Homeಕರ್ನಾಟಕವಿಧಾನಸೌಧ ಚಲೋ: ಮೊಳಗಿದ ‘ಭೀಮ ಸಾಗರ’ದ ಆಗ್ರಹ

ವಿಧಾನಸೌಧ ಚಲೋ: ಮೊಳಗಿದ ‘ಭೀಮ ಸಾಗರ’ದ ಆಗ್ರಹ

ನ್ಯಾಯಾಧೀಶ ಮಲ್ಲಿಕಾರ್ಜುನಗೌಡರ ವಜಾಕ್ಕೆ ಒತ್ತಾಯಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು.

- Advertisement -
- Advertisement -

ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಲಾಯಿತು.

ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಧ್ವಜಾರೋಹಣ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು.

ರಾಜ್ಯದ ಮೂಲೆ ಮೂಲೆಗಳಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್‌ ಅನುಯಾಯಿಗಳು ಆಗಮಿಸಿದ್ದರು. ದಲಿತ ವಿದ್ಯಾರ್ಥಿ ಪರಿಷತ್‌, ಎಸ್‌ಡಿಪಿಐ, ಬಿಎಸ್‌ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್‌- ಹೀಗೆ ಹಲವು ಸಂಘಟನೆಗಳು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ಭಾಗವಾಗಿದ್ದವು. ನೂರಾರು ವಾಹನಗಳನ್ನು ಮಾಡಿಕೊಂಡು ದೂರದ ಜಿಲ್ಲೆಗಳಿಂದ ಸಾವಿರಾರು ಜನರು ಬೆಂಗಳೂರಿಗೆ ಆಗಮಿಸಿದ್ದರು.

ಕೇಂದ್ರ ರೈಲ್ವೆ ನಿಲ್ದಾಣದಿಂದ ಪ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆಸಲಾಯಿತು. ದಾರಿಯುದ್ದಕ್ಕೂ ಜೈಭೀಮ್ ಘೋಷಣೆಗಳು ಮೊಳಗಿತು. ನೀಲಿ ಭಾವುಟ, ನೀಲಿ ಶಾಲುಗಳು, ನೀಲಿ ಟೋಪಿಗಳು ರಾರಾಜಿಸಿದವು. ಕಲಾವಿದರು ವಾದ್ಯ ನುಡಿಸುತ್ತ ಮೆರವಣಿಗೆಯನ್ನು ಮುನ್ನಡೆಸಿದರು. ಪೊಲೀಸ್‌ ಬಿಗಿ ಬಂದೋಬಸ್ತ್‌ ಮಾಡಲಾಗಿತ್ತು.

“ಕೋರ್ಟ್ ಸಭಾಂಗಣದಲ್ಲಿಯೇ ಅಂಬೇಡ್ಕರ್‌ ಭಾವಚಿತ್ರ ಇರುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಬೇಕು. ನ್ಯಾಯಾಲಯದಲ್ಲಿ ಮೀಸಲಾತಿ ಕಡ್ಡಾಯ ಮಾಡಬೇಕು. ಹುಮನಾಬಾದ್ ತಹಸೀಲ್ದಾರ್‌ ವಿರುದ್ಧವೂ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಲಾಯಿತು.

ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, “ಅಂಬೇಡ್ಕರ್‌ ಹಾಗೂ ಸಂವಿಧಾನವನ್ನು ಅವಮಾನಿಸುವುದರ ಹಿಂದೆ ಬಹುದೊಡ್ಡ ಷಡ್ಯಂತ್ರವೇ ಇದೆ. ಮಲ್ಲಿಕಾರ್ಜುನಗೌಡರ ವಿರುದ್ಧ ಸೂಕ್ತ ಕ್ರಮ ಜರುಗಿಸದಿದ್ದರೆ ಹೋರಾಟ ತೀವ್ರಗೊಳ್ಳಲಿದೆ” ಎಂದು ಎಚ್ಚರಿಸಿದರು.

