Homeಮುಖಪುಟವಿಡಿಯೋ| ಕೊರೊನಾ ಹೆಲ್ಮೆಟ್‌ ಪರಿಚಯಿಸಿ ಮಾದರಿಯಾದ ಚನ್ನೈ ಪೊಲೀಸ್‌

ವಿಡಿಯೋ| ಕೊರೊನಾ ಹೆಲ್ಮೆಟ್‌ ಪರಿಚಯಿಸಿ ಮಾದರಿಯಾದ ಚನ್ನೈ ಪೊಲೀಸ್‌

- Advertisement -
- Advertisement -

ಕೊರೊನಾ ವೈರಸ್‌ ಇಡೀ ಜಗತ್ತಿನಾದ್ಯಂತ ತಾಂಡವವಾಡುತ್ತಿದೆ. ಬಡವರಿಂದ ಉಳ್ಳವರವರೆಗೂ ಎಲ್ಲರೂ ಕೊರೊನಾ ವೈರಸ್‌ನ ಆರ್ಭಟಕ್ಕೆ ಭೀತರಾಗಿ ಕುಳಿತಿದ್ದಾರೆ. ಭಾರತದಲ್ಲಿ 21 ದಿನಗಳ ಕಾಲ ಲಾಕ್‌ಔಟ್‌ ಘೋಷಿಸಿದ್ದು, ಯಾರೂ ಮನೆಯಿಂದ ಹೊರಬರುವಂತಿಲ್ಲ ಎಂದು ಆದೇಶಿಸಲಾಗಿದೆ.  ಈ ತುರ್ತು ಘೋಷಣೆಯಿಂದಾಗಿ ಹಲವಾರು ಜನರು ತಮಗೆ ಬೇಕಾದ ಅತ್ಯಾವಶ್ಯಕ ಸಾಮಗ್ರಿಗಳನ್ನು ಹೊಂದಿಸಿಕೊಳ್ಳಲಾಗದೆ, ಊರಿಂದೂರಿಗೆ ಗುಳೆ ಬಂದವರು ತಮ್ಮೂರಿಗೆ ಹಿಂದಿರಗಲೂ ಆಗದೆ ಪರದಾಡುತ್ತಿದ್ದಾರೆ.

ಕೆಲವರು ಏನಾದರೂ ಸಿಕ್ಕರೆ ಕೊಂಡು ತರಲು ಅಂಗಡಿಗಳನ್ನು ಹುಡುಕುತ್ತಿದ್ದರೆ, ಮತ್ತೂ ಕೆಲವರು ಊರ ಹಾದಿ ಹುಡುಕಿ ಹೊರಟಿದ್ದಾರೆ. ಹೀಗೆಲ್ಲಾ ಬೀದಿಗೆ ಬಂದವರನ್ನು ಪೋಲೀಸರು ಅಡ್ಡಗಟ್ಟಿ ತಮ್ಮ ಲಾಠಿ ಪ್ರಹಾರ ನಡೆಸುತ್ತಿದ್ದಾರೆ. ಮಕ್ಕಳಿದ್ದ ವಯಸ್ಸಾದ ವೃದ್ಧರವರೆಗೂ ಹಿಂದೆ ಮುಂದೆ ನೋಡದೇ ಬಾಸುಂಡೆಗಳ ಅವರ ಬೆನ್ನಮೇಲೆ ಕೊರೊನಾ ಸಂಕಷ್ಟದ ಗುರುತುಗಳನ್ನು ಮೂಡಿಸುತ್ತಿವೆ. ಪೊಲೀಸರೋ ಮಾನವೀಯತೆ ಎಂದರೇನು ಎಂಬುದನ್ನೇ ಮರೆತ ಮೃಗಗಳಂತೆ ವರ್ತಿಸುತ್ತಿದ್ದಾರೆ.

