Homeಮುಖಪುಟಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

- Advertisement -
- Advertisement -

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ ಘಟನೆಯ ಭಯಾನಕ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿವೆ. ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ರಸ್ತೆ ಯೋಜನೆಯ ಭಾಗವಾಗಿ ಕಲ್ಲಾಡಿಯ ಮೀನಾಕ್ಷಿ ಸೇತುವೆಯ ಬಳಿ ಸಂಗ್ರಹವಾಗಿದ್ದ ದೊಡ್ಡ ಮಣ್ಣಿನ ರಾಶಿ, ಮಳೆಯಿಂದಾಗಿ ಇದ್ದಕ್ಕಿದ್ದಂತೆ ಕುಸಿದು ಬೀಳುತ್ತಿರುವುದು ಕಂಡುಬಂದಿದೆ (ಎಎನ್ಐ).

ವಿಡಿಯೋದಲ್ಲಿ, ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ರಸ್ತೆ ಯೋಜನೆಯ ಭಾಗವಾಗಿ ಕಲ್ಲಾಡಿಯ ಮೀನಾಕ್ಷಿ ಸೇತುವೆಯ ಬಳಿ ಸಂಗ್ರಹವಾಗಿದ್ದ ಬೃಹತ್ ಮಣ್ಣಿನ ರಾಶಿ, ಮಳೆಯಿಂದಾಗಿ ಹಠಾತ್ತನೆ ಕುಸಿದು ಬೀಳುತ್ತಿರುವುದು ಕಂಡುಬಂದಿದೆ. ಇದು ಮರಗಳನ್ನು ಉರುಳಿಸುವುದರ ಜೊತೆಗೆ ನಿರ್ಮಾಣ ಸ್ಥಳದಲ್ಲಿ ದೂಳನ್ನು ತಡೆಯಲು ಹಾಕಲಾಗಿದ್ದ ಬಟ್ಟೆಯ ಪರದೆಗಳು ಮತ್ತು ಬ್ಯಾರಿಕೇಡ್‌ಗಳನ್ನು ಹಾರಿಸಿಕೊಂಡು ಹೋಗಿದೆ. ಭೂಕುಸಿತದ ತೀವ್ರತೆಗೆ ಟ್ರಕ್ ಮತ್ತು ಬಸ್ಸೊಂದು ಕೊಚ್ಚಿಹೋಗುತ್ತಿರುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ.

ಮಣ್ಣಿನ ರಾಶಿ ರಸ್ತೆಗೆ ನುಗ್ಗಿದ್ದಾಗ, ಮಹಿಳೆಯರು ಸೇರಿದಂತೆ ಹಲವರು ಜೀವ ಉಳಿಸಿಕೊಳ್ಳಲು ಓಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಮತ್ತೊಂದೆಡೆ, ರಕ್ಷಣಾ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿಗಳು ಅವಶೇಷಗಳಡಿ ಯಾರಾದರೂ ಸಿಲುಕಿದ್ದಾರೆಯೇ ಎಂದು ಹುಡುಕಾಡುತ್ತಿರುವ ದೃಶ್ಯಗಳೂ ಕಂಡುಬಂದಿವೆ. ವರದಿಗಳ ಪ್ರಕಾರ, ಸ್ಥಳೀಯರು ಕನಿಷ್ಠ ಮೂವರನ್ನು ರಕ್ಷಿಸಿದ್ದಾರೆ. ಟಿವಿ ವಾಹಿನಿಗಳಲ್ಲಿ ಪ್ರಸಾರವಾದ ಕ್ಲಿಪ್‌ನಲ್ಲಿ ಪ್ರತ್ಯಕ್ಷದರ್ಶಿಯೊಬ್ಬರು, “ಬೇಗ ಓಡಿ ಸ್ನೇಹಿತರೇ, ಫೋಟೋ ತೆಗೆದುಕೊಳ್ಳಿ” ಎಂದು ಹೇಳುತ್ತಿರುವುದು ಕೇಳಿಸಿದೆ.

ಘಟನಾ ಸ್ಥಳದ ಸಮೀಪವಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲೂ ಕಲ್ಲಾಡಿಯ ಮೀನಾಕ್ಷಿ ಸೇತುವೆಯ ಬಳಿ ಮಣ್ಣು ರಸ್ತೆಗೆ ನುಗ್ಗುತ್ತಿದ್ದಂತೆ ಜನರು ಓಡುತ್ತಿರುವುದು ಕಂಡುಬಂದಿದೆ.

ರಕ್ಷಣಾ ಕಾರ್ಯಾಚರಣೆಗಾಗಿ ಪೊಲೀಸ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ ಹಾಗೂ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (KSDMA) ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ವರದಿಗಳ ಪ್ರಕಾರ, ಭೂಕುಸಿತದಿಂದಾಗಿ ಕನಿಷ್ಠ ಏಳು ಜನರು ನಾಪತ್ತೆಯಾಗಿದ್ದಾರೆ ಎಂದು ದೃಢಪಟ್ಟಿದೆ. ಇತರ ಏಳು ಜನರನ್ನು ರಕ್ಷಿಸಲಾಗಿದ್ದು, ಸದ್ಯ ಅವರು ಗಾಯಗೊಂಡಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ ಎರಡಕ್ಕೇರಿದೆ.

“ಎರಡು ಸಾವುಗಳು ದೃಢಪಟ್ಟಿವೆ. ರಸ್ತೆ ತೆರವುಗೊಳಿಸಿದ ನಂತರ ರಕ್ಷಣಾ ಕಾರ್ಯ ಪೂರ್ಣಗೊಳ್ಳಲಿದೆ. ಕೇರಳದ ಹೊರಗಿನಿಂದ ಬಂದಿದ್ದ ಕಾರ್ಮಿಕರ ಚಿಕಿತ್ಸೆಗಾಗಿ ವಯನಾಡಿನ ಎಲ್ಲಾ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದೇವೆ. ಪ್ರಾಥಮಿಕ ವರದಿಯ ಪ್ರಕಾರ, ಈ ಘಟನೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಯಾವುದೇ ತೊಂದರೆಯಾಗಿಲ್ಲ,” ಎಂದು ಆರೋಗ್ಯ ಸಚಿವ ಕೆ ಮುರಳೀಧರನ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...