Homeಮುಖಪುಟಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ನೋಡುವುದು ಸರಿಯಲ್ಲ: ಕೇರಳ ಹೈಕೋರ್ಟ್

ಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ನೋಡುವುದು ಸರಿಯಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ಅಥವಾ ಆಶ್ಲೀಲತೆಯ ಮನೋದೃಷ್ಟಿಯಿಂದ ನೋಡೋದು ಸರಿಯಲ್ಲ, ನಗ್ನತೆಯನ್ನು ಲೈಂಗಿಕತೆಯೊಂದಿಗೆ ಸಮೀಕರಿಸುವುದು ತಪ್ಪು ಎಂದು ಕೇರಳ ಹೈಕೋರ್ಟ್ ಹೇಳಿದೆ.

ಮಹಿಳಾ ಪರ ಕಾರ್ಯಕರ್ತೆ ರೆಹಾನಾ ಫಾತಿಮಾ ಅವರು ತನ್ನ ಅರೆನಗ್ನ ದೇಹದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಚಿತ್ರ ಬಿಡಿಸಲು ಅವಕಾಶ ನೀಡಿದ್ದಲ್ಲದೇ, ಅದನ್ನು ವಿಡಿಯೋ ಮಾಡಿ ಪ್ರಸಾರ ಮಾಡಿದ್ದರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಕೇರಳ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

2020 ರಲ್ಲಿ ರೆಹಾನಾ ಫಾತಿಮಾ ಅವರು ತನ್ನ ಅರೆ-ನಗ್ನ ದೇಹದ ಮೇಲೆ ಅಪ್ರಾಪ್ತ ಮಕ್ಕಳು ಚಿತ್ರಿ ಬಿಡಿಸುತ್ತಿರುವುದನ್ನು ವೀಡಿಯೊ ಮಾಡಿ, ಪ್ರಸಾರ ಮಾಡಿದ್ದರು. ಆ ನಂತರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರ ಏಕಸದಸ್ಯ ಪೀಠವು ”ಮಹಿಳೆಯ ಅರೆ ನಗ್ನ ದೇಹವನ್ನು ಯಾವಾಗಲೂ ಲೈಂಗಿಕ ಅಥವಾ ಅಶ್ಲೀಲ ದೃಷ್ಟಿಯಿಂದ ನೋಡಬಾರದು. ಮಕ್ಕಳು ಚಿತ್ರ ಬಿಡಿಸಲು ಅವರಿಗೆ ತನ್ನ ದೇಹವನ್ನೇ ಕ್ಯಾನ್ವಾಸ್‌ ಆಗಿ ಬಳಸಲು ಅವಕಾಶ ನೀಡಿದರೆ ಅದು ತಪ್ಪಲ್ಲ” ಎಂದು ಹೇಳಿ ರೆಹನಾ ಫಾತಿಮಾ ಅವರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿದೆ.

”ಅರೆ ನಗ್ನ ದೇಹವನ್ನು ಲೈಂಗಿಕ ದೃಷ್ಟಿಯಲ್ಲಿ ನೋಡದೆ ಸಂವೇದನಾಶೀಲತೆ ಬೆಳೆಸುವ ಉದ್ದೇಶದಿಂದ ಮಕ್ಕಳಿಗೆ ಕ್ಯಾನ್ವಾಸ್‌ ರೀತಿಯಲ್ಲಿ ನಗ್ನ ಎದೆ ತೆರೆದಿಟ್ಟಿರುವುದು ತಪ್ಪಲ್ಲ” ಹೈಕೋರ್ಟ್ ಹೇಳಿದೆ.

”ಸ್ತ್ರೀಯರ ದೇಹದ ವಿಚಾರದಲ್ಲಿ ಪುರುಷಪ್ರಧಾನ ಸಮಾಜ ಹೊಂದಿರುವ ನಂಬಿಕೆ ಮತ್ತು ಕಲ್ಪನೆಯನ್ನು ಪ್ರಶ್ನಿಸಿಲು ಮತ್ತು ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ಉದ್ದೇಶದಿಂದ ಈ ವಿಡಿಯೋ ಮಾಡಿದ್ದೇನೆ” ಎಂದು ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾ ಅವರು ಹೇಳಿದ್ದರು. ಅವರ ಈ ಹೇಳಿಕೆಯನ್ನು ಮಾನ್ಯ ಮಾಡಿದ ಹೈಕೋರ್ಟ್, ವಿಡಿಯೋ ಅಶ್ಲೀಲ ಉದ್ದೇಶದಿಂದ ಕೂಡಿಲ್ಲ ಎಂದು ತೀರ್ಪು ನೀಡಿತು.

