Homeಕರ್ನಾಟಕವಿಜಯಪುರ | ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ : ಇಬ್ಬರ ಬಂಧನ

ವಿಜಯಪುರ | ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ : ಇಬ್ಬರ ಬಂಧನ

- Advertisement -
- Advertisement -

ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವಿಜಯಪುರ ನಗರದ ಹೊರವಲಯ ಗಾಂಧಿನಗರದ ಸ್ಟಾರ್ ಚೌಕ್‌ ಬಳಿಯ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ.

ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ್ ಎಂಬವರು ಕಾರ್ಮಿಕರಾದ ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಮುಂಗಡ ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಪೈಪ್‌ಗಳಿಂದ ಹಲ್ಲೆ ಮಾಡಲಾಗಿದೆ ಎಂದು ಈದಿನ.ಕಾಂ ವರದಿ ಮಾಡಿದೆ.

ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದರಲ್ಲಿ ಇಬ್ಬರು ಕಾರ್ಮಿಕರನ್ನು ನೆಲ ಮೇಲೆ ಕೂರಿಸಿರುವುದು. ಓರ್ವ ವ್ಯಕ್ತಿ ಒಬ್ಬ ಕಾರ್ಮಿಕನ ಕಾಲನ್ನು ತುಳಿದು ಹಿಡಿದಿರುವುದು ಮತ್ತು ಇನ್ನೋರ್ವ ಕಾರ್ಮಿಕನ ಕಾಲಿಗೆ ಇಬ್ಬರು ವ್ಯಕ್ತಿಗಳು ಭೀಕರವಾಗಿ ಹೊಡೆಯುತ್ತಿರುವ ದೃಶ್ಯವಿದೆ.

 

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದವರಾದ ಮೂವರು ಕಾರ್ಮಿಕರು ಹಬ್ಬಕ್ಕೆಂದು ಊರಿಗೆ ಹೋಗಿದ್ದರು. ವಾಪಸ್ ಬರಲು ವಿಳಂಬ ಮಾಡಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ಕಾರ್ಮಿಕರು ಎಷ್ಟೇ ಬೇಡಿಕೊಂಡರೂ ಬಿಡದೆ ಹಲ್ಲೆ ಮಾಡಲಾಗಿದೆ ಎಂದು ಈದಿನ.ಕಾಂ ವರದಿ ವಿವರಿಸಿದೆ.

ಘಟನೆ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯನ್ನು ನಾವು ಸಂಪರ್ಕಿಸಿದ್ದೇವೆ. “ಮೂವರು ಕಾರ್ಮಿಕರು ಮುಂಗಡವಾಗಿ ಹಣ ಪಡೆದು ಕೆಲಸಕ್ಕೆ ಬರಲು ತಡ ಮಾಡಿದ್ದಾರೆಂದು ಮಾಲೀಕ ಥಳಿಸಿರುವುದಾಗಿ ಮಾಹಿತಿ ಬಂದಿತ್ತು. ಗಾಯಾಳುಗಳು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿಂದ ನಮಗೆ ಎಂಎಲ್‌ಸಿ (ಮೆಡಿಕೋ-ಲೀಗಲ್ ಕೇಸ್ ) ಬಂದಿದೆ. ಹಾಗಾಗಿ, ನಮ್ಮ ಸಿಬ್ಬಂದಿ ಘಟನಾ ಸ್ಥಳಕ್ಕೆ ಹೋಗಿದ್ದಾರೆ” ಎಂಬುವುದಾಗಿ ಈದಿನ.ಕಾಂ ತಿಳಿಸಿದೆ.

ಇಬ್ಬರು ಆರೋಪಿಗಳ ಬಂಧನ
ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂವರು ಪರಾರಿಯಾಗಿದ್ದಾರೆ ಎಂದು ವಿಜಯಪುರ ನಗರ ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾಗಿ ವಾರ್ತಾ ಭಾರತಿ ವರದಿ ಮಾಡಿದೆ.

ಕಠಿಣ ಕ್ರಮ : ಸಚಿವ ಸಂತೋಷ್ ಲಾಡ್

ಕಾರ್ಮಿಕರ ಮೇಲಿನ ಹಲ್ಲೆ ಅಮಾನವೀಯ. ಮನುಷ್ಯತ್ವ ಇದ್ದವರು ಯಾರೂ ಈ ರೀತಿ ಮಾಡಲು ಸಾಧ್ಯವಿಲ್ಲ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಕಾರ್ಮಿಕ ಸಚಿವ ಸಂತೊಷ್ ಲಾಡ್ ಹೇಳಿದ್ದಾರೆ.

ರಾಯಚೂರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ ಅವರು, ಕಾರ್ಮಿಕರ ಮೇಲಿನ ಹಲ್ಲೆ ಖಂಡನೀಯ. ಅದು ನಾಗರಿಕ ಸಮಾಜ ಬೆಚ್ಚಿ ಬೀಳುವಂತಹ ಕೃತ್ಯವಾಗಿದೆ. ಮಾಲಕರಿಗೆ ಕಾರ್ಮಿಕರ ಬಗ್ಗೆ ಕಾಳಜಿ ಇರಬೇಕು. ಮನುಷ್ಯತ್ವ ಇಲ್ಲದವರೇ ಇಂತಹ ಕೃತ್ಯ ಎಸಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯೋಜನೆಗಳ ಜಾರಿಗೆ ನಿಯಮ ಸಡಿಲಿಸಿ – ಕೇಂದ್ರಕ್ಕೆ ರಾಜ್ಯ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...