Homeಕರೋನಾ ತಲ್ಲಣಜನವರಿ 1 ರಿಂದ ವಿದ್ಯಾಗಮ ಪುನರಾರಂಭ- ಸಚಿವ ಸುರೇಶ್ ಕುಮಾರ್‌

ಜನವರಿ 1 ರಿಂದ ವಿದ್ಯಾಗಮ ಪುನರಾರಂಭ- ಸಚಿವ ಸುರೇಶ್ ಕುಮಾರ್‌

- Advertisement -
- Advertisement -

ರಾಜ್ಯದ ಗ್ರಾಮೀಣ ಪ್ರದೇಶದ ಮಕ್ಕಳ ಹಿತದೃಷ್ಟಿಯಿಂದ ಜಾರಿಗೆ ಬಂದಿದ್ದ ವಿದ್ಯಾಗಮ ಯೋಜನೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ತೆರೆಯದಿರುವ ಕಾರಣ ಜನವರಿ 1 ರಿಂದ ವಿದ್ಯಾಗಮ ಪುನರಾರಂಭಿಸಲಾಗುತ್ತಿದೆ.

ಗ್ರಾಮೀಣ ಭಾಗದ ಮಕ್ಕಳು ಆನ್‌ಲೈನ್ ತರಗತಿಗಳಿಗೆ ನೆಟ್ ವರ್ಕ್ ಸಮಸ್ಯೆ, ವಿದ್ಯುತ್ ಸಮಸ್ಯೆ, ಸುಧಾರಿತ ಮೊಬೈಲ್ ಕೊರತೆ ಹೀಗೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಜನವರಿ 1 ರಿಂದ ಪರಿಷ್ಕೃತ ರೂಪದಲ್ಲಿ ಮತ್ತೆ ವಿದ್ಯಾಗಮವನ್ನ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕಳೆದ ಆಗಸ್ಟ್ 8 ರಿಂದ ವಿದ್ಯಾಗಮವನ್ನು ಆರಂಭಿಸಲಾಗಿತ್ತು. ನಂತರ ಅ.10 ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೂಪದಲ್ಲಿ ವಿದ್ಯಾಗಮ ಯೋಜನೆ ಅನುಷ್ಠಾನಗೊಳ್ಳಲಿದೆ.

ಇದನ್ನೂ ಓದಿ: ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಕೊರೊನಾ ಸಂದರ್ಭದಲ್ಲಿ ಮಕ್ಕಳ ಕಲಿಕೆಯನ್ನು ನಿರಂತರವಾಗಿರಿಸಲು, ತಂತ್ರಜ್ಞಾನದ ಲಭ್ಯತೆಯಿಲ್ಲದ  ಗ್ರಾಮೀಣ ಭಾಗದ ಮಕ್ಕಳಿಗೆ ಸಹಾಯ ಮಾಡುವ ಉದ್ದೇಶದಿಂದ ತಜ್ಞರ ಸಮಿತಿಯ ಶಿಫಾರಸ್ಸನ್ನು ಆಧರಿಸಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗಾಗಿ ವಿದ್ಯಾಗಮ ಆರಂಭಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳು, ಪಾಲಕರು, ಶಿಕ್ಷಕರು, ಸಮುದಾಯ ಮತ್ತು ಹಲವು ಸಂಘಟನೆಗಳು ಸಕ್ರಿಯವಾಗಿ ತೊಡಗಿಸಿಕೊಂಡಿದ್ದವು.

ವಿದ್ಯಾಗಮ ಆರಂಭವನ್ನು ಶಾಲೆಗಳ ಆರಂಭ ಎಂದು ಯಾರೂ ಭಾವಿಸಬಾರದು. ಕಲಿಕೆ ನಿರಂತರವಾಗಿಬೇಕು ಎಂಬ ದೃಷ್ಟಿಯಿಂದ ಈ ವಿದ್ಯಾಗಮ ಯೋಜನೆ ಪುನಾರಂಭಿಸಲಾಗಿದೆ. ಸ್ವಲ್ಪ ಬದಲಾವಣೆ ಮಾಡಿ ವಿದ್ಯಾಗಮವನ್ನು ಮತ್ತೆ ಜಾರಿಗೆ ತರಬೇಕು ಎಂದು ಶಿಕ್ಷಕ ವಲಯದಲ್ಲೂ ಅಭಿಪ್ರಾಯ ಕೇಳಿಬಂದಿತ್ತು. ಹಾಗಾಗಿ ಕೆಲವು ಸುಧಾರಿತ ಕ್ರಮಗಳೊಡನೆ ಈ ಯೋಜನೆಯನ್ನು ಮತ್ತೆ ಆರಂಭಿಸಲಾಗಿದೆ ಎಂದಿದ್ದಾರೆ.

ಶಿಕ್ಷಣ ಇಲಾಖೆ ಈ ಬಾರಿ ಹಲವು ಸುಧಾರಣೆಗಳನ್ನು ಕೈಗೊಂಡಿದ್ದು, ಯೋಜನೆ ಕೇವಲ ಸರ್ಕಾರಿ ಶಾಲೆಗಳಿಗೆ ಸೀಮಿತವಾಗಿಲ್ಲ. ಖಾಸಗಿ ಶಾಲೆಗಳು ಸಹ 1 ರಿಂದ 10ನೇ ತರಗತಿವರೆಗೆ ಅವಕಾಶವಿದೆ. ಇದು ಯಾವ ವಿದ್ಯಾರ್ಥಿಗೂ ಕಡ್ಡಾಯವಲ್ಲ. ತಂದೆ-ತಾಯಿ ಒಪ್ಪಿಗೆ ಕೊಟ್ಟರೆ ಮಾತ್ರ ವಿದ್ಯಾರ್ಥಿಗಳು ಹಾಜರಾಗಬಹುದು. ಎಲ್ಲರಿಗೂ ಕೊರೊನಾ ಮಾರ್ಗಸೂಚಿ ಕಡ್ಡಾಯ.

ಆರೋಗ್ಯದಲ್ಲಿ ತೊಂದರೆಗಳಿದ್ದರೆ ವಿದ್ಯಾರ್ಥಿಗಳು ಗುಣಮುಖರಾಗುವವರೆಗು ಬರುವಂತಿಲ್ಲ. ಆಯಾ ಜಿಲ್ಲೆಗಳ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ.


ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ?; ಕುಮಾರಸ್ವಾಮಿ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಇವಿಎಂ ಜನರ ಮನಸ್ಸಿನಲ್ಲಿ ಅಪನಂಬಿಕೆ ಸೃಷ್ಟಿಸಿದೆ: ಅಖಿಲೇಶ್ ಯಾದವ್

0
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್‌ ಬಳಕೆಗೆ ಆಗ್ರಹಿಸಿದ್ದು, ಇವಿಎಂಗಳನ್ನು ನೇರವಾಗಿ ಉಲ್ಲೇಖಿಸದೆ ಈ ಯಂತ್ರಗಳು ಮತ್ತು ಮತದಾನದ ಫಲಿತಾಂಶಗಳು ಜನರ ಮನಸ್ಸಿನಲ್ಲಿ ಅಪನಂಬಿಕೆಯ ಭಾವನೆಯನ್ನು ಮೂಡಿಸಿವೆ...