Homeಕರ್ನಾಟಕವಿಜಯಪುರ: ಮುಸ್ಲಿಮರ ನರಹತ್ಯೆಗೆ ಎಬಿವಿಪಿ ಸದಸ್ಯೆಯಿಂದ ಕರೆ; ವಿಡಿಯೊ ವೈರಲ್‌

ವಿಜಯಪುರ: ಮುಸ್ಲಿಮರ ನರಹತ್ಯೆಗೆ ಎಬಿವಿಪಿ ಸದಸ್ಯೆಯಿಂದ ಕರೆ; ವಿಡಿಯೊ ವೈರಲ್‌

- Advertisement -
- Advertisement -

ಸಂಘಪರಿವಾರದ ಸದಸ್ಯೆಯೊಬ್ಬರು ಮುಸ್ಲಿಮರ ನರಹತ್ಯೆಗೆ ವಿಜಯಪುರ ಜಿಲ್ಲೆಯಲ್ಲಿ ಕರೆ ನೀಡಿರುವ ವಿಡಿಯೊ ವೈರಲ್‌ ಆಗಿದೆ. ಹರಿದ್ವಾರದ ಧರ್ಮ ಸಂಸತ್‌ನಲ್ಲಿ ನರಹತ್ಯೆಗೆ ಕರೆ ನೀಡಲಾಗಿತ್ತು. ಅಂತಹದ್ದೇ ಪ್ರಕರಣ ಈಗ ಕರ್ನಾಟಕದಲ್ಲೂ ನಡೆದಿದೆ ಎಂದು ಆರೋಪಿಸಲಾಗಿದೆ.

ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಖಂಡಿಸಿ ವಿಜಯಪುರ ನಗರದಲ್ಲಿ ಬಜರಂಗದಳ, ವಿಎಚ್‌ಪಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ವಿಜಯಪುರ ಎಬಿವಿಪಿ ಪ್ರತಿನಿಧಿ ಪೂಜಾ ವೀರಶೆಟ್ಟಿಯವರು ಕೋಮು ಸೌಹಾರ್ದತೆ ಕದಡಲು ಯತ್ನಿಸಿದ್ದಾರೆ.

“ನಾವು ಭಾರತದವರು ಎಂಥವರು ಎಂದರೆ ನೀರು ಬೇಡ ಎಂದರೆ ಪಾನಕ ಕೊಡ್ತೀವಿ. ಹಾಲು ಬೇಡ ಅಂದರೆ ಮಜ್ಜಿಗೆ ಕೊಡ್ತೀವಿ. ನೀವು ಏನಾದರೂ ಭಾರತವನ್ನು ಹಿಜಾಬ್‌ಮಯ ಮಾಡಲು ಬಂದರೆ ಶಿವಾಜಿ ಕೈಯಲ್ಲಿನ ಕತ್ತಿ ತಗೊಂಡು ಇಂಚಿಂಚೆ ಕಡಿಯುತ್ತೇವೆ” ಎಂದು ಪ್ರಚೋದನಕಾರಿಯಾಗಿ ಪೂಜಾ ಮಾತನಾಡುತ್ತಾರೆ.

