Homeಫ್ಯಾಕ್ಟ್‌ಚೆಕ್FACT CHECK : ಗೋವಾ-ಮಂಗಳೂರು ಹೆದ್ದಾರಿಯಲ್ಲಿ ಅನಿಲ ಟ್ಯಾಂಕರ್ ಸ್ಪೋಟ ಎಂದು ಬ್ರೆಝಿಲ್‌ನ ವಿಡಿಯೋ ಹಂಚಿಕೆ

FACT CHECK : ಗೋವಾ-ಮಂಗಳೂರು ಹೆದ್ದಾರಿಯಲ್ಲಿ ಅನಿಲ ಟ್ಯಾಂಕರ್ ಸ್ಪೋಟ ಎಂದು ಬ್ರೆಝಿಲ್‌ನ ವಿಡಿಯೋ ಹಂಚಿಕೆ

- Advertisement -
- Advertisement -

ಗೋವಾ- ಮಂಗಳೂರು ಹೆದ್ದಾರಿಯಲ್ಲಿ ಅನಿಲ ಟ್ಯಾಂಕರ್ ಸ್ಪೋಟದಿಂದ ದುರಂತ ಸಂಭವಿಸಿದೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಹಾಕಿ ಸರ್ಜ್ ಮಾಡಿದಾಗ “ಜುಲೈ 4,2024ರಂದು ‘ಉಪುಕ್‌ನ್ಯೂಸ್‌’ ಎಂಬ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ. ವಿಡಿಯೋ ಜೊತೆಗೆ “ಬ್ರೆಝಿಲ್‌ನ ಪ್ಯಾರಾ ಪ್ರದೇಶದಲ್ಲಿ ಟ್ಯಾಂಕರ್ ಸ್ಫೋಟಗೊಂಡ ನೇರಾ ದೃಶ್ಯಾವಳಿ” ಬರೆಯಲಾಗಿದೆ.

ನಾವು ಈ ಬಗ್ಗೆ ಇನ್ನಷ್ಟು ಮಾಹಿತಿ ಹುಡುಕಿದಾಗ ಬ್ರೆಝಿಲ್‌ನಲ್ಲಿ ಗ್ಯಾಸ್ ಟ್ಯಾಂಕರ್ ಸ್ಪೋಟಗೊಂಡ ಬಗ್ಗೆ ಮಾಧ್ಯಮ ವರದಿಗಳು ಲಭ್ಯವಾಗಿದೆ. ಜುಲೈ 4, 2024ರಂದು ‘ಎಲ್ ಡೈರಿಯೋಮ್ಯಾಕ್ಸ್‘ ಎಂಬ ಸುದ್ದಿ ವೆಬ್‌ಸೈಟ್ ಪ್ರಕಟಿಸಿದ ವರದಿಯ ಪ್ರಕಾರ, “ಬ್ರೆಝಿಲ್‌ನ ಪ್ಯಾರಾ ರಾಜ್ಯದಲ್ಲಿ ಪ್ಯಾರಾಗೊಮಿನಾಸ್ ಮತ್ತು ಉಲಿಯಾನೊಪೊಲಿಸ್ ನಡುವಿನ ಹೆದ್ದಾರಿಯಲ್ಲಿ ಅನಿಲ ಸಾಗಿಸುವ ಟ್ಯಾಂಕರ್ ಸ್ಫೋಟಗೊಂಡಿದ್ದು , ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಕ್ಯಾಮರಾಮ್ಯಾನ್, ವರದಿಗಾರ ಮತ್ತು ತಂತ್ರಜ್ಞರು ಒಳಗೊಂಡಿದ್ದು. ಅವರು ಘಟನೆಯನ್ನು ವರದಿ ಮಾಡಲು ಸ್ಥಳಕ್ಕೆ ಬಂದಿದ್ದರು. ಸ್ಫೋಟಕ್ಕೆ ಕೆಲವೇ ಕ್ಷಣಗಳ ಮೊದಲು , ವಾಹನವು ಅಪಘಾತಕ್ಕೀಡಾಗಿತ್ತು ಎಂದು” ಉಲ್ಲೇಖಿಸಲಾಗಿದೆ.

ಜುಲೈ 4,2024ರಂದು ‘ರಿಯಲಿಡೇಡ್ಸ್‘ ಎಂಬ ವೆಬ್‌ಸೈಟ್‌ ಪ್ರಕಟಿಸಿದ ವರದಿ ಪ್ರಕಾರ, “ಹೆದ್ದಾರಿಯಲ್ಲಿ ಟ್ಯಾಂಕರ್ ಸ್ಫೋಟದ ಬಗ್ಗೆ ವರದಿ ತೆರಳಿದ್ದ ಮೂವರು ಮಾಧ್ಯಮ ಪ್ರತಿನಿಧಿಗಳು ಮತ್ತು ಮೂವರು ಮಿಲಿಟರಿ ಅಗ್ನಿಶಾಮಕ ಸಿಬ್ಬಂದಿಗೆ ಸುಟ್ಟಗಾಯಗಳಾಗಿವೆ. ಉತ್ತರ ಬ್ರೆಝಿಲ್‌ನ ಪ್ಯಾರಾದಲ್ಲಿ ಹೆದ್ದಾರಿಯಲ್ಲಿ ಘಟನೆ ನಡೆದಿದೆ” ಎಂದು ತಿಳಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಉತ್ತರ ಬ್ರೆಝಿಲ್‌ನ ಪ್ಯಾರಾದ ಹೆದ್ದಾರಿಯಲ್ಲಿ 4 ಜುಲೈ , 2024ರಂದು ಅನಿಲ ಸಾಗಿಸುವ ಟ್ಯಾಂಕರ್ ಸ್ಫೋಟಗೊಂಡ ಘಟನೆಯನ್ನು ಗೋವಾ-ಮಂಗಳೂರು ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್‌ವೊಂದು ಸ್ಫೋಟಗೊಂಡಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಟಿವಿ ವಿಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...