Homeಕರ್ನಾಟಕವಿಜಯಪುರ: ಗೋ ಸಾಗಾಟಗಾರನ ಮೇಲೆ ಬಜರಂಗದಳದಿಂದ ಥಳಿತ

ವಿಜಯಪುರ: ಗೋ ಸಾಗಾಟಗಾರನ ಮೇಲೆ ಬಜರಂಗದಳದಿಂದ ಥಳಿತ

- Advertisement -
- Advertisement -

ರಾಜ್ಯದಲ್ಲಿ ಮತ್ತೆ ಗೂಂಡಾಗಿರಿ ವರದಿಯಾಗಿದ್ದು, ದನ-ಕರುಗಳನ್ನು ಸಾಗಾಟ ಮಾಡುವಾಗ ವಾಹನ ತಡೆದು ಯುವಕನಿಗೆ ಬಜರಂಗದಳ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ.

ಬಂದೇನವಾಝ್‌ ಜಾತಗಾರ ಹಲ್ಲೆಗೊಳಗಾದವರು. ಬಂದೇ ನವಾಝ್ ಗೂಡ್ಸ್ ವಾಹನದಲ್ಲಿ ಎರಡು ಹೋರಿ, ಒಂದು ಆಕಳು, ಒಂದು ಎಮ್ಮೆಯ ಕರುಗಳನ್ನು ಬಬಲೇಶ್ವರದಿಂದ ವಿಜಯಪುರಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ದುಷ್ಕರ್ಮಿಗಳು ವಾಹನ ತಡೆದು ನವಾಝ್‌ಗೆ ಮನಬಂದಂತೆ ಥಳಿಸಿ ಪರಾರಿಯಾಗಿದ್ದಾರೆ. ಹಲ್ಲೆಯಿಂದ ನವಾಝ್ ಮೈಮೇಲೆ ಅಲ್ಲಲ್ಲಿ ರಕ್ತ ಹೆಪ್ಪುಗಟ್ಟಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿ ಬಜರಂಗದಳದ ವೀರೇಶ ಹಿರೇಮಠ, ರಾಜು ಬಿರಾದಾರ ಸೇರಿದಂತೆ 15-20 ಮಂದಿಯ ತಂಡದ ವಿರುದ್ಧ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಈ ಮತೀಯ ಗೂಂಡಾಗಿರಿಯನ್ನು ತಡೆಯವುದಾಗಿ ಹೇಳಿತ್ತು. ಆದರೆ ರಾಜ್ಯದಲ್ಲಿ ಮತ್ತೆ- ಮತ್ತೆ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಪೊಲೀಸ್‌ ವ್ಯವಸ್ಥೆ ಮತ್ತು ಸರಕಾರದ ನಿಷ್ಕ್ರಿಯತೆಯನ್ನು ತೋರಿಸುತ್ತದೆ.

ಇದನ್ನು ಓದಿ: ಮೈಸೂರು: ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...