Homeಕರ್ನಾಟಕವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ: ಪೀರ್‌ ಬಾಷಾ

- Advertisement -
- Advertisement -

ನಾಡಿನ ಸಾಕ್ಷಿ ಪ್ರಜ್ಞೆ, ನೆಲ ಸಂಸ್ಕೃತಿಯ ಪ್ರತಿಪಾದಕರಾದ ದೇವನೂರ ಮಹಾದೇವ ಅವರು ಬರೆದಿರುವ ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯನ್ನು ವಿಜಯನಗರದಲ್ಲಿ ಉಚಿತವಾಗಿ ಹಂಚುವ ಕಾರ್ಯಕ್ರಮ ನಡೆಯಿತು.

ಪ್ರಗತಿಪರ ಸ್ನೇಹಿತರು, ವಿಜಯನಗರ ಜಿಲ್ಲಾ ಡಾ.ಬಿ.ಆರ್‌.ಅಂಬೇಡ್ಕರ್ ಸಂಘದ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕ್ರಮ ನಡೆಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಂತಕ ಪೀರ್‌ ಬಾಷಾ ಮಾತನಾಡಿ, “ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ. ಆರ್‌ಎಸ್‌ಎಸ್ ಮುಖ್ಯಸ್ಥರಾದ ಮೋಹನ್‌ ಭಾಗವತ್‌ ಅವರು ಕರ್ನಾಟಕಕ್ಕೆ ಬಂದು ಸಭೆ ಮಾಡುವಷ್ಟು ಆತಂಕ ಆರ್‌ಎಸ್‌ಎಸ್‌ಗೆ ಉಂಟಾಗಿದೆ. ಇದು ದೇವನೂರರಿಗಿರುವ ಶಕ್ತಿ. ಅವರ ವಿಚಾರಗಳಿಗಿರುವ ಶಕ್ತಿ” ಎಂದು ಬಣ್ಣಿಸಿದರು.

“ಆರ್‌ಎಸ್‌ಎಸ್‌ ಹುಟ್ಟಿ ನೂರು ವರ್ಷಗಳಾಗುತ್ತಿದೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬರೆದಿರುವ ಸಂವಿಧಾನವನ್ನು ಆರ್‌ಎಸ್‌ಎಸ್‌ನವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೇಗಾದರೂ ಸರಿ, ಅಂಬೇಡ್ಕರ್‌ ಬರೆದಿರುವ ಸಂವಿಧಾನವನ್ನು ಅಪ್ರಸ್ತುತಗೊಳಿಸಬೇಕು ಎಂದು ಎಲ್ಲ ರೀತಿಯ ಹುನ್ನಾರ ಮಾಡುತ್ತಿರುವುದನ್ನು ದೇವನೂರರು ತಮ್ಮ ಕೃತಿಯಲ್ಲಿ ಬಯಲಿಗೆಳೆದಿದ್ದಾರೆ” ಎಂದು ತಿಳಿಸಿದರು.

ಆರ್‌ಎಸ್‌ಎಸ್‌ ಚಾತುರ್‌ವರ್ಣ ಪದ್ಧತಿಯಲ್ಲಿ ನಂಬಿಕೆ ಇಟ್ಟಿದೆ. ಭಾರತದ ಸಂವಿಧಾನ ಜಾತಿ ವ್ಯವಸ್ಥೆ ಬೇಡ ಎನ್ನುತ್ತದೆ. ಆರ್‌ಎಸ್‌ಎಸ್ ಭಗವಾಧ್ವಜ ಬೇಕು ಎಂದರೆ ಅಂಬೇಡ್ಕರರ ಸಂವಿಧಾನ ತ್ರಿವರ್ಣ ಧ್ವಜದಲ್ಲಿ ನಂಬಿಕೆ ಇಟ್ಟಿದೆ. ನಮ್ಮ ಸಂವಿಧಾನ ಜಾತ್ಯತೀತತೆಯಲ್ಲಿ ನಂಬಿಕೆ ಇಟ್ಟಿದ್ದರೆ, ಆರ್‌ಎಸ್‌ಎಸ್‌ನವರು ಮನುವಾದದಲ್ಲಿ ನಂಬಿಕೆ ಇಟ್ಟಿದ್ದಾರೆ. ಈ ವಿಚಾರಗಳನ್ನು ದೇವನೂರರು ಸರಳವಾಗಿ ವಿವರಿಸಿದ್ದಾರೆ. ಇಲ್ಲಿಯವರೆಗೆ ಈ ಕೃತಿಯ ಒಂದು ಲಕ್ಷ ಪ್ರತಿ ಮಾರಾಟವಾಗಿವೆ. ವಿದ್ಯಾರ್ಥಿಗಳು ಖರೀದಿಸಿ ಓದುತ್ತಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಚಿಂತಕ ಕೆ.ರಮೇಶ್ ಮಾತನಾಡಿ, “ಆರ್‌ಎಸ್‌ಎಸ್‌ನ ನಿಜ ಬಣ್ಣವನ್ನು ದೇವನೂರರು ಬಯಲು ಮಾಡಿದ್ದಾರೆ. ಆರ್‌ಎಸ್‌ಎಸ್‌ ದೇಶದಲ್ಲಿ ಹೇಗೆ ವಿಷಬೀಜವನ್ನು ಬಿತ್ತುತ್ತಿದೆ ಎಂಬ ವಿಚಾರಗಳನ್ನು ಅತ್ಯಂತ ಸ್ಪಷ್ಟವಾಗಿ ಈ ಕೃತಿಯಲ್ಲಿ ವಿವರಿಸಲಾಗಿದೆ. ಈ ಕೃತಿಯನ್ನು ಓದುವ ದೊಡ್ಡ ಆಂದೋಲನ ಆಗಬೇಕಿದೆ” ಎಂದು ಆಶಿಸಿದರು.

