Homeಕರ್ನಾಟಕದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

- Advertisement -
- Advertisement -

ನಿಮ್ಹಾನ್ಸ್‌ ಆಸ್ಪತ್ರೆಯ ಅಧಿಕಾರಿಗಳು ನಮ್ಮನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಮುದಾಯಕ್ಕೆ ಸೇರಿದ 15 ಮಹಿಳೆಯರು ಸೇರಿದಂತೆ ಒಟ್ಟು 19 ಮಂದಿ ಬೆಂಗಳೂರಿನಲ್ಲಿ ಜುಲೈ 9 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರು ತಮ್ಮನ್ನು ಮತ್ತೆ ಸೇವೆಗೆ ತೆಗೆದುಕೊಳ್ಳುವಂತೆ ಆಡಳಿತ ಮಂಡಳಿಯನ್ನು ಒತ್ತಾಯಿಸಿದ್ದಾರೆ.

ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ (ಎಐಸಿಸಿಟಿಯು) ಗೆ ಸಂಯೋಜಿತವಾಗಿರುವ ನಿಮ್ಹಾನ್ಸ್ ಪ್ರಗತಿಪರ ವರ್ಕರ್ಸ್ ಯೂನಿಯನ್ (ಎನ್‌ಪಿಡಬ್ಲ್ಯುಯು) ಅಡಿಯಲ್ಲಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ಲಸಿಕೆ ನೀಡಲು ಒತ್ತಾಯಿಸಿ ರಾಜ್ಯವ್ಯಾಪಿ ಪ್ರತಿಭಟನೆ

ಕೊರೊನಾ ನೈಟ್‌ ಕರ್ಫ್ಯೂ ಇದ್ದಂತಹ (ಎರಡು ತಿಂಗಳ ಹಿಂದೆ) ಸಮಯಲ್ಲಿ ನೌಕರರಿಗೆ ರಾತ್ರಿ 9:30 ವರೆಗೆ ಕೆಲಸ ನಿರ್ವಹಿಸುವಂತೆ ನಿಮ್ಹಾನ್ಸ್‌ ಆಡಳಿತ ಮಂಡಳಿಯು ನಿರ್ದೇಶಿಸಿತ್ತು. ಆದರೆ ಕಾರ್ಮಿಕರು ರಾತ್ರಿ ಹೊತ್ತು ಬಸ್ಸುಗಳು ಇಲ್ಲದಿರುವ ಕಾರಣ, ತಮಗೆ ವಾಹನಗಳನ್ನು ವ್ಯವಸ್ಥೆ ಮಾಡಿಕೊಡಿ ಎಂದು ಕೋರಿದ್ದರು. ಇಷ್ಟಕ್ಕೆ ಆಡಳಿತ ಮಂಡಳಿ ಕಾರ್ಮಿಕರನ್ನು ಸೇವೆಯಿಂದ ವಜಾಗೊಳಿಸಿದೆ ಎಂದು ಎನ್‌ಪಿಡಬ್ಲ್ಯುಯು ಆರೋಪಿಸಿದೆ.

ಪ್ರತಿಭಟನಾ ಸ್ಥಳಕ್ಕೆ ಸಾಮಾಜಿಕ ಹೋರಾಟಗಾರರಾಗಿರುವ ವಿನಯ್ ಶ್ರೀನಿವಾಸ್ ಅವರು ಭೇಟಿ ನೀಡಿ ಕಾರ್ಮಿಕರಿಗೆ ಬೆಂಬಲ ನೀಡಿದ್ದಾರೆ.

ಪ್ರತಿಭಟನಾ ನಿರತ ಮಹಿಳೆಯರು ತಮ್ಮ ಅಳಲನ್ನು ತೋಡಿಕೊಂಡಿದ್ದು, ನಾವು ಯಾವುದೆ ತಪ್ಪನ್ನು ಮಾಡಿಲ್ಲ. ಕೊರೊನಾದಂತಹ ಸಂಕಷ್ಟದಲ್ಲಿ ಕೂಡಾ ನಾವು ಕೆಲಸ ಮಾಡಿದ್ದೇವೆ. ಕೆಲಸದ ಸಮಯ ಬದಲಾಯಿಸದ್ದನ್ನು ಪ್ರಶ್ನಿಸಿರುವುದಕ್ಕೆ ನಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ನಮಗೆ ನ್ಯಾಯ ಸಿಗಬೇಕು ಎಂದು ಹೇಳಿದ್ದಾರೆ. ವಿಡಿಯೊವನ್ನು ಕೆಳಗೆ ನೋಡಬಹುದು.

ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

“ವಿಕಿರಣಶಾಸ್ತ್ರ ವಿಭಾಗದಲ್ಲಿ ಕೆಲಸ ಮಾಡುವವರಿಗೆ ಮಾತ್ರ ಕೆಲಸದ ಸಮಯವನ್ನು ಬದಲಾಯಿಸಲಾಗಿದೆ. ಈ ವಿಭಾಗದಲ್ಲಿ ಹೆಚ್ಚಿನ ಆಸ್ಪತ್ರೆ ಸಹಾಯಕರು ಮಹಿಳೆಯರೇ ಆಗಿರುವುದರಿಂದ, ಕಾರ್ಮಿಕರು ತಮ್ಮ ಸುರಕ್ಷತೆ ಬಗ್ಗೆ ಆತಂಕಗಳನ್ನು ವ್ಯಕ್ತಪಡಿಸಿದ್ದರು. ಜೊತೆಗೆ ಕನಿಷ್ಠ ಸಾರಿಗೆ ವ್ಯವಸ್ಥೆಯನ್ನಾದರೂ ಮಾಡಿ ಎಂದು ಕೋರಿದ್ದರು. ಆದಾಗ್ಯೂ, ಅವರನ್ನು ಜುಲೈ 9 ರಂದು ಸೇವೆಯಿಂದ ವಜಾಗೊಳಿಸಲಾಯಿತು” ಎಂದು ಎನ್‌ಪಿಡಬ್ಲ್ಯುಯು ಪ್ರಧಾನ ಕಾರ್ಯದರ್ಶಿ ಎಂ.ಬಸವರಾಜ್ ಹೇಳಿದ್ದಾರೆ.

“ನಾವು ಹೊರಗುತ್ತಿಗೆ ಏಜೆನ್ಸಿಯಿಂದ ಬಂದವರಾಗಿದ್ದರೂ, ನಿಮ್ಹಾನ್ಸ್ ಅಧಿಕಾರಿಗಳ ಸೂಚನೆ ಮೇರೆಗೆ ಈ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ನಮ್ಮನ್ನು ಮತ್ತೆ ಸೇವೆಗೆ ಸೇರಿಸಿಕೊಳ್ಳುವವರೆಗೂ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಆದರೆ ಪ್ರತಿಭಟನಾಕಾರ ಕಾರ್ಮಿಕರ ಆರೋಪಗಳನ್ನು ನಿಮ್ಹಾನ್ಸ್ ರಿಜಿಸ್ಟ್ರಾರ್ ಬಿ.ಎಸ್. ಶಂಕರನಾರಾಯಣ ರಾವ್ ಅವರು ನಿರಾಕರಿಸಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ. ಅವರು ಹೇಳುವಂತೆ, “ಎಲ್ಲಾ ಕಾರ್ಮಿಕರು ಹೊರಗುತ್ತಿಗೆ ಏಜೆನ್ಸಿಗೆ ಸೇರಿದವರು. ಯಾರೂ ನಿಮ್ಹಾನ್ಸ್‌ನಿಂದ ನೇರವಾಗಿ ಕೆಲಸ ಮಾಡುತ್ತಿಲ್ಲ. ಈ ಕಾರ್ಮಿಕರ ಮೇಲೆ ನಮಗೆ ಯಾವುದೇ ನಿಯಂತ್ರಣವಿಲ್ಲ. ಅವರ ಕೆಲಸದ ಸ್ವರೂಪವನ್ನು ತೀರ್ಮಾನಿಸಲು ಏಜೆನ್ಸಿಗೆ ಅಧಿಕಾರವಿದೆ” ಎಂದು ಅವರು ದಿ ಹಿಂದೂಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಏಕಾಂಗಿ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕ: ಧರಣಿ ಬಳಿಕ ಸಿದ್ದರಾಮಯ್ಯ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...