“ಹರ್ಷಾ ಕೊಲೆ ಆರೋಪಿಗಳನ್ನು ಪೊಲೀಸರು 24 ತಾಸುಗಳಲ್ಲಿ ಬಂಧಿಸಿರುವುದು ಖುಷಿ ನೀಡಿದೆ. ಆದರೆ, ಬರಿ ಆರೋಪಿಗಳ ಬಂಧನವಾದರೆ ಸಾಲದು, ಅವರಿಗೆ ತಕ್ಕ ಶಿಕ್ಷೆಯಾಗಬೇಕು. ನಿಮ್ಮ ಕೈಯಲ್ಲಿ ಆಗದಿದ್ದರೆ ನಮ್ಮ ಕೈಗೆ 24 ತಾಸು ಅಲ್ಲ, ಒಂದು ತಾಸು ಅಧಿಕಾರ ಕೊಟ್ಟು ನೋಡಿ, ಆರು ಜನ ಅಲ್ಲ, ಅರವತ್ತು ಸಾವಿರ ಹಿಜಾಬ್‌ಗಳನ್ನು …” ಎಂದು ಪ್ರಚೋದಿಸಿರುವುದನ್ನು ಕಾಣಬಹುದು. (ಹೀಗೆ ಹೇಳಿದ ತಕ್ಷಣ ಪಕ್ಕದಲ್ಲಿದ್ದ ಮಹಿಳೆಯೊಬ್ಬರು ಪೂಜಾ ವೀರಶೆಟ್ಟಿಯರಿಗೆ ಭಾಷಣ ನಿಲ್ಲಿಸುವಂತೆ ಕೈ ಸನ್ನೆ ಮಾಡುತ್ತಾರೆ. ಪೂಜಾ ಭಾಷಣ ಕೇಳಿ ಪ್ರತಿಭಟನೆಯಲ್ಲಿದ್ದವರು ಉದ್ಘಾರ ಮಾಡುತ್ತಾರೆ).

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸುವ ಸಂಬಂಧ ವಿವಾದ ಸೃಷ್ಟಿಸಲಾಗಿದೆ. ಹಿಜಾಬ್‌ಗೆ ವಿರೋಧವಾಗಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳಿಂದಾಗಿ ವಿವಾದ ತೀವ್ರ ಸ್ವರೂಪ ಪಡೆದಿದೆ. ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಕೋಮು ಶಕ್ತಿಗಳು ಪ್ರಚೋದನಕಾರಿಯಾಗಿ ಹೇಳಿಕೆಗಳನ್ನು ನೀಡುತ್ತಿವೆ.

ಪೂಜಾ ವೀರಶೆಟ್ಟಿ ವಿಡಿಯೊ ವೈರಲ್‌ ಆಗಿದ್ದು, ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕರಾದ ಜುಬೈರ್ ಟ್ವೀಟ್‌ ಮಾಡಿದ್ದಾರೆ. “ಡಿಸೆಂಬರ್ 2021ರಲ್ಲಿ ಹರಿದ್ವಾರದಲ್ಲಿ ನರಮೇಧದ ಕರೆ ನಂತರ, ಬಲಪಂಥೀಯ ಗುಂಪಿನಿಂದ ಕರ್ನಾಟಕದಲ್ಲಿ ಮುಸ್ಲಿಂ ಜನಾಂಗೀಯ ಹತ್ಯೆಗೆ ಮತ್ತೊಂದು ಕರೆಯನ್ನು ಬಹಿರಂಗವಾಗಿ ನೀಡಲಾಗಿದೆ” ಎಂದು ಅವರು ವಿಷಾದಿಸಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ಮಾತನಾಡಿರುವ ದುರ್ಗಾ ವಾಹಿನಿ ಮುಖಂಡರಾದ ಮಂಚಾಲೇಶ್ವರಿ ತೋಣಶ್ಯಾಳ ‘ಕೇಂದ್ರ, ರಾಜ್ಯದಲ್ಲಿ ನಮ್ಮದೇ ಬಿಜೆಪಿ ಸರ್ಕಾರಗಳಿದ್ದರೂ ಹಿಂದೂಗಳು ಬೀದಿಯಲ್ಲಿ ಹೆಣ ಇಟ್ಟುಕೊಂಡು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿರುವುದು ನಾಚಿಕೆ ಸಂಗತಿಯಾಗಿದೆ‘ ಎಂದಿದ್ದಾರೆ.