ಇಂತಹ ಪೊಲೀಸರ ಕ್ರೌರ್ಯದ ನಡುವೆಯೂ ಕೆಲವು ಮಾನವೀಯ ಪೊಲೀಸರು ನಿರ್ಗತಿಕರಿಗೆ, ನಿರಾಶ್ರಿತರಿಗೆ ಊಟ, ತಿಂಡಿ, ನೀರಿನ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ತಮ್ಮೊಳಗಿನ ಮಾನವೀಯತೆ ಜೊತೆಗೆ ತಮ್ಮ ಕರ್ತವ್ಯವೂ ಎಂಬಂತೆ ಬಡವರಿಗೆ ನೆರವಾಗುತ್ತಿದ್ದಾರೆ.

ಇದೆಲ್ಲದರ ನಡುವೆ ವಿಶೇಷ ಎಂಬಂತೆ ಕಾಣುತ್ತಿರುವುದು ತಮಿಳುನಾಡು ಪೊಲೀಸರ ಸೃಜನಾತ್ಮಕವಾಗಿ ಅರಿವು ಮೂಡಿಸುತ್ತಿರುವ ಕಲೆ. ರಸ್ತೆಯಲ್ಲಿ ಓಡಾಡುತ್ತಿರುವ, ಒಂದೂರಿಂದ ಮತ್ತೊಂದು ಊರಿಗೆ ಸಂಚರಿಸುತ್ತಿರುವ ದ್ವಿಚಕ್ರ ವಾಹನ ಸವಾರರಿಗೆ ಲಾಕ್‌ಡೌನ್‌ನ ಉದ್ದೇಶವನ್ನೂ, ಜನರು ಮನೆಯಿಂದ ಹೊರಬರದಂತೆ 21 ದಿನಗಳ ಕಾಲ ಮನೆಯಲ್ಲೇ ಉಳಿಯುವಂತೆ ಎಚ್ಚರಿಕೆಯ ಅರಿವು ಮೂಡಿಸಲು ಅದೇ ಕೊರೊನಾ ಹೆಲ್ಮೆಟ್‌ ಬಳಸಿ ಅಚ್ಚರಿಗೆ ಕಾರಣರಾಗಿದ್ದಾರೆ.

ಚೆನೈನ ಕಿಂಗ್‌ಗೌತಮ್ ಎಂಬ ಪೋಲೀಸ್‌ ಅಧಿಕಾರಿ ತಮ್ಮ ಹೆಲ್ಮೆಟ್‌ ಮೇಲೆ ಕೊರೊನಾ ವೈರಸ್‌ ರೀತಿಯಲ್ಲಿ ಡಿಸೈನ್‌ ಮಾಡಿಕೊಂಡು, ಆ ಹೆಲ್ಮೆಟ್‌ ಹಾಕಿಕೊಂಡು ರಸ್ತೆಯಲ್ಲಿ ನಿಂತು ಬರುವ ಬೈಕ್‌ ಸವಾರರನ್ನು ನಿಲ್ಲಿಸಿ, ತಾನು ಕೊರೊನಾ ನೀವು ಹೀಗೆ ರಸ್ತೆಯಲ್ಲಿ ಅಡ್ಡಾಡುತ್ತಿದ್ದರೆ, ಗುಂಪುಗುಂಪಾಗಿ ಓಡಾಡುತ್ತಿದ್ದರೆ, ನಾವು ನಿಮ್ಮ ಮೇಲೆ ದಾಳಿ ಮಾಡುತ್ತೇನೆ, ನಿಮ್ಮ ಆರೋಗ್ಯವನ್ನು ಕಿತ್ತುಕೊಂಡು, ಅನಾರೋಗ್ಯಕ್ಕೆ ಅವಕಾಶವಾಗುತ್ತದೆ. ನನ್ನಿಂದ ನಿಮ್ಮ ಜೀವಕ್ಕೂ ಅಪಾಯವಾದೀತು ಎಂದು ಕೊರೊನಾ ರೀತಿಯಲ್ಲೇ ಅರಿವು ಮೂಡಿಸುತ್ತಿದ್ದಾರೆ.

ಕ್ರೌರ್ಯವನ್ನು ಮೆರೆಯುತ್ತಿರುವ ಪೊಲೀಸರಿಗೆ ಇಂತಹ ಅಧಿಕಾರಿಗಳು ಮಾದರಿಯಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...