“ನಗ್ನತೆಯನ್ನು ಲೈಂಗಿಕತೆಗೆ ಜೋಡಿಸಬಾರದು. ಮಹಿಳೆಯರ ಬೆತ್ತಲೆ ದೇಹದ ಮೇಲ್ಭಾಗದ ನೋಟವು ಪೂರ್ವನಿಯೋಜಿತವಾಗಿ ಲೈಂಗಿಕವಾಗಿದೆ ಎಂದು ಪರಿಗಣಿಸಬಾರದೆಂದು” ನ್ಯಾಯಮೂರ್ತಿ ಎಡಪ್ಪಗತ್ ಹೇಳಿದರು.

ಇದನ್ನೂ ಓದಿ: ಮೃತದೇಹದ ಮೇಲಿನ ಲೈಂಗಿಕ ದೌರ್ಜನ್ಯ ಅಪರಾಧವಲ್ಲ: ಆರೋಪಿಯನ್ನು ಖುಲಾಸೆಗೊಳಿಸಿದ ಕರ್ನಾಟಕ ಹೈಕೋರ್ಟ್

”ಸಾಮಾಜಿಕ ಕಾರ್ಯಕರ್ತೆ ಫಾತಿಮಾ ಅವರು ಮಕ್ಕಳನ್ನು ಯಾವುದೇ ಲೈಂಗಿಕ ಕ್ರಿಯೆಗಳಿಗೆ ಮತ್ತು ಲೈಂಗಿಕ ತೃಪ್ತಿಗಾಗಿ ಬಳಸಿಕೊಳ್ಳಲಾಗಿದೆ ಎಂದು ಊಹಿಸಲು ಸಾಧ್ಯವಿಲ್ಲ. ಫಾತಿಮಾ ತನ್ನ ದೇಹವನ್ನು ತನ್ನ ಮಕ್ಕಳಿಗೆ ಚಿತ್ರಿಸಲು ಕ್ಯಾನ್ವಾಸ್ ಆಗಿ ಬಳಸಿದ್ದಳು” ಎಂದು ನ್ಯಾಯಾಧೀಶರು ಹೇಳಿದರು.

”ಒಬ್ಬ ಮಹಿಳೆ ತನ್ನ ದೇಹದ ಬಗ್ಗೆ ಸ್ವಾಯತ್ತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕು ಸಮಾನತೆ ಮತ್ತು ಗೌಪ್ಯತೆಯ ಮೂಲಭೂತ ಹಕ್ಕಿನ ತಿರುಳಾಗಿದೆ. ಇದು ಸಂವಿಧಾನದ 21 ನೇ ವಿಧಿಯಿಂದ ಖಾತರಿಪಡಿಸಿದ ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಯಲ್ಲಿ ಬರುತ್ತದೆ” ಎಂದು ನ್ಯಾಯಾಧೀಶರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಸೋಮವಾರದ ತೀರ್ಪಿನಲ್ಲಿ, ನ್ಯಾಯಾಲಯವು ಫಾತಿಮಾ ಅವರ ವಾದವನ್ನು ಒಪ್ಪಿಕೊಂಡಿತು ಮತ್ತು ಪುರುಷರ ಮೇಲಿನ ದೇಹದ ನಗ್ನ ಪ್ರದರ್ಶನವನ್ನು ಎಂದಿಗೂ ಅಶ್ಲೀಲ ಅಥವಾ ಅಸಭ್ಯವೆಂದು ಪರಿಗಣಿಸಲಾಗುವುದಿಲ್ಲ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಇದೇ ವೇಳೆ ಪ್ರಾಚೀನ ದೇವಾಲಯಗಳಲ್ಲಿ ಕೆತ್ತಿರುವ ಅರೆನಗ್ನ ಮೂರ್ತಿಗಳ ಬಗ್ಗೆಯೂ ಉಲ್ಲೇಖಿಸಿದ ಹೈಕೋರ್ಟ್‌, ಸಾರ್ವಜನಿಕ ಸ್ಥಳಗಳಲ್ಲಿ ಮುಕ್ತವಾಗಿ ಲಭ್ಯವಿರುವ ನಗ್ನ ಶಿಲ್ಪಗಳು ಮತ್ತು ವರ್ಣ ಚಿತ್ರಗಳನ್ನು ಕಲೆ ಎಂದು ಪರಿಗಣಿಸಲಾಗುತ್ತದೆ. ದೇವರ ಭಕ್ತಿಗೆ ದೇವಾಲಯಕ್ಕೆ ಹೋದಾಗಲು ಭಕ್ತರ ಮನಸ್ಸು ಅರೆನಗ್ನ ಮೂರ್ತಿಗಳನ್ನು ನೋಡೋವಾಗ ಅದನ್ನು ಕಲೆಯಾಗಿ ನೋಡಿ, ದೇವರನ್ನು ಪ್ರಾರ್ಥಿಸುತ್ತಾರೆ. ಆದರೆ ಲೈಂಗಿಕತೆಯ ದೃಷ್ಟಿಕೋನದಲ್ಲಿ ನೋಡುವುದಿಲ್ಲ’ ಎಂದು ಕೋರ್ಟ್ ಹೇಳಿದೆ.

