Homeಕರ್ನಾಟಕಬ್ಯಾಂಕ್‌ಗಳಿಗೆ ಪಾವತಿಸಬೇಕಿರುವುದಕ್ಕಿಂತ ಹೆಚ್ಚು ವಸೂಲಿ ಮಾಡಲಾಗಿದೆ : ಹೈಕೋರ್ಟ್ ಮೊರೆ ಹೋದ ವಿಜಯ್ ಮಲ್ಯ

ಬ್ಯಾಂಕ್‌ಗಳಿಗೆ ಪಾವತಿಸಬೇಕಿರುವುದಕ್ಕಿಂತ ಹೆಚ್ಚು ವಸೂಲಿ ಮಾಡಲಾಗಿದೆ : ಹೈಕೋರ್ಟ್ ಮೊರೆ ಹೋದ ವಿಜಯ್ ಮಲ್ಯ

- Advertisement -
- Advertisement -

ಕಿಂಗ್‌ ಫಿಶರ್‌ ಏರ್‌ಲೈನ್ಸ್‌ಗೆ ಸಂಬಂಧಿಸಿದ ಸಾಲ ವಸೂಲಾತಿ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಕೋರಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್‌ ಮಲ್ಯ ಸಲ್ಲಿಸಿರುವ ಅರ್ಜಿ ಸಂಬಂಧ ಸಾಲ ವಸೂಲಾತಿ ನ್ಯಾಯ ಮಂಡಳಿಯ ವಸೂಲಾತಿ ಅಧಿಕಾರಿಗಳು, ಭಾರತೀಯ ಸ್ಟೇಟ್‌ ಬ್ಯಾಂಕ್‌ ಸೇರಿ 10 ಬ್ಯಾಂಕ್‌ಗಳಿಗೆ ಕರ್ನಾಟಕ ಹೈಕೋರ್ಟ್‌ ಬುಧವಾರ (ಫೆ.5) ನೋಟಿಸ್‌ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಅರ್ಜಿ ವಿಚಾರಣೆ ವೇಳೆ ವಿಜಯ್ ಮಲ್ಯ ಪರ ವಾದ ಮಂಡಿಸಿದ ಹಿರಿಯ ವಕೀಲ ಸಾಜನ್ ಪೂವಯ್ಯ, 6,200 ಕೋಟಿ ರೂಪಾಯಿ ಸಾಲ ಕೊಡಬೇಕಿತ್ತು. 14,000 ಕೋಟಿ ರೂಪಾಯಿ ವಸೂಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ತಿಳಿಸಿದ್ದಾರೆ. ಸಾಲ ವಸೂಲಾತಿ ಅಧಿಕಾರಿ 10,200 ಕೋಟಿ ರೂಪಾಯಿ ವಸೂಲಾಗಿದೆ ಎಂದಿದ್ದಾರೆ. ಸಂಪೂರ್ಣ ಸಾಲ ತೀರಿದ್ದರೂ ಈಗಲೂ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ. ಹೀಗಾಗಿ ಸಾಲ ವಸೂಲಿಯಾದ ಲೆಕ್ಕಪತ್ರ ನೀಡುವಂತೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದ್ದಾರೆ.

ಮುಂದುವರಿದು, ಹಣ ವಸೂಲಾತಿ ಪ್ರಕ್ರಿಯೆ ಮುಂದುವರಿದಿದ್ದು, ಪ್ರಾಥಮಿಕ ಸಾಲವನ್ನು ಪಾವತಿಸಲಾಗಿದೆಯೇ ಅಥವಾ ಇಲ್ಲವೇ ಎಂಬುವುದರ ಬಗ್ಗೆ ಯಾವುದೇ ಆದೇಶ ಮಾಡಲಾಗಿಲ್ಲ. ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ ಮಾಡಬೇಕು ಎಂದು ಕೋರಿದ್ದಾರೆ.

ವಾದ ಆಲಿಸಿದ ನ್ಯಾಯಮೂರ್ತಿ ಆರ್‌ ದೇವದಾಸ್‌ ಅವರ ಏಕಸದಸ್ಯ ಪೀಠ ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಚೆನ್ನೈನ ಸಾಲ ವಸೂಲಾತಿ ನ್ಯಾಯಮಂಡಳಿಯ ವಸೂಲಾತಿ ಅಧಿಕಾರಿಗಳು, ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಬ್ಯಾಂಕ್‌ ಆಫ್‌ ಬರೋಡಾ, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ, ದಿ ಫೆಡರಲ್‌ ಬ್ಯಾಂಕ್‌ ಲಿಮಿಟೆಡ್‌, ಐಡಿಬಿಐ ಬ್ಯಾಂಕ್‌ ಲಿಮಿಟೆಡ್‌, ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌, ಜಮ್ಮು ಅಂಡ್‌ ಕಾಶ್ಮೀರ್‌ ಬ್ಯಾಂಕ್‌ ಲಿಮಿಟೆಡ್‌, ಪಂಜಾಬ್‌ ಅಂಡ್‌ ಸಿಂದ್‌ ಬ್ಯಾಂಕ್‌, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌, ಯುಕೊ ಬ್ಯಾಂಕ್‌, ಜೆ ಎಂ ಫೈನಾನ್ಶಿಯಲ್‌ ಅಸೆಟ್‌ ರಿಕನಸ್ಟ್ರಕ್ಷನ್‌ ಕಂಪನಿ ಪ್ರೈ.ಲಿ., ಯುಬಿಎಚ್‌ಎಲ್‌ನ ಅಧಿಕೃತ ಲಿಕ್ವಿಡೇಟರ್‌ಗೆ ನ್ಯಾಯಾಲಯ ತುರ್ತು ನೋಟಿಸ್‌ ಜಾರಿ ಮಾಡಿದೆ ಎಂದು ವರದಿ ಹೇಳಿದೆ.

ಸೌಜನ್ಯ : ಬಾರ್ & ಬೆಂಚ್

ರೈತ ವಿರೋಧಿ ಕಾಯ್ದೆಗೆ ಜೋತು ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ : ನಿಲುವು ಸ್ಪಷ್ಟಡಿಸುವಂತೆ ಸಿಎಂಗೆ ತುರ್ತು ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...