‘ಹಿಂದೂ ಯುವಕರನ್ನು ಪೋಸ್ಟ್‌ಮಾರ್ಟ್ಂಗೆ ಹಚ್ಚಿದ ಮತಾಂಧರ ಪೋಸ್ಟ್‌ಮಾರ್ಟ್ಂ ಆಗಬೇಕು. ಆಗ ಹಿಂದೂಗಳಿಗೆ ನ್ಯಾಯ ಸಿಗುತ್ತದೆ’ ಎಂದು ಹೇಳಿಕೆ ನೀಡಿದ್ದಾರೆ. “ರಾಜ್ಯದಲ್ಲಿ ಹಿಂದೂಗಳ ಒಂದೇ ಒಂದು ಕೂದಲು ಕೊಂಕಾಗದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೋಡಿಕೊಳ್ಳುವ ಭರವಸೆ ನೀಡಬೇಕು. ನಿಮಗೆ ಆ ತಾಕತ್ತು, ದಮ್‌ ಇಲ್ಲವಾದರೆ ಒಮ್ಮೆ ಉತ್ತರಪ್ರದೇಶಕ್ಕೆ ಹೋಗಿ ಯೋಗಿ ಆದಿತ್ಯಾನಾಥ ಅವರ ಬಳಿ ತರಬೇತಿ ಪಡೆದುಕೊಂಡು ಬನ್ನಿ” ಎಂದು ಸಲಹೆ ನೀಡಿದ್ದಾರೆ.

“ಹಿಂದೂಗಳು ರಕ್ತ ಹರಿಸಿ ನಿಮ್ಮನ್ನು ಅಧಿಕಾರದ ಗದ್ದುಗೆ ಮೇಲೆ ಕೂರಿಸಿರುವುದು ಆಪರೇಷನ್‌ ಕಮಲ ಮಾಡಲಿ ಎಂದಲ್ಲ. ನಮ್ಮ ಆಸೆ ಬಿಜೆಪಿ ಬಾವುಟ ಹಾರಿಸಬೇಕು ಎಂಬುದಲ್ಲ, ಕೇಸರಿ ಬಾವುಟ ಹಾರಿಸಬೇಕು ಎಂಬುದಾಗಿತ್ತು” ಎಂದು ತಿಳಿಸಿದ್ದಾರೆ.

ಪೊಲೀಸರಿಂದ ಕ್ರಮ ಯಾವಾಗ?

ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರಿಗೆ ಸಂಬಂಧಿಸಿದಂತೆ ಒಂದು ಟ್ವೀಟ್‌ ಮಾಡಿದ ಕಾರಣಕ್ಕೆ ನಟ ಚೇತನ್ ಅಹಿಂಸಾ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಯಿತು. “ಚೇತನ್‌ ಅಹಿಂಸಾ ಅವರು ಕೋಮುಗಳ ನಡುವೆ ಗಲಭೆಗೆ ಪ್ರಚೋದಿಸಿದ್ದಾರೆ, ನ್ಯಾಯಾಂಗದ ಮೇಲೆ ಅಪನಂಬಿಕೆ ಉಂಟು ಮಾಡಲು ಯತ್ನಿಸಿದ್ದಾರೆಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ಬಹಿರಂಗವಾಗಿ ಒಂದು ಸಮುದಾಯದ ವಿರುದ್ಧ ದ್ವೇಷ ಕಾರುತ್ತಿರುವವರ ಕುರಿತು ಪೊಲೀಸ್ ಇಲಾಖೆ ಯಾವ ಕ್ರಮ ಜರುಗಿಸಿದೆ” ಎಂಬ ಪ್ರಶ್ನೆ ಪ್ರಜ್ಞಾವಂತರಲ್ಲಿ ಮೂಡಿದೆ.

ವಿಜಯಪುರದಲ್ಲಿ ನಡೆದಿರುವ ಸಂಬಂಧ ಯಾವುದಾದರೂ ಕ್ರಮ ಜರುಗಿಸಲಾಗಿದೆ ಎಂಬುದನ್ನು ತಿಳಿಯಲು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ್‌ಕುಮಾರ್‌ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದೆ. ಪೊಲೀಸ್ ವರಿಷ್ಠಾಧಿಕಾರಿಯವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ನಟ, ಸಾಮಾಜಿಕ ಹೋರಾಟಗಾರ ಚೇತನ್‌ಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...