Homeಮುಖಪುಟವಿಡಿಯೊ | ಹೆದ್ದಾರಿಯ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕಾರು

ವಿಡಿಯೊ | ಹೆದ್ದಾರಿಯ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕಾರು

- Advertisement -
- Advertisement -

ಜಾರ್ಖಂಡ್‌ನಲ್ಲಿ ಸೋಮವಾರ ಸುರಿದ ಭಾರೀ ಮಳೆಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಕಾರು ಕೆಸರಿನ ಗುಂಡಿಯಲ್ಲಿ ಸಿಲುಕಿಕೊಂಡು ಪರದಾಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸಚಿವ ಚೌಹಾಣ್ ಅವರು ಬಹರಗೋರಾದಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯಲ್ಲಿ ಭಾಗವಹಿಸಿದ್ದ ವೇಳೆ ಈ ಘಟನೆ ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗುಂಡಿಗೆ ಸಿಲುಕಿದ ಕಾರಣ ಸಚಿವರು ತಮ್ಮ ವಾಹನದಿಂದ ಹೊರಬರುತ್ತಿದ್ದಂತೆ ಭದ್ರತಾ ಸಿಬ್ಬಂದಿ ಅವರಿಗೆ ಸಹಾಯ ಮಾಡಲು ಧಾವಿಸುತ್ತಿರುವುದು ವೀಡಿಯೊದಲ್ಲಿ ದಾಖಲಾಗಿದೆ. ಅದೃಷ್ಟವಶಾತ್ ಚೌಹಾಣ್ ಅವರು ಯಾವುದೇ ಅಪಾಯದಿಂದ ಪಾರಾಗಿದ್ದಾರೆ. ಅದಾಗ್ಯೂ ಅವರು ಮಳೆಯ ನಡುವೆಯೂ ಪಟ್ಟಣದಲ್ಲಿ ಪಕ್ಷದ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂಓದಿ: FACT CHECK : ಮುಸ್ಲಿಮರು ರೈಲು ಹಳಿ ತಪ್ಪಿಸುವ ಪ್ರಯತ್ನ ಮಾಡಿದ್ರಾ? ವೈರಲ್ ಫೋಟೋದ ನಿಜಾಂಶ ಏನು?

ಭಾರೀ ಮಳೆಯ ನಡುವೆ ನೀರು ತುಂಬಿರುವ ರಸ್ತೆಯಲ್ಲಿನ ಹೊಂಡಗಳ ಆಳ ತಿಳಿಯಲು ಚಾಲಕನಿಗೆ ಅಸಾಧ್ಯವಾಗದ ಕಾರಣ ಕಾರು ಸಿಲುಕಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಸಿಕ್ಕಿಹಾಕಿಕೊಂಡ ನಂತರ, ಚೌಹಾಣ್ ಛತ್ರಿಯೊಂದಿಗೆ ಕೆಳಗಿಳಿದು ಸ್ಥಳೀಯರೊಂದಿಗೆ ಮಾತನಾಡಿದ್ದಾರೆ. ಇದರ ನಂತರ ಅವರು ಸುರಕ್ಷಿತವಾಗಿ ಹೆಲಿಪ್ಯಾಡ್‌ಗೆ ಹೋಗಿ ಹೆಲಿಕಾಪ್ಟರ್‌ನಲ್ಲಿ ರಾಂಚಿಗೆ ಮರಳಿದರು ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಅಜಿತ್ ಕುಮಾರ್ ಕುಜೂರ್ ತಿಳಿಸಿದ್ದಾರೆ.

ಹಿಂದಿನ ದಿನ ಜಾರ್ಖಂಡ್ ಬಿಜೆಪಿ ಚುನಾವಣಾ ಉಸ್ತುವಾರಿ ಆಗಿರುವ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಹೇಮಂತ್ ಸೊರೆನ್ ನೇತೃತ್ವದ ಜಾರ್ಖಂಡ್ ಸರ್ಕಾರವನ್ನು ಟೀಕಿಸಿದ್ದರು. ಆಡಳಿತರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ಜೆಎಂಎಂ ಅನ್ನು ಅವರು  “ಜುರ್ಮ್, ಮರ್ಡರ್ ಮತ್ತು ಮಾಫಿಯಾ” ಸರ್ಕಾರ ಎಂದು ಕರೆದಿದ್ದಾರೆ.

ಬಹರಗೋರಾದಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಿವರಾಜ್ ಚೌಹಾಣ್, ಜಾರ್ಖಂಡ್‌ನಲ್ಲಿ ಆವರಿಸಿರುವ ಕತ್ತಲೆ ಶೀಘ್ರದಲ್ಲೇ ಮಾಯವಾಗಲಿದೆ ಮತ್ತು ಬದಲಾವಣೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಂತರ, ಮಾಧ್ಯಮಗಳೊಂದಿಗೆ ಮಾತನಾಡಿದ ಚೌಹಾಣ್, ಜಾರ್ಖಂಡ್‌ನ ಮಹಿಳೆಯರು ತಮ್ಮ ಭೂಮಿ, ಹೆಣ್ಣುಮಕ್ಕಳು ಮತ್ತು ಉದ್ಯೋಗಗಳನ್ನು ರಕ್ಷಿಸಲು ಸಹಾಯವನ್ನು ಕೇಳುತ್ತಿದ್ದಾರೆ; ಒಳನುಸುಳುವಿಕೆಯನ್ನು ನಿಲ್ಲಿಸಿ ಸುರಕ್ಷತೆ ಮತ್ತು ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಬಿಜೆಪಿ ಭರವಸೆ ನೀಡುತ್ತದೆ ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ಮಾಮರದ ತಂಪಿಗೆ ಕೂತಿರುವ ಗಿಳಿಗಳೆ ಹಾಡು mamarada tampige kootiruva giligale

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...