ಇನ್‌ಸ್ಟಾಗ್ರಾಮ್ ಖಾತೆಯನ್ನು ರಚಿಸಿ ಮೆಟ್ರೋದಲ್ಲಿ ಪ್ರಯಾಣಿಸುವ ಮಹಿಳೆಯರ ವೀಡಿಯೊಗಳನ್ನು ಅವರ ಒಪ್ಪಿಗೆಯಿಲ್ಲದೆ ರೆಕಾರ್ಡ್ ಮಾಡಿದ ಆರೋಪದ ಮೇಲೆ 27 ವರ್ಷದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮೆಟ್ರೋ ಮಹಿಳಾ ಪ್ರಯಾಣಿಕರ
ಆರೋಪಿಯನ್ನು ಉತ್ತರ ಬೆಂಗಳೂರಿನ ತಿಲಗಲರಪಾಳ್ಯದ ನಿವಾಸಿ ದಿಗಂತ್ ಎಂದು ಗುರುತಿಸಲಾಗಿದೆ. ಅಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದ ಆರೋಪಿ ಮೂಲತಃ ಹಾಸನ ಜಿಲ್ಲೆಯ ಹೊಳೆನರಸಿಪುರದವನು ಎಂದು ವರದಿಯಾಗಿದೆ. ವಾಣಿಜ್ಯ ಪದವೀಧರನಾಗಿರುವ ಆರೋಪಿ ಮುರುಗೇಶಪಾಳ್ಯದ ಖಾಸಗಿ ಕಂಪನಿಯಲ್ಲಿ ಖಾತೆ ವಿಭಾಗದಲ್ಲಿ ಕೆಲಸ ಮಾಡುತ್ತಾನೆ ಎಂದು ವರದಿಯಾಗಿದೆ.
“ಆರೋಪಿ ಪ್ರತಿದಿನ ಪೀಣ್ಯದಿಂದ ಇಂದಿರಾನಗರಕ್ಕೆ ತನ್ನ ಕೆಲಸಕ್ಕಾಗಿ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದನು. ಪ್ರಯಾಣ ಮಾಡುವಾಗ ವೀಡಿಯೊಗಳನ್ನು ತೆಗೆದುಕೊಂಡು ಇನ್‌ಸ್ಟಾಗ್ರಾಮ್ ಮತ್ತು ಟೆಲಿಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದನು” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಶುಕ್ರವಾರ ಮಧ್ಯಾಹ್ನ ಆರೋಪಿಯನ್ನು ಆತನ ಮನೆಯಿಂದ ಬಂಧಿಸಲಾಗಿದೆ ಎಂದು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಲೋಕೇಶ್ ಬಿ ಜಗಲಾಸರ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಪೊಲೀಸರು ಅರೋಪಿಯ ಡಿಜಿಟಲ್ ಸಾಧನಗಳನ್ನು ಸ್ಕ್ಯಾನ್ ಮಾಡುತ್ತಿದ್ದು, ಈ ವರ್ಷದ ಮಾರ್ಚ್‌ನಿಂದ ಆತ ವೀಡಿಯೊಗಳನ್ನು ಅಪ್‌ಲೋಡ್ ಮಾಡುತ್ತಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ತನಿಖಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೆಟ್ರೋ ಮಹಿಳಾ ಪ್ರಯಾಣಿಕರ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಶಿವಮೊಗ್ಗ | ಮಠದ ಆಶ್ರಯ ಕೇಂದ್ರದಲ್ಲಿದ್ದ ಮೇಘಾಲಯ ಮೂಲದ 22 ಮಕ್ಕಳ ರಕ್ಷಣೆ
ಶಿವಮೊಗ್ಗ | ಮಠದ ಆಶ್ರಯ ಕೇಂದ್ರದಲ್ಲಿದ್ದ ಮೇಘಾಲಯ ಮೂಲದ 22 ಮಕ್ಕಳ ರಕ್ಷಣೆ