ಬಿಎಸ್‌ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಮಾತನಾಡಿ, “ಅಂಬೇಡ್ಕರ್‌ ಹೆಸರಲ್ಲಿ ಗೆದ್ದ ಅನೇಕರು ಮನುವಾದಿಗಳಾಗಿದ್ದಾರೆ. ಈ ಹಿಂದೆಯೂ ಅಂಬೇಡ್ಕರ್‌ರವರಿಗೆ ಅವಮಾನ ಮಾಡಿರುವ ಘಟನೆಗಳು ನಡೆದಿವೆ” ಎಂದು ಬೇಸರ ವ್ಯಕ್ತಪಡಿಸಿದರು.

ಮೆರವಣಿಗೆ ವೇಳೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹಿರಿಯ ದಲಿತ ಹೋರಾಟಗಾರ ಮಾವಳ್ಳಿ ಶಂಕರ್‌, “ಮಲ್ಲಿಕಾರ್ಜುನ ಗೌಡ ಅವರನ್ನು ನ್ಯಾಯಮೂರ್ತಿ ಎನ್ನುತ್ತಾರೆ. ಆದರೆ ಅವರ ಒಳಗಡೆ ಇರುವುದು ಜಾತಿವಾದಿ ಮನಸ್ಸು. ಬಸವಣ್ಣ ಹಾಗೂ ಕುವೆಂಪು ಅವರ ನಾಡಿನಲ್ಲಿ ಇಂತಹ ಜಾತಿವಾದಿ ಮನಸ್ಸುಗಳು ನ್ಯಾಯಸ್ಥಾನದಲ್ಲಿ ಕುಳಿತಿರುವುದು ಅತ್ಯಂತ ಅಪಮಾನಕರ ಸಂಗತಿ. ಬಾಬಾ ಅಂಬೇಡ್ಕರ್‌ರವರಿಗೆ ಕಿಂಚಿತ್ತು ಅಪಮಾನವಾದರೂ ಈ ಶೋಷಿತ ಸಮುದಾಯಗಳು ಸುಮ್ಮನಿರುವುದಿಲ್ಲ ಎಂಬುದನ್ನು ಈ ನಾಡಿಗೆ ತೋರಿಸಿಕೊಡಲಾಗಿದೆ” ಎಂದರು.

ಇದನ್ನೂ ಓದಿರಿ: ವಿಜಯಪುರ: ತಿಲಕ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

ಬಾಬಾ ಸಾಹೇಬರು ಯಾವುದೋ ಒಂದು ಜಾತಿ ವರ್ಗದ ನಾಯಕರಲ್ಲ. ಇಡೀ ದೇಶದ ಜನ ಇಂದು ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಬಗ್ಗೆ ಮಾತನಾಡುತ್ತಿದ್ದಾರೆ. ಅನೇಕ ಸಮುದಾಯಗಳು ಬಾಬಾ ಸಾಹೇಬರು ಬರೆದ ಸಂವಿಧಾನ ಆಶಯಗಳನ್ನು ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಇದು ಒಂದು ಒಳ್ಳೆಯ ಬೆಳವಣಿಗೆ ಎಂದು ಸಂತಸ ವ್ಯಕ್ತಪಡಿಸಿದರು.

ಬಾಬಾ ಸಾಹೇಬರು ಸಮಾನತೆ, ಭ್ರಾತೃತ್ವದ ಸಂಕೇತ. ಎಲ್ಲ ನ್ಯಾಯಾಲಯಗಳಲ್ಲಿ ಅಂಬೇಡ್ಕರ್‌ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕು. ಪ್ರತಿಭಟನೆಗೆ ಹೆದರಿದ ಹೈಕೋರ್ಟ್ ರಾಷ್ಟ್ರೀಯ ಹಬ್ಬಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್‌ ಫೋಟೋ ಇಡಲು ಸೂಚಿಸಿದೆ. ಇಷ್ಟೇ ಅಲ್ಲದೆ ಬೇರೆ ದಿನಗಳಲ್ಲಿಯೂ ನ್ಯಾಯಾಲಯದಲ್ಲಿ ಅಂಬೇಡ್ಕರ್‌ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು. ಹೈಕೋರ್ಟ್ ಆದೇಶ ತಿದ್ದುಪಡಿಯಾಗಬೇಕಿದೆ ಎಂದು ಒತ್ತಾಯಿಸಿದರು.