ಜಿಲ್ಲಾ ದಲಿತ ಹಕ್ಕುಗಳ ಸಮಿತಿಯ ಮರಡಿ ಜಂಬಯ್ಯ ನಾಯಕ ಮಾತನಾಡಿ, “ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯು ಬಹುಭಾಷೆಗಳಿಗೆ ತರ್ಜುಮೆಯಾಗುತ್ತಿದೆ. ಈ ವಿದ್ಯಮಾನವು ಕೃತಿಯ ಮಹತ್ವವನ್ನು ಹಾಗೂ ಆರ್‌ಎಸ್‌ಎಸ್‌ ಕುರಿತು ತಿಳಿದುಕೊಳ್ಳಬೇಕೆಂಬ ಜನರ ತವಕವನ್ನು ತೋರಿಸುತ್ತದೆ. ದೇಶ ಆತಂಕ ಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಈ ಕೃತಿ ನಮಗೆ ಮಾರ್ಗದರ್ಶನ ತೋರಿದೆ” ಎಂದು ವಿವರಿಸಿದರು.

ವಿಜಯನಗರ ಬಂಡಾಯ ಸಾಹಿತ್ಯ ಸಂಚಾಲಕರಾದ ಪಿ.ಆರ್. ವೆಂಕಟೇಶ ಮಾತನಾಡಿ, “ಪ್ರಗತಿಪರರು, ಸಮಾನತೆ ಬಯಸುವವರು ವಿದೇಶದ ವಿಚಾರಗಳನ್ನು ತುರುಕುತ್ತಿದ್ದಾರೆಂದು ಆರ್‌ಎಸ್‌ಎಸ್‌ ಹೇಳುತ್ತಿದೆ. ಆದರೆ ಗೋಲ್ವಲ್ಕರ್‌ ಅವರ ಬಂಚ್‌ ಆಫ್ ಥಾಟ್ಸ್‌ ಯಾವ ದೇಶದ್ದು ಎಂದು ದೇವನೂರರು ಕೇಳುತ್ತಿದ್ದಾರೆ. ನಾಜಿ ಸಿದ್ಧಾಂತ ಎಲ್ಲಿಯದ್ದು ಎಂದು ಪ್ರಶ್ನಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿರಿ: ಆರ್‌ಎಸ್‌ಎಸ್‌ ಅಜೆಂಡಾಗಳನ್ನು ಬಯಲುಗೊಳಿಸುವ ಕನ್ನಡ ಕೃತಿಗಳು

ಬಣ್ಣದ ಮನೆ ಸೋಮಶೇಖರ್ ಮಾತನಾಡಿ, “ದೇವನೂರರ ಆರ್.ಎಸ್.ಎಸ್ ಆಳ ಮತ್ತು ಅಗಲ ಕೃತಿಯಿಂದ ಕೆಲವರ ಎದೆಯಲ್ಲಿ ನಡುಕ ಹುಟ್ಟಿರುವುದು ಸತ್ಯ. ಹೀಗಾಗಿ ಪುಸ್ತಕ ಹಂಚುವ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಶಾಲಾ ಕಾಲೇಜು ಆವರಣಗಳಲ್ಲಿ ಆಯೋಜಿಸಬೇಕು. ವಿದ್ಯಾರ್ಥಿಗಳೊಂದಿಗೆ ಸಂವಾದ ಏರ್ಪಡಿಸಬೇಕು” ಎಂದು ಆಶಿಸಿದರು.

ಪ್ರಗತಿಪರ ಸಂಘಟನೆಯ ದುರ್ಗಪ್ಪ ಪೂಜಾರಿ, ಆಟೋ ಯುನಿಯನ್ ರಾಮಚಂದ್ರ ಮತ್ತು ಎಮ್.ಆರ್.ಎಮ್ ಮಂಜು, ಸ್ಲಮ್ ಜಾಗೃತಿಯ ವೆಂಕಟೇಶ್‌ ಸೇರಿದಂತೆ ಅನೇಕ ಚಿಂತಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಓದುಕಟ್ಟಿನಲ್ಲಿ ಹಲವಾರು ಕಡೆ ಸಂಸ್ಕೃತ ಪದಗಳಿಗೆ ಕನ್ನಡ ಪದಗಳನ್ನು ಬಳಸಬಹುದಿತ್ತು.

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...