Homeಕರ್ನಾಟಕಹರಪನಹಳ್ಳಿ: ಡೋನೆಶನ್ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರ ದರ್ಪ

ಹರಪನಹಳ್ಳಿ: ಡೋನೆಶನ್ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರ ದರ್ಪ

- Advertisement -
- Advertisement -

ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ಅಕ್ರಮ ಡೊನೇಶನ್ ವಸೂಲಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕು SFI, AISF ವಿದ್ಯಾರ್ಥಿ ನಾಯಕರ ಮೇಲೆ ಪೋಲಿಸರು ದೌರ್ಜನ್ಯ ನಡೆಸಿರುವ ಘಟನೆ ವರದಿಯಾಗಿದೆ.

ಸರ್ಕಾರದ ನಿಯಮ ಮೀರಿ ಹೆಚ್ಚುವರಿ ಹಣ ಪಡೆಯುತ್ತಿದ್ದ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಮತ್ತು ಉಚಿತ ಬಸ್ ಪಾಸ್ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಪ್ರತಿಭಟನಾ ಸ್ಥಳಕ್ಕೆ ಬಂದ ಹರಪನಹಳ್ಳಿ ಪಿಎಸ್‌ಐ ಪ್ರಕಾಶ್ ಪ್ರತಿಭಟನಾಕಾರರ ಮೇಲೆ ದರ್ಪವೆಸಗಿ, ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಹರಪನಹಳ್ಳಿಯ SSH ಜೈನ್ ಕಾಲೇಜ್ ಮುಂಭಾಗ ಪ್ರತಿಭಟನೆ ನಡೆಸುವಾಗ ಪ್ರತಿಭಟನಾಕಾರರನ್ನು ಬಲವಂತವಾಗಿ ಎಳೆದೊಯ್ಯಲಾಗಿದೆ. ಘಟನೆಯನ್ನು SFI ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.

ಇದನ್ನೂ ಓದಿ: ‘ಹತ್ತು ದಿನದಲ್ಲಿ ಪಠ್ಯದಲ್ಲಿರುವ ಲೋಪ ತಿದ್ದಿ’: ಸರ್ಕಾರಕ್ಕೆ ಗಡುವು ನೀಡಿದ ಲಿಂಗಾಯತ ಮಠಾಧೀಶರು

“ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅಕ್ರಮ ಡೊನೇಶನ್ ವಸೂಲಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಹರಪನಹಳ್ಳಿ ತಾಲ್ಲೂಕು SFI, AISF ವಿದ್ಯಾರ್ಥಿ ನಾಯಕರ ಮೇಲೆ ಪೋಲಿಸರು ದೌರ್ಜನ್ಯ ಮಾಡಿ ಬಂಧಿಸಿರುವುದನ್ನು SFI ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಈ ಕೂಡಲೇ ವಿದ್ಯಾರ್ಥಿ ಮುಖಂಡರನ್ನು ಬಿಡುಗಡೆ ಮಾಡಬೇಕು. ಪ್ರತಿಭಟನಾ ನಿರತ ವಿದ್ಯಾರ್ಥಿ ನಾಯಕರ ಮೇಲೆ ಬೀದಿ ರೌಡಿಯ ರೀತಿ ಎರಗುತ್ತಿರುವ ಈ ಪಿಎಸ್ಐ ಅಮಾನತ್ತು ಆಗಲೇಬೇಕು” ಎಂದು SFI ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಘಟನೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಟಿಕೆಟ್‌ ಕೈತಪ್ಪಿದ್ದಕ್ಕೆ ಆಕ್ರೋಶ: ಸಚಿವ ಸೋಮಣ್ಣ ಭಾಷಣಕ್ಕೆ ಅಡ್ಡಿಪಡಿಸಿದ ವಿಜಯೇಂದ್ರ ಬೆಂಬಲಿಗರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...