ಇದನ್ನೂ ಓದಿರಿ: ಮೈಸೂರು: ಸರ್ಕಾರಿ ಶಾಲೆಯ ಅಭಿವೃದ್ಧಿಗೆ 2.5 ಎಕರೆ ಜಮೀನು ದಾನ ಮಾಡಿದ ಮುಸ್ಲಿಂ ಕುಟುಂಬ

‘ಅರಾಜಕತೆಯೇ ಸಂಘಪರಿವಾರದ ಉದ್ದೇಶ’

ಅನೇಕ ಸಮಸ್ಯೆಗಳು ಜೀವಂತವಾಗಿವೆ. ಈ ಸರ್ಕಾರ, ಸಂಘಪರಿವಾರಕ್ಕೆ ಇದ್ಯಾವುದೂ ಬೇಕಾಗಿಲ್ಲ. ಬೇಕಾಗಿರುವುದು ಹಿಜಾಬ್ ವಿವಾದ ಮಾತ್ರ. ತಮ್ಮ ಧಾರ್ಮಿಕ ಹಕ್ಕುಗಳಿಗೆ ಅನುಸಾರವಾಗಿ ಹಿಜಾಬ್ ಧರಿಸಿ ಹೆಣ್ಣುಮಕ್ಕಳು ಶಾಲಾ, ಕಾಲೇಜುಗಳಿಗೆ ಹೋಗುತ್ತಿದ್ದರು. ಇದನ್ನು ದೊಡ್ಡದಾಗಿ ವಿವಾದ ಮಾಡಲಾಗಿದೆ. ಈ ವೈದಿಕರು, ಮನುವಾದಿ ಸಂತತಿಯವರು ದೇಶವನ್ನು ನೆಮ್ಮದಿಯಾಗಿ ಇಡಲು ಬಿಡುವುದಿಲ್ಲ. ದೇಶವನ್ನು ಅರಾಜಕ ಸ್ಥಿತಿಯಲ್ಲಿ ಇಡಬೇಕು ಎಂಬುದು ಸಂಘ ಪರಿವಾರದ ಪಿತೂರಿ. ಮುಂದಿನ ಚುನಾವಣೆಯಲ್ಲಿ ಸರಿಯಾದ ಪಾಠವನ್ನು ಕಲಿಸಬೇಕಿದೆ ಎಂದು ಮಾವಳ್ಳಿ ಶಂಕರ್‌ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ನಟ, ಹೋರಾಟಗಾರ ಚೇತನ್‌ ಅಹಿಂಸಾ, “ಎಲ್ಲ ಅಂಬೇಡ್ಕರ್‌, ಪೆರಿಯಾರ್‌ ವಾದಿಗಳು ನೀಲಿ ಶಾಲು ಧರಿಸಿ ಇಲ್ಲಿ ಸೇರಿದ್ದೇವೆ. ಮಲ್ಲಿಕಾರ್ಜುನ ಗೌಡ ಅವರಿಗೆ ನ್ಯಾಯ ಎಂದರೆ ಏನೆಂದು ಗೊತ್ತಿಲ್ಲ. ರಾಜ್ಯದಲ್ಲಿ ನಿರ್ಲಕ್ಷ್ಯದ ಸರ್ಕಾರವಿದೆ. ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್ ಪಕ್ಷಗಳು ಈ ಹೋರಾಟದ ಪರ ನಿಲ್ಲಲಿಲ್ಲ” ಎಂದು ದೂರಿದರು.

