Homeಅಂತರಾಷ್ಟ್ರೀಯರಿಯಲ್ ಎಸ್ಟೇಟ್ ಉದ್ಯಮಿಯ ಮರಣದಂಡನೆ ಎತ್ತಿಹಿಡಿದ ವಿಯೆಟ್ನಾಂ ನ್ಯಾಯಾಲಯ

ರಿಯಲ್ ಎಸ್ಟೇಟ್ ಉದ್ಯಮಿಯ ಮರಣದಂಡನೆ ಎತ್ತಿಹಿಡಿದ ವಿಯೆಟ್ನಾಂ ನ್ಯಾಯಾಲಯ

- Advertisement -
- Advertisement -

ಹನೋಯಿ: 12 ಬಿಲಿಯನ್ ಡಾಲರ್ ವಂಚನೆ ಪ್ರಕರಣದಲ್ಲಿ ದುರುಪಯೋಗ ಮತ್ತು ಲಂಚದ ಅಪರಾಧದಲ್ಲಿ ಸಿಲುಕಿರುವ ರಿಯಲ್ ಎಸ್ಟೇಟ್ ಉದ್ಯಮಿ ಟ್ರೂಂಗ್ ಮೈ ಲ್ಯಾನ್‌  ವಿರುದ್ಧದ ಮೇಲ್ಮನವಿಯನ್ನು ತಿರಸ್ಕರಿಸಿದ ನಂತರ ವಿಯೆಟ್ನಾಂನ ನ್ಯಾಯಾಲಯವು ವಿಧಿಸಿರುವ ಮರಣದಂಡನೆ ಶಿಕ್ಷೆಯನ್ನು ಮಂಗಳವಾರದಂದು ಮತ್ತೆ ಎತ್ತಿಹಿಡಿದಿದೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.

ವಿಯೆಟ್ನಾಂನಲ್ಲಿ ದಾಖಲೆಯ ಅತಿದೊಡ್ಡ ಹಣಕಾಸು ವಂಚನೆ ಪ್ರಕರಣದಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ವ್ಯಾನ್ ಥಿನ್ ಫಾಟ್ ಹೋಲ್ಡಿಂಗ್ಸ್ ಗ್ರೂಪ್‌ನ ಅಧ್ಯಕ್ಷೆಯಾಗಿರುವ ಲ್ಯಾನ್ ಅವರ ಪಾತ್ರಕ್ಕಾಗಿ ನ್ಯಾಯಾಲಯವು ಇದೇ ಏಪ್ರಿಲ್‌ನಲ್ಲಿ ಅವರಿಗೆ ಮರಣದಂಡನೆ ವಿಧಿಸಿತ್ತು.

ದಕ್ಷಿಣ ಹೋ ಚಿ ಮಿನ್ಹ್ ನಗರದ ಹೈ ಪೀಪಲ್ಸ್ ಕೋರ್ಟ್ ಲ್ಯಾನ್ ಮರಣದಂಡನೆಯನ್ನುಕಡಿತಗೊಳಿಸಲು ಯಾವುದೇ ಆಧಾರಗಳಿಲ್ಲದ ಕಾರಣ ಈ ನಿರ್ಧಾರಕ್ಕೆ ಬಂದಿದೆ ಎಂದು ಆನ್‌ಲೈನ್ ಪತ್ರಿಕೆ VnExpress ವರದಿ ಮಾಡಿದೆ.

ಲ್ಯಾನ್ ಅವರು ವಂಚಿಸಿದ ಹಣದ ಮುಕ್ಕಾಲು ಭಾಗವನ್ನು ಹಿಂದಿರುಗಿಸಲು ಸಾಧ್ಯವಾದರೆ, ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

“ಲ್ಯಾನ್  ಪ್ರಕರಣ ದೇಶದ ಇತಿಹಾಸದಲ್ಲಿ ಅಭೂತಪೂರ್ವವಾಗಿದೆ ಹಾಗೆಯೇ  ದುರುಪಯೋಗಪಡಿಸಿಕೊಂಡ ಹಣದ ಮೊತ್ತವು ಅಭೂತಪೂರ್ವವಾಗಿ ದೊಡ್ಡದಾಗಿದೆ. ಅದು ಎಷ್ಟೆಂದರೆ ಮರುಪಡೆಯಲಾಗದಷ್ಟು” ಎಂದು ಸರ್ಕಾರಿ ಆನ್‌ಲೈನ್ ಪತ್ರಿಕೆ ಹೇಳಿದೆ.

ಈ ಪ್ರಕರಣವು ಸಮಾಜ, ದೇಶದ ಹಣಕಾಸು ಮಾರುಕಟ್ಟೆ, ಆರ್ಥಿಕತೆಯ ಹಲವು ಅಂಶಗಳ ಮೇಲೆ ಪರಿಣಾಮ ಬೀರಿದೆ ಎಂದು ಅದು ತಿಳಿಸಿದೆ.

