Homeಕರ್ನಾಟಕವಿಜಯಪುರ: ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಎಬಿವಿಪಿ ಸದಸ್ಯೆ ಮೇಲೆ ಎಫ್‌ಐಆರ್‌

ವಿಜಯಪುರ: ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಎಬಿವಿಪಿ ಸದಸ್ಯೆ ಮೇಲೆ ಎಫ್‌ಐಆರ್‌

- Advertisement -
- Advertisement -

ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಆರೋಪದ ಮೇಲೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯೆಯ ವಿರುದ್ಧ ವಿಜಯಪುರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಮುಸ್ಲಿಮರ ವಿರುದ್ಧ ವಿಶೇಷವಾಗಿ ಹಿಜಾಬ್ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವ ಆರು ವಿದ್ಯಾರ್ಥಿನಿಯರ ವಿರುದ್ಧ ಬಹಿರಂಗ ಹಿಂಸಾಚಾರಕ್ಕೆ ಪೂಜಾ ಕರೆ ನೀಡಿದ್ದರು. ಜೊತೆಗೆ 60,000 ಮುಸ್ಲಿಮರನ್ನು ಕೊಲ್ಲುವುದಾಗಿ ಪೂಜಾ ಹೇಳಿದ್ದಾರೆಂಬ ವಿಡಿಯೊವನ್ನು ಹಲವಾರು ವೆರಿಫೈಡ್‌ ಟ್ವಿಟರ್ ಬಳಕೆದಾರರು ಹಂಚಿಕೊಂಡಿದ್ದರು.

ಸೆಕ್ಷನ್ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು), 504 (ಶಾಂತಿ ಕದಡುವ ಉದ್ದೇಶ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ ಕುಮಾರ್ ತಿಳಿಸಿದ್ದಾರೆ.

ಪೂಜಾ ಬಂಧನವಾಗಿಲ್ಲ. ‘ಸಕಾಲದಲ್ಲಿ ಅವರನ್ನು ಬಂಧಿಸಲಾಗುವುದು’ ಎಂದು ಎಸ್‌ಪಿ ತಿಳಿಸಿದ್ದಾರೆ. ಆರೋಪಿಯ ವಯಸ್ಸು ಮತ್ತು ಇತರ ವಿವರಗಳು ಲಭ್ಯವಾಗಿಲ್ಲ. ಅವುಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪೂಜಾ ವೀರಶೆಟ್ಟಿಯವರ ಭಾಷಣಕ್ಕೆ ಸಂಬಂಧಿಸಿದಂತೆ ವಿರೋಧಗಳು ವ್ಯಕ್ತವಾಗುತ್ತಿದ್ದರೂ ಪ್ರಕರಣ ದಾಖಲಾಗಿರಲಿಲ್ಲ. ಈ ಸಂಬಂಧ  ‘ನಾನುಗೌರಿ.ಕಾಂ’ ಎರಡು ದಿನಗಳ ಹಿಂದೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್‌.ಡಿ.ಆನಂದ್‌ಕುಮಾರ್‌ ಅವರನ್ನು ಸಂಪರ್ಕಿಸಿತ್ತು.

“ಯಾರೂ ಇದುವರೆಗೆ ದೂರು ನೀಡಿಲ್ಲ. ಕಾನೂನು ತಜ್ಞರ ಬಳಿ ಮಾತನಾಡುತ್ತಿದ್ದೇವೆ. ಅವರ ಅಭಿಪ್ರಾಯ ತೆಗೆದುಕೊಂಡು ಸೂಕ್ತ ಕ್ರಮ ಜರುಗಿಸಲಾಗುತ್ತದೆ” ಎಂದು ಎಸ್‌ಪಿ ತಿಳಿಸಿದ್ದರು.

“ಸುಮೊಟೊ ಪ್ರಕರಣವಾದರೂ ದಾಖಲಾಗಬಹುದಿತ್ತು. ಕ್ಷುಲ್ಲಕ ಟ್ವೀಟ್‌ವೊಂದಕ್ಕೆ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅವರ ಮೇಲೆ ಪ್ರಕರಣ ದಾಖಲಾಗಿದೆ. ಕರ್ನಾಟಕದಂತಹ ರಾಜ್ಯದಲ್ಲಿ ಮುಸ್ಲಿಮರ ನರಹತ್ಯೆಗೆ ಕರೆ ನೀಡಲಾಗಿದೆ. ಹರಿದ್ವಾರದಲ್ಲಿ ನರಹತ್ಯೆಗೆ ಕರೆ ನೀಡಿದ ಬಳಿಕ ಕರ್ನಾಟಕದಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಘನತೆ ಹಾಳಾಗುತ್ತಿದೆಯಲ್ಲ” ಎಂದು ಪ್ರಶ್ನಿಸಿದಾಗ, “ಈ ಕುರಿತು ತನಿಖೆಯಾಗುತ್ತಿದೆ. ತಜ್ಞರ ಅಭಿಪ್ರಾಯ ತೆಗೆದುಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಆನಂದ್‌ಕುಮಾರ್‌ ಹೇಳಿದ್ದರು.

ಏನಿದು ಪ್ರಕರಣ?

ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಖಂಡಿಸಿ ವಿಜಯಪುರ ನಗರದಲ್ಲಿ ಬಜರಂಗದಳ, ವಿಎಚ್‌ಪಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ವಿಜಯಪುರ ಎಬಿವಿಪಿ ಪ್ರತಿನಿಧಿ ಪೂಜಾ ವೀರಶೆಟ್ಟಿಯವರು ಕೋಮು ಸೌಹಾರ್ದತೆ ಕದಡಲು ಯತ್ನಿಸಿದ್ದರು.

“ನಾವು ಭಾರತದವರು ಎಂಥವರು ಎಂದರೆ ನೀರು ಬೇಡ ಎಂದರೆ ಪಾನಕ ಕೊಡ್ತೀವಿ. ಹಾಲು ಬೇಡ ಅಂದರೆ ಮಜ್ಜಿಗೆ ಕೊಡ್ತೀವಿ. ನೀವು ಏನಾದರೂ ಭಾರತವನ್ನು ಹಿಜಾಬ್‌ಮಯ ಮಾಡಲು ಬಂದರೆ ಶಿವಾಜಿ ಕೈಯಲ್ಲಿನ ಕತ್ತಿ ತಗೊಂಡು ಇಂಚಿಂಚೇ ಕಡಿಯುತ್ತೇವೆ” ಎಂದು ಪ್ರಚೋದನಕಾರಿಯಾಗಿ ಪೂಜಾ ಮಾತನಾಡಿದ್ದರು.

“ಹರ್ಷಾ ಕೊಲೆ ಆರೋಪಿಗಳನ್ನು ಪೊಲೀಸರು 24 ತಾಸುಗಳಲ್ಲಿ ಬಂಧಿಸಿರುವುದು ಖುಷಿ ನೀಡಿದೆ. ಆದರೆ, ಬರಿ ಆರೋಪಿಗಳ ಬಂಧನವಾದರೆ ಸಾಲದು, ಅವರಿಗೆ ತಕ್ಕ ಶಿಕ್ಷೆಯಾಗಬೇಕು. ನಿಮ್ಮ ಕೈಯಲ್ಲಿ ಆಗದಿದ್ದರೆ ನಮ್ಮ ಕೈಗೆ 24 ತಾಸು ಅಲ್ಲ, ಒಂದು ತಾಸು ಅಧಿಕಾರ ಕೊಟ್ಟು ನೋಡಿ, ಆರು ಜನ ಅಲ್ಲ, ಅರವತ್ತು ಸಾವಿರ ಹಿಜಾಬ್‌ಗಳನ್ನು …” ಎಂದು ಪ್ರಚೋದಿಸಿರುವುದು ವಿಡಿಯೊದಲ್ಲಿ ದಾಖಲಾಗಿದೆ. (ಹೀಗೆ ಹೇಳಿದ ತಕ್ಷಣ ಪಕ್ಕದಲ್ಲಿದ್ದ ಮಹಿಳೆಯೊಬ್ಬರು ಪೂಜಾ ವೀರಶೆಟ್ಟಿಯರಿಗೆ ಭಾಷಣ ನಿಲ್ಲಿಸುವಂತೆ ಕೈ ಸನ್ನೆ ಮಾಡುತ್ತಾರೆ. ಪೂಜಾ ಭಾಷಣ ಕೇಳಿ ಪ್ರತಿಭಟನೆಯಲ್ಲಿದ್ದವರು ಉದ್ಘಾರ ಮಾಡುತ್ತಾರೆ.

