಿ ಬಂಗಾಳಿ ಮಾತನಾಡುವ ಜನರನ್ನು ಬಂಧನ ಶಿಬಿರಗಳಿಗೆ ಕಳುಹಿಸಲು ಮುಂದಾದರೆ, ಬಂಗಾಳವು ಮುಂಬರುವ ಚುನಾವಣೆಯಲ್ಲಿ ಅವರನ್ನು ರಾಜಕೀಯವಾಗಿ ಬಗ್ಗುಬಡಿಯುತ್ತದೆ” ಎಂದು ಮಮತಾ ಬ್ಯಾನರ್ಜಿ ಖಡಾಖಂಡಿತವಾಗಿ ಹೇಳಿದರು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಬಂಗಾಳಿ ಮಾತನಾಡುವವರನ್ನು “ಅಕ್ರಮ ವಲಸಿಗರು” ಎಂದು ಹಣೆಪಟ್ಟಿ ಕಟ್ಟಲು, ವ್ಯವಸ್ಥಿತವಾಗಿ ಭಾಷಾ ಪ್ರೊಫೈಲಿಂಗ್ ಮಾಡಲು ಮತ್ತು ಅನಿಯಂತ್ರಿತ ಬಂಧನಗಳಿಗೆ ಗುರಿಪಡಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನಗಳನ್ನು ಟಿಎಂಸಿ ಬಲವಾಗಿ ಆರೋಪಿಸಿದೆ. ಈ ಬೃಹತ್ ಪ್ರತಿಭಟನೆಯು ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಟಿಎಂಸಿಯ ಭವಿಷ್ಯದ ಪ್ರಚಾರದ ದಿಕ್ಕನ್ನು ಸೂಚಿಸಿತು.

ಬಿಜೆಪಿ ತಿರುಗೇಟು: “ಬಂಗಾಳಿ ಅಸ್ಮಿತೆ” ಹೆಸರಿನಲ್ಲಿ ಅಕ್ರಮ ವಲಸಿಗರ ರಕ್ಷಣೆ ಆರೋಪ

ಈ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. “ಬಂಗಾಳಿ ಅಸ್ಮಿತೆ” ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಸಂಪೂರ್ಣ ಕಸರತ್ತು ವಾಸ್ತವವಾಗಿ “ಬಂಗಾಳಿ ಮಾತನಾಡುವ ರೋಹಿಂಗ್ಯಾಗಳು ಮತ್ತು ಅಕ್ರಮ ಬಾಂಗ್ಲಾದೇಶಿ ಒಳನುಸುಳುಕೋರರ” ಅಸ್ತಿತ್ವವನ್ನು ಮರೆಮಾಚುವ ಪ್ರಯತ್ನ” ಎಂದು ಅವರು ಆರೋಪಿಸಿದರು.

ಮಮತಾ ಬ್ಯಾನರ್ಜಿಯವರ ನಡೆಯನ್ನು ತೀವ್ರವಾಗಿ ಟೀಕಿಸಿದ ಸುವೇಂದು ಅಧಿಕಾರಿ, “ರಾಜ್ಯದಲ್ಲಿ ಸಾವಿರಾರು ಬಂಗಾಳಿ ಮಾತನಾಡುವ ಶಿಕ್ಷಕರು ಉದ್ಯೋಗ ಕಳೆದುಕೊಂಡು ನರಳುತ್ತಿರುವಾಗ, ಅವರ ಗೋಳಾಟ ಮಮತಾ ಬ್ಯಾನರ್ಜಿಗೆ ಏಕೆ ಕೇಳಿಸಲಿಲ್ಲ?” ಎಂದು ವ್ಯಂಗ್ಯವಾಡಿದರು. ಸರ್ಕಾರದ ಮೇಲೆ ಸರಣಿ ಪ್ರಶ್ನೆಗಳನ್ನು ಎಸೆದ ಅವರು, “ಅತ್ರಿ ಭಟ್ಟಾಚಾರ್ಯ ಮತ್ತು ಸುಬ್ರತಾ ಗುಪ್ತಾ ಎಂಬ ಬಂಗಾಳಿ ಅಧಿಕಾರಿಗಳನ್ನು ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಪರಿಗಣಿಸದೆ, ಕಿರಿಯರಾದ ಮನೋಜ್ ಪಂತ್‌ಗೆ ಆ ಹುದ್ದೆ ಏಕೆ ನೀಡಲಾಯಿತು? ಅಲ್ಲದೆ, ಹಿರಿಯ ಐಪಿಎಸ್ ಅಧಿಕಾರಿ ಸಂಜಯ್ ಮುಖೋಪಾಧ್ಯಾಯ ಅವರನ್ನು ಕಡೆಗಣಿಸಿ, ಹೊರ ರಾಜ್ಯದ ಕಿರಿಯ ಅಧಿಕಾರಿಯಾದ ರಾಜೀವ್ ಕುಮಾರ್‌ರನ್ನು ಡಿಜಿಪಿಯಾಗಿ ಏಕೆ ನೇಮಿಸಲಾಯಿತು?” ಎಂದು ತಮ್ಮ ‘ಎಕ್ಸ್’ ಪೋಸ್ಟ್‌ನಲ್ಲಿ ಅಸಮಾಧಾನ ಹೊರಹಾಕಿದರು.

ಕಾಲೇಜಿನಲ್ಲೇ ವಿದ್ಯಾರ್ಥಿನಿ ಬೆಂಕಿಹಚ್ಚಿಕೊಂಡು ಸಾವು ಪ್ರಕರಣ: ಬಿಜೆಡಿಯಿಂದ ಬೃಹತ್ ಪ್ರತಿಭಟನೆ, ಬಾಲಸೋರ್ ಪಟ್ಟಣ ಸಂಪೂರ್ಣ ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...