ಲ್ಯಾನ್ ತನ್ನ ತಪ್ಪನ್ನು  ಒಪ್ಪಿಕೊಂಡಿರುವುದು, ಪಶ್ಚಾತ್ತಾಪ ಪಡುವುದು ಮತ್ತು ದುರುಪಯೋಗಪಡಿಸಿಕೊಂಡ ಹಣದ ಒಂದು ಭಾಗವನ್ನು ಮರುಪಾವತಿ ಮಾಡುವುದರಿಂದ ಶಿಕ್ಷೆಯಿಂದ ಕೆಲ ರಿಯಾಯತಿ ಪಡೆಯಬಹುದಾಗಿದೆ ಎಂದು ಅವರ ವಕೀಲರ ಹೇಳಿಕೆಯನ್ನು ರಾಜ್ಯ ಮಾಧ್ಯಮವು ಉಲ್ಲೇಖಿಸಿದೆ, ಆದರೆ ಪ್ರಾಸಿಕ್ಯೂಟರ್‌ಗಳು ಇದಕ್ಕೆ ಸಾಕಾಗುವುದಿಲ್ಲ ಎಂದು ಅದು ಹೇಳಿದೆ.

ಲ್ಯಾನ್‌ನ ವಕೀಲರಿಂದ  ಹೆಚ್ಚಿನ ಹೇಳಿಕೆಗಳನ್ನು ಪಡೆಯಲು ಮಾಧ್ಯಮಗಳಿಗೆ ಇಲ್ಲಿಯವರೆಗೂ ಸಾಧ್ಯವಾಗುತ್ತಿಲ್ಲ.

ವಿಯೆಟ್ನಾಂನ ನ್ಯಾಯಾಲಯದಲ್ಲಿ ಮರುವಿಚಾರಣೆಯ ಕಾರ್ಯವಿಧಾನಗಳ ಅಡಿಯಲ್ಲಿ  ಇದನ್ನು ಇನ್ನಷ್ಟು ಪರಿಶೀಲಿಸುವ ಹಕ್ಕನ್ನು ಲ್ಯಾನ್ ಹೊಂದಿದ್ದಾರೆ.

ಠೇವಣಿ ಇರಿಸುವ ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ ಸೈಗಾನ್ ಜಾಯಿಂಟ್ ಸ್ಟಾಕ್ ಕಮರ್ಷಿಯಲ್ ಬ್ಯಾಂಕ್ (SCB) ನಲ್ಲಿ  ವಂಚನೆಯ ಕಾರಣಕ್ಕಾಗಿ 2022ರಲ್ಲಿ ಲ್ಯಾನ್ ಅವರ ಬಂಧನ ದೇಶದಲ್ಲಿ ಭಾರೀ ಸಂಚಲನೆಯನ್ನುಂಟು ಮಾಡಿತ್ತು.

ಮರಣದಂಡನೆಯ ಹೊರತಾಗಿಯೂ, ವಂಚನೆ, ಮನಿ ಲಾಂಡರಿಂಗ್ ಮತ್ತು ಅಕ್ರಮ ಗಡಿಯಾಚೆಗಿನ ಹಣ ವರ್ಗಾವಣೆಯ ಮೂಲಕ ಅಪಾರ ಆಸ್ತಿ ಗಳಿಕೆ ಆರೋಪದ ಮೇಲೆ ಅಕ್ಟೋಬರ್‌ನಲ್ಲಿ ನಡೆದ ಪ್ರತ್ಯೇಕ ವಿಚಾರಣೆಯಲ್ಲಿ ಲ್ಯಾನ್‌ಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಲಾಯಿತು.

ಇದನ್ನೂ ಓದಿ…ಮಹಾರಾಷ್ಟ್ರ | ಚುನಾವಣಾ ಆಯೋಗಕ್ಕೆ ಸವಾಲು : ಗ್ರಾಮಸ್ಥರಿಂದ ಮರು ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್ ನಗರದ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಶನಿವಾರ (ಫೆ.28) ಇಸ್ರೇಲ್ ನಡೆಸಿದ ದಾಳಿಯಲ್ಲಿ 108 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ. ಮಿನಾಬ್‌ನಲ್ಲಿರುವ ಶಜರೆಹ್...

ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಸಾವು : ದೃಢಪಡಿಸಿದ ಇರಾನ್

ಇಸ್ರೇಲ್- ಅಮೆರಿಕ ಶನಿವಾರ (ಫೆ.28) ಇರಾನ್‌ ಮೇಲೆ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯಾತುಲ್ಲಾ ಅಲಿ ಖಮೇನಿ ಸಾವಿಗೀಡಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ದೃಢಪಡಿಸಿರುವುದಾಗಿ Al Jazeera...

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....