Homeಮುಖಪುಟಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ವಿಡಿಯೋ ವೈರಲ್, ಟ್ರೋಲ್; ಅವಮಾನ ಸಹಿಸಲಾಗದೆ ಯುವಕ ಆತ್ಮಹತ್ಯೆ

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ವಿಡಿಯೋ ವೈರಲ್, ಟ್ರೋಲ್; ಅವಮಾನ ಸಹಿಸಲಾಗದೆ ಯುವಕ ಆತ್ಮಹತ್ಯೆ

- Advertisement -
- Advertisement -

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಳ್ಲಿ ವೈರಲ್ ಆಗಿ, ಜನರಿಂದ ನಿಂದನೆ, ಟ್ರೋಲ್ ಗಳನ್ನು ಸಹಿಸಲಾಗದೆ 27ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಡೆದಿದೆ.

ಅಕ್ಟೋಬರ್ 30 ರಂದು 27ವರ್ಷದ ಮಹೇಶ್ ಅಧೆ ಎಂಬ ಯುವಕ ಛತ್ರಪತಿ ಸಂಭಾಜಿ ಮಹಾರಾಜ್ ರೈಲು ನಿಲ್ದಾಣದ ಬಳಿ ಮೂತ್ರವಿಸರ್ಜನೆ ಮಾಡಿತ್ತಿದ್ದ ವಿಡಿಯೋವನ್ನು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದರು. ತನ್ನ ತಪ್ಪಿನ ಅರಿವಾಗುತ್ತಿದ್ದಂತೆಯೇ ಮಹೇಶ್ ಅಧೆ ಮತ್ತು ಆತನ ಸ್ನೇಹಿತ ವಿಡಿಯೋ ಮಾಡಿ, ಸಾರ್ವಜನಿಕರಲ್ಲಿ ಕ್ಷಮೆ ಕೋರಿದ್ದರು. 

ಈ ವಿಡಿಯೋ ಜೊತೆಗೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ಸಹ ಮತ್ತಷ್ಟು ವೈರಲ್ ಆಗಿ ಆನ್ ಲೈನ್ ಕಿರುಕುಳ, ಟ್ರೋಲ್ ನಿಂದನೆಗಳು ಹೆಚ್ಚಾಗಿವೆ. ಜೊತೆಗೆ ಛತ್ರಪತಿ ಸಂಭಾಜಿ ಮಹಾರಾಜ್ ನಾಮಫಲಕದ ಬಳಿ ಮೂತ್ರ ಮಾಡಲಾಗಿದೆ ಎಂಬ ಕಾರಣಕ್ಕೆ ಆತನಿಗೆ ಬೆದರಿಕೆ ಕರೆಗಳು ಬರುವುದಕ್ಕೂ ಪ್ರಾರಂಭವಾಗಿದ್ದವು ಇದನ್ನು ಯುವಕ ಮನೆಯವರ ಬಳಿಯೂ ಹೇಳಿಕೊಂಡಿದ್ದ. ನಿಂದನೆಗಳು ಹೆಚ್ಚಾದಂತೆ ಅದನ್ನು ತಡೆಯಲಾಗದೇ ಯುವಕ ಬೆಳ್ಳಂಬೆಳಿಗ್ಗೆ ಮನೆಯಿಂದ ಹೊರ ಹೋಗಿದ್ದ ಎಷ್ಟೇ ಸಮಯವಾದರೂ ವಾಪಸ್ಸಾಗದೇ ಇದ್ದಾಗ ಆತನ ಕುಟುಂಬದವರು ಹುಡುಕಿದ್ದಾರೆ. ಈ ವೇಳೆ ಬಾವಿಯೊಂದರಲ್ಲಿ ಆತನ ಶವ ಪತ್ತೆಯಾಗಿದೆ.

ಮಹೇಶ್ ಅಧೇ ಅವರ ಸೋದರ ಸಂಬಂಧಿ ಅಖಿಲೇಶ್ ನೀಡಿದ ದೂರಿನ ಮೇರೆಗೆ, ಪೊಲೀಸರು ಬುಧವಾರ ತಡರಾತ್ರಿ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು 3(5) (ಸಾಮಾನ್ಯವೀಡಿಯೊವನ್ನು ಪ್ರಸಾರ ಮಾಡಿದ ಮತ್ತು ಬೆದರಿಕೆ ಹಾಕಿದ) ಏಳು ಜನರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ವಿಚಾರ ತಡವಾಗಿ ಬೆಳಕಿಗೆ ಬಂದಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...