“ಕೇರಳದ ತ್ರಿಶೂರ್‌ನಲ್ಲಿ ನಡೆಯುವ ‘ಪುಲಿಕಲಿ’ ಉತ್ಸವಗಳಲ್ಲಿ ಪುರುಷರ ದೇಹದ ಮೇಲೆ ಚಿತ್ರಿಸುವುದು ಅಂಗೀಕೃತ ಸಂಪ್ರದಾಯವಾಗಿದೆ” ಎಂದು ನ್ಯಾಯಮೂರ್ತಿ ಎಡಪ್ಪಗತ್ ಹೇಳಿದರು. ದೇವಾಲಯದಲ್ಲಿ ‘ತೆಯ್ಯಂ’ ಮತ್ತು ಇತರ ಆಚರಣೆಗಳನ್ನು ನಡೆಸಿದಾಗ, ಪುರುಷ ಕಲಾವಿದರ ದೇಹದ ಮೇಲೆ ಚಿತ್ರಕಲೆ ನಡೆಸಲಾಗುತ್ತದೆ. ಪುರುಷ ದೇಹವನ್ನು ಸಿಕ್ಸ್ ಪ್ಯಾಕ್ ಎಬಿಎಸ್, ಬೈಸೆಪ್ಸ್ ಇತ್ಯಾದಿಗಳ ರೂಪದಲ್ಲಿ ಪ್ರದರ್ಶಿಸಲಾಗುತ್ತದೆ. ಪುರುಷರು ಶರ್ಟ್ ಧರಿಸದೆ ತಿರುಗಾಡುವುದನ್ನು ನಾವು ಸಾಮಾನ್ಯವಾಗಿ ಕಾಣುತ್ತೇವೆ, ಆದರೆ ಈ ಕೃತ್ಯಗಳನ್ನು ಎಂದಿಗೂ ಅಶ್ಲೀಲ ಅಥವಾ ಅಸಭ್ಯವೆಂದು ಪರಿಗಣಿಸಲಾಗುವುದಿಲ್ಲ. ಆದರೆ ಕೆಲವು ಜನರು ಮಹಿಳೆಯ ಬೆತ್ತಲೆ ದೇಹವನ್ನು ಅತಿಯಾದ ಲೈಂಗಿಕತೆ ಅಥವಾ ಕೇವಲ ಬಯಕೆಯ ವಸ್ತು ಎಂದು ಪರಿಗಣಿಸುತ್ತಾರೆ ಎಂದು ನ್ಯಾಯಾಲಯವು ಹೇಳಿದೆ.

ನಗ್ನತೆಯನ್ನು ಅಶ್ಲೀಲ ಅಥವಾ ಅಸಭ್ಯ ಅಥವಾ ಅನೈತಿಕ ಎಂದು ವರ್ಗೀಕರಿಸುವುದೇ ಮೂಲಭೂತವಾಗಿ ತಪ್ಪು ಎಂದ ನ್ಯಾಯಮೂರ್ತಿ ಕೌಸರ್ ಎಡಪ್ಪಗತ್, ಕೆಲವು ಅಸ್ಪೃಶ್ಯ ಸಮುದಾಯದ ಮಹಿಳೆಯರು ತಮ್ಮ ಸ್ತನಗಳನ್ನು ಮುಚ್ಚುವ ಹಕ್ಕಿಗಾಗಿ ಹೋರಾಟ ನಡೆಸಿದ ರಾಜ್ಯ ಇದು. ಪುರುಷ ದೇಹದ ಸ್ವಾತಂತ್ರ್ಯವನ್ನು ಪ್ರಶ್ನಿಸುವ ಸಂಖ್ಯೆ ಕಡಿಮೆ. ಆದರೆ ಪಿತೃಪ್ರಧಾನ ವ್ಯವಸ್ಥೆಯಲ್ಲಿ ಹೆಣ್ಣು ತನ್ನ ದೇಹಕ್ಕೆ ಸಂಬಂಧಿಸಿದಂತೆ ತನ್ನದೇ ಆದ ಸ್ವತಂತ್ರ ಧೋರಣೆ ಹೊಂದುವುದಕ್ಕೆ ಅವಕಾಶ ನೀಡುವುದಿಲ್ಲ. ನಿರಂತರವಾಗಿ ಆಕೆಯನ್ನು ಬೆದರಿಸಲಾಗುತ್ತದೆ. ತಮ್ಮ ದೇಹ ಮತ್ತು ಜೀವನದ ಬಗ್ಗೆ ತಮ್ಮದೇ ಆದ ಆಯ್ಕೆಗಳನ್ನು ಮಾಡಿಕೊಳ್ಳುವುದಕ್ಕೆ ಹೆಣ್ಣಿಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದರು.

ಮಹಿಳೆಯ ದೇಹದ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಅಭಿಪ್ರಾಯ ರೂಪಿಸುವುದು ವೀಡಿಯೋದ ಉದ್ದೇಶವಾಗಿತ್ತು ಎಂದು ಕೋರ್ಟ್ ನಿರೂಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...