Homeಮುಖಪುಟಮಸೀದಿಯತ್ತ ಬಾಣದ ಸನ್ನೆ: ವಿವಾದ ಸೃಷ್ಟಿಸಿದ ಹೈದರಾಬಾದ್ ಬಿಜೆಪಿ ಅಭ್ಯರ್ಥಿ

ಮಸೀದಿಯತ್ತ ಬಾಣದ ಸನ್ನೆ: ವಿವಾದ ಸೃಷ್ಟಿಸಿದ ಹೈದರಾಬಾದ್ ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮಸೀದಿಯತ್ತ ಬಾಣ ಬಿಡುತ್ತಿರುವಂತೆ ಸನ್ನೆ ಮಾಡಿದ ವಿಡಿಯೋವೊಂದು ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗಿದೆ.

ಕಳೆದ ಬುಧವಾರ ನಡೆದ ರಾಮನವಮಿಯ ಮೆರವಣಿಗೆ ಸಂದರ್ಭದಲ್ಲಿ ಹೈದರಾಬಾದ್‌ನ ಓಲ್ಡ್ ಸಿಟಿಯಲ್ಲಿರುವ ಸಿದ್ದಿಯಂಬರ್ ಬಜಾರ್ ಮಸೀದಿಯತ್ತ ಮಾಧವಿ ಲತಾ ಅವರು ಬಾಣ ಬಿಟ್ಟಂತೆ ಸನ್ನೆ ಮಾಡಿದ್ದಾರೆ ಎನ್ನಲಾಗಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಲತಾ ಅವರು ಕೇಸರಿ ಶಾಲು ಧರಿಸಿ ವಾಹನವೊಂದರ ಮೇಲೆ ನಿಂತು ಮಸೀದಿಯತ್ತ ಬಾಣ ಬಿಟ್ಟಂತೆ ಸನ್ನೆ ಮಾಡಿರುವುದು ಮತ್ತು ಸುತ್ತಲು ಕೇಸರಿ ಧ್ವಜ ಹಿಡಿದು ನಿಂತಿದ್ದ ನೂರಾರು ಜನರು ಚಪ್ಪಾಳೆ ತಟ್ಟಿ ಹರ್ಷೋದ್ಘಾರ ಮೊಳಗಿಸಿದ್ದು ವೈರಲ್ ವಿಡಿಯೋದಲ್ಲಿದೆ.

ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐಗೆ ಪ್ರತಿಕ್ರಿಯಿಸಿದ್ದ ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ” ಹೈದರಾಬಾದ್‌ನ ಜನರು ಬಿಜೆಪಿಯ ಉದ್ದೇಶ ಏನೆಂದು ನೋಡಿದ್ದಾರೆ. ಬಿಜೆಪಿ ಮತ್ತು ಆರೆಸ್ಸೆಸ್‌ನ ಅಸಭ್ಯ ಮತ್ತು ಪ್ರಚೋದನಕಾರಿ ಚಟುವಟಿಕೆಗಳನ್ನು ಸ್ವೀಕರಿಸುವುದಿಲ್ಲ. ಬಿಜೆಪಿಯವರು ಹೇಳುತ್ತಿರುವ ವಿಕಸಿತ ಭಾರತ ಇದೇನಾ? ಚುನಾವಣೆಗಿಂತ ಹೈದರಾಬಾದ್‌ನಲ್ಲಿ ಶಾಂತಿ ನೆಲೆಸುವುದು ಮುಖ್ಯ. ತೆಲಂಗಾಣದ ಶಾಂತಿ, ಸಾಮರಸ್ಯಕ್ಕೆ ವಿರುದ್ದವಾಗಿರುವ ಬಿಜೆಪಿ ವಿರುದ್ದ ಜನರು ಮನ ಹಾಕಲಿದ್ದಾರೆ ಎಂಬ ವಿಶ್ವಾಸ ನನಗಿದೆ” ಎಂದು ಹೇಳಿದ್ದಾರೆ.

ವಿಡಿಯೋ ವೈರಲ್ ಆಗಿ ವಿವಾದಕ್ಕೀಡಾಗುತ್ತಿದ್ದಂತೆ ಮಾಧವಿ ಲತಾ ಅವರು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದು, “ತಪ್ಪು ಭಾವನೆ ಮೂಡಿಸಲು ನನ್ನ ವಿಡಿಯೋವೊಂದನ್ನು ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಅಪೂರ್ಣ ವಿಡಿಯೋ ಎಂಬುವುದನ್ನು ನಾನು ಸ್ಪಷ್ಟಪಡಿಸಲು ಇಚ್ಚಿಸುತ್ತೇನೆ. ಈ ವಿಡಿಯೋದಿಂದ ಯಾರ ಭಾವನೆಗಾದರು ಧಕ್ಕೆಯಾಗಿದ್ದರೆ, ನಾನು ಎಲ್ಲರನ್ನು ಗೌರವಿಸುವವಳಾಗಿ ಕ್ಷಮೆ ಯಾಚಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ದ್ವೇಷವನ್ನು ಸೋಲಿಸುವ ಮೂಲಕ ‘ಮೊಹಬ್ಬತ್ ಕಿ ದುಕಾನ್’ ತೆರೆಯಿರಿ: ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕರ್ನಾಟಕ ವಿಧಾನ ಪರಿಷತ್‌ನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

0
ಕರ್ನಾಟಕ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜೂನ್ 3ರಂದು ಮತದಾನ ನಡೆಯಲಿದೆ. ಕರ್ನಾಟಕ ವಿಧಾನ ಪರಿಷತ್ತಿನ 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ...