ವಿಜಯಪುರ | ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ : ಇಬ್ಬರ ಬಂಧನ

ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವಿಜಯಪುರ ನಗರದ ಹೊರವಲಯ ಗಾಂಧಿನಗರದ ಸ್ಟಾರ್ ಚೌಕ್‌ ಬಳಿಯ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ. ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ್ ಎಂಬವರು ಕಾರ್ಮಿಕರಾದ ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಮುಂಗಡ ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಪೈಪ್‌ಗಳಿಂದ ಹಲ್ಲೆ ಮಾಡಲಾಗಿದೆ ಎಂದು ಈದಿನ.ಕಾಂ ವರದಿ ಮಾಡಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದರಲ್ಲಿ ಇಬ್ಬರು ಕಾರ್ಮಿಕರನ್ನು … Continue reading ವಿಜಯಪುರ | ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ : ಇಬ್ಬರ ಬಂಧನ