ಮಲ್ಲಿಕಾರ್ಜುನಗೌಡರಂಥವರು ಕಣ್ಣಿಗೆ ಕಾಣುವ ಶತ್ರುಗಳು. ಆದರೆ ಎಲ್ಲ ಪಕ್ಷಗಳು ಬಾಬಾ ಸಾಹೇಬರ ಫೋಟೋ ಮಾತ್ರ ಹಾಕಿಕೊಂಡು ನಮ್ಮನ್ನು ದಿಕ್ಕು ತಪ್ಪಿಸುತ್ತಿವೆ. ಇವರು ಬಹಳ ಅಪಾಯಕಾರಿ ಶತ್ರುಗಳು. ಅವರ ವಿರುದ್ಧವೂ ನಾವು ನಿಂತುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ನಾವು ನೀಲಿ ಶಾಲುಗಳು: ಚೇತನ್‌

“ನಾವು ಹಿಂದೂ ಅಲ್ಲ, ಮುಸಲ್ಮಾನರೂ ಅಲ್ಲ. ನಾವು ಸಮಾನತಾ ವಾದಿಗಳು. ನಾವು ಬಿಜೆಪಿಯೂ ಅಲ್ಲ, ಕಾಂಗ್ರೆಸ್ಸೂ ಅಲ್ಲ. ನಾವು ಪರ್ಯಾಯ ಶಕ್ತಿಗಳು. ಈಗ ದೊಡ್ಡ ವಿವಾದ ನಡೆಯುತ್ತಿದೆ. ನಾವು ಕೇಸರಿ ಶಾಲೂ ಅಲ್ಲ, ಹಿಜಾಬೂ ಅಲ್ಲ. ನಾವು ನೀಲಿ ಶಾಲುಗಳು. ಬದಲಾವಣೆಯೇ ಪರ್ಯಾಯವಾಗಿದೆ. ಈ ಘೋಷಣೆ ರಾಜ್ಯದ ಮೂಲೆಮೂಲೆಗೂ ಹರಡುತ್ತಿದೆ” ಎಂದು ಚೇತನ್ ತಿಳಿಸಿದರು.

ಸಿಎಂ ಸ್ಥಳಕ್ಕೆ ಭೇಟಿ: ಭರವಸೆ

ಪ್ರತಿಭಟನಾ ಸ್ಥಳಕ್ಕೆ (ಫ್ರೀಡಂ ಪಾರ್ಕ್‌)  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ, ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಹೋರಾಟಗಾರರ ಮನವಿ ಪತ್ರವನ್ನು ಸಿಎಂ ಸ್ವೀಕರಿಸಿದರು. ಜೊತೆಗೆ ಮಲ್ಲಿಕಾರ್ಜುನ ಗೌಡ ಅವರ ನಡೆಯನ್ನು ಖಂಡಿಸಿದರು.

“ಅಂಬೇಡ್ಕರ್‌ ಫೋಟೋ ತೆರವು ಮಾಡಿಸಿ ಅವಮಾನ ಮಾಡಿದ ಘಟನೆಯು ನಮಗೂ ಕಣ್ಣು ತೆರೆಸಿದೆ. ಘಟನೆ ಸಂಬಂಧ ದಲಿತ ಸಮುದಾಯಗಳ ಮುಖಂಡರು ನನಗೆ ವಿವರಿಸಿದ್ದಾರೆ. ಶೀಘ್ರದಲ್ಲಿಯೇ ಸಂಬಂಧಪಟ್ಟವರಿಗೆ ಪತ್ರ ಬರೆಯಲಾಗುವುದು” ಎಂದು ತಿಳಿಸಿದರು.

ಚಿಂತಕ ಯೋಗೇಶ್‌ ಮಾಸ್ಟರ್‌, ಹ.ರಾ.ಮಹೇಶ್‌, ಹರಿರಾಮ್‌, ಬಿ.ಆರ್‌.ಭಾಸ್ಕರ್‌ ಪ್ರಸಾದ್‌ ಸೇರಿದಂತೆ ಹಲವು ಮುಖಂಡರು ಹೋರಾಟದಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...