Homeಅಂತರಾಷ್ಟ್ರೀಯಉದ್ಯಮಿ ’ವಿಜಯ ಮಲ್ಯ’ ಭಾರತ ಹಸ್ತಾಂತರಕ್ಕೆ ತೊಡಕು, ಮತ್ತಷ್ಟು ವಿಳಂಬ.

ಉದ್ಯಮಿ ’ವಿಜಯ ಮಲ್ಯ’ ಭಾರತ ಹಸ್ತಾಂತರಕ್ಕೆ ತೊಡಕು, ಮತ್ತಷ್ಟು ವಿಳಂಬ.

- Advertisement -
- Advertisement -

ಮದ್ಯದ ದೊರೆ ಉದ್ಯಮಿ ವಿಜಯ ಮಲ್ಯ ಅವರನ್ನು ಇಂಗ್ಲೆಂಡ್‌ನಿಂದ ಭಾರತಕ್ಕೆ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಮತ್ತೊಂದು ಹೊಸ ಕಾನೂನು ತೊಡಕು ಎದುರಾಗಿದ್ದು, “ಮುಂದಿನ ಕಾನೂನು ಸಮಸ್ಯೆ ಬಗೆಹರಿಸದ ಹೊರತು ಮಲ್ಯ ಅವರನ್ನು ಭಾರತಕ್ಕೆ ವಾಪಸ್ ಕಳುಹಿಸಲಾಗುವುದಿಲ್ಲ” ಎಂದು ಎಂದು ಬ್ರಿಟಿಷ್ ಹೈಕಮಿಷನ್ ಇಂದು ಸ್ಪಷ್ಟಪಡಿಸಿದೆ.

ಭಾರತಕ್ಕೆ ತನ್ನನ್ನು ಹಸ್ತಾಂತರಿಸುವುದನ್ನು ವಿರೋಧಿಸಿ ವಿಜಯ ಮಲ್ಯ ಯುಕೆ ಸುಪ್ರೀಂ ಕೋರ್ಟ್‌‌ಗೆ ಕಳೆದ ಮೇ 14ರಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಮಲ್ಯ ಅವರನ್ನು ಶೀಘ್ರದಲ್ಲಿ ಭಾರತಕ್ಕೆ ಕರೆತರಲಿದ್ದಾರೆ ಎನ್ನುವ ಸುದ್ದಿ ಹರಡಿತ್ತು. ಇದರ ಕುರಿತು ಇಂದು ಬ್ರಿಟೀಷ್ ಹೈಕಮಿಷನ್ ನೀಡಿರುವ ಹೇಳಿಕೆಯೂ ವಿಜಯ್ ಮಲ್ಯನನ್ನು ಭಾರತಕ್ಕೆ ಕರೆತರುವುದು ಮತ್ತಷ್ಟು ವಿಳಂಬವಾಗುವಂತಾಗಿದೆ.

ಇದರ ಕುರಿತು ಸ್ಪಷ್ಟನೆ ನೀಡಿರುವ ಬ್ರಿಟೀಷ್‌ ಹೈಕಮಿಷನ್‌ ವಕ್ತಾರರು, “ಭಾರತಕ್ಕೆ ಹಸ್ತಾಂತರ ಮಾಡುವ ವಿರುದ್ಧ ಮಲ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ಯುಕೆ ಸುಪ್ರೀಂ ಕೋರ್ಟ್ಗೆ ಈಗಾಗಲೇ ನಿರಾಕರಿಸಿದೆಯಾರೂ, ಅವರನ್ನು ಹಸ್ತಾಂತರಿಸುವ ವ್ಯವಸ್ಥೆ ಮಾಡುವ ಮೊದಲು ಇನ್ನೂ ಹೆಚ್ಚಿನ ಕಾನೂನು ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ” ಎಂದು ಹೇಳಿದ್ದಾರೆ.

“ಯುಕೆ ಕಾನೂನಿನ ಪ್ರಕಾರ ಹಸ್ತಾಂತರಿಸುವಿಕೆಗೆ ಸಂಬಂಧಿಸಿದ ಕಾನೂನು ತೊಡಕುಗಳು ಪರಿಹಾರವಾಗುವವರೆಗೆ ಅವರನ್ನು ಭಾರತಕ್ಕೆ ಹಸ್ತಾಂತರಿಸುವುದು ಸಾಧ್ಯವಿಲ್ಲ. ಸಮಸ್ಯೆ ಗೌಪ್ಯವಾಗಿದೆ. ಇದರ ವಿವರಗಳನ್ನು ಸದ್ಯಕ್ಕೆ ನೀಡಲು ಸಾಧ್ಯವಿಲ್ಲ. ಅಲ್ಲದೆ, ಈ ಸಮಸ್ಯೆಯನ್ನು ಪರಿಹರಿಸಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಸಹ ನಾವು ಅಂದಾಜಿಸಲು ಸಾಧ್ಯವಿಲ್ಲ. ಆದರೆ, ಇದನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಲು ಯತ್ನಿಸುತ್ತೇವೆ” ಎಂದು ಹೈಕಮಿಷನ್ ಅಧಿಕಾರಿಗಳು ತಿಳಿಸಿದ್ದಾರೆ.

ಕಿಂಗ್‌ಫಿಶರ್‌ ಏರ್‌ಲೈನ್ಸ್‌ ಕುಸಿತ ಕಂಡ ಪರಿಣಾಮವಾಗಿ ವಿಜಯ ಮಲ್ಯ ಭಾರತದಿಂದ ಲಂಡನ್‌ಗೆ ಪರಾರಿಯಾಗಿದ್ದರು. ವಿಜಯ್ ಮಲ್ಯ ಭಾರತದಲ್ಲಿ ಸುಮಾರು 9,000 ಕೋಟಿ ವಂಚನೆ ಆರೋಪಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ 2018 ರಲ್ಲೇ ಯುಕೆ ಹೈಕೋರ್ಟ್ ಆದೇಶಿಸಿತ್ತು. ಇದರ ವಿರುದ್ದ ಮಲ್ಯ ಯುಕೆ ಸುಪ್ರೀಂ ಕೋರ್ಟ್‌‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಈಗ ಸುಪ್ರೀಂ ಕೋರ್ಟ್ ಕೂಡಾ ಅರ್ಜಿಯನ್ನು ವಜಾ ಮಾಡಿದೆ.

ಯುಕೆ ಹಸ್ತಾಂತರ ಕಾಯ್ದೆಯ ಪ್ರಕಾರ, ಒಬ್ಬ ವ್ಯಕ್ತಿಯನ್ನು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ 28 ದಿನಗಳ ಆದೇಶದೊಂದಿಗೆ ಹಸ್ತಾಂತರಿಸಬೇಕಾಗುತ್ತದೆ. ಒಂದು ವೇಳೆ ಹೀಗೆ ಲಂಡನ್‌ಗೆ ಆಶ್ರಯ ಹರಸಿ ಬಂದಿದ್ದ ವ್ಯಕ್ತಿಯು ಆಶ್ರಯ ಹಕ್ಕು ಪಡೆದಿದ್ದರೆ, ಇದು ಯುಕೆಯಲ್ಲಿ ನಿರಾಶ್ರಿತರಾಗಿ ಉಳಿಯಬೇಕೆಂಬ ಮನವಿಯನ್ನು ಸೂಚಿಸುತ್ತದೆ. ಈ ಹಕ್ಕು ಇತ್ಯರ್ಥವಾಗದ ಹೊರತು ಆ ವ್ಯಕ್ತಿಯನ್ನು ಹಸ್ತಾಂತರಿಸಲು ಮಾಡಲು ಸಾಧ್ಯವಿಲ್ಲ.

ಆರ್ಥಿಕ ಅಪರಾಧಿ ವಿಜಯ ಮಲ್ಯ ಯುಕೆಯ ಆಶ್ರಯ ಹಕ್ಕನ್ನು ಹೊಂದಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದು ಸ್ಪಷ್ಟವಾಗುವವರೆಗೆ ಅವರನ್ನು ಭಾರತಕ್ಕೆ ಹಸ್ತಾಂತರ ಮಾಡುವುದು ಸಾಧ್ಯವಿಲ್ಲ ಎಂದು ಸಿಬಿಐ ಮೂಲಗಳು ತಿಳಿಸಿವೆ.


ಓದಿ: ಸಾಲ ತೀರಿಸುತ್ತೇನೆ, ನನ್ನ ವಿರುದ್ಧದ ಪ್ರಕರಣ ಕೈಬಿಡಿ: ವಿಜಯ್ ಮಲ್ಯ ಮನವಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...