ಪೂಜಾ ವೀರಶೆಟ್ಟಿ ವಿಡಿಯೊ ವೈರಲ್‌ ಆಗಿದ್ದು, ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕರಾದ ಜುಬೈರ್ ಟ್ವೀಟ್‌ ಮಾಡಿದ್ದರು. “ಡಿಸೆಂಬರ್ 2021ರಲ್ಲಿ ಹರಿದ್ವಾರದಲ್ಲಿ ನರಮೇಧದ ಕರೆ ನಂತರ, ಬಲಪಂಥೀಯ ಗುಂಪಿನಿಂದ ಕರ್ನಾಟಕದಲ್ಲಿ ಮುಸ್ಲಿಂ ಜನಾಂಗೀಯ ಹತ್ಯೆಗೆ ಮತ್ತೊಂದು ಕರೆಯನ್ನು ಬಹಿರಂಗವಾಗಿ ನೀಡಲಾಗಿದೆ” ಎಂದು ಅವರು ವಿಷಾದಿಸಿದ್ದರು.

 

ಇದೇ ಕಾರ್ಯಕ್ರಮದಲ್ಲಿ ಮಾತನಾಡಿರುವ ದುರ್ಗಾ ವಾಹಿನಿ ಮುಖಂಡರಾದ ಮಂಚಾಲೇಶ್ವರಿ ತೋಣಶ್ಯಾಳ, ‘ಕೇಂದ್ರ, ರಾಜ್ಯದಲ್ಲಿ ನಮ್ಮದೇ ಬಿಜೆಪಿ ಸರ್ಕಾರಗಳಿದ್ದರೂ ಹಿಂದೂಗಳು ಬೀದಿಯಲ್ಲಿ ಹೆಣ ಇಟ್ಟುಕೊಂಡು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿರುವುದು ನಾಚಿಕೆ ಸಂಗತಿಯಾಗಿದೆ‘ ಎಂದಿದ್ದರು.

‘ಹಿಂದೂ ಯುವಕರನ್ನು ಪೋಸ್ಟ್‌ಮಾರ್ಟ್ಂಗೆ ಹಚ್ಚಿದ ಮತಾಂಧರ ಪೋಸ್ಟ್‌ಮಾರ್ಟ್ಂ ಆಗಬೇಕು. ಆಗ ಹಿಂದೂಗಳಿಗೆ ನ್ಯಾಯ ಸಿಗುತ್ತದೆ’ ಎಂದು ಹೇಳಿಕೆ ನೀಡಿದ್ದರು. “ರಾಜ್ಯದಲ್ಲಿ ಹಿಂದೂಗಳ ಒಂದೇ ಒಂದು ಕೂದಲು ಕೊಂಕಾಗದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೋಡಿಕೊಳ್ಳುವ ಭರವಸೆ ನೀಡಬೇಕು. ನಿಮಗೆ ಆ ತಾಕತ್ತು, ದಮ್‌ ಇಲ್ಲವಾದರೆ ಒಮ್ಮೆ ಉತ್ತರಪ್ರದೇಶಕ್ಕೆ ಹೋಗಿ ಯೋಗಿ ಆದಿತ್ಯಾನಾಥ ಅವರ ಬಳಿ ತರಬೇತಿ ಪಡೆದುಕೊಂಡು ಬನ್ನಿ” ಎಂದು ಸಲಹೆ ನೀಡಿದ್ದರು.

“ಹಿಂದೂಗಳು ರಕ್ತ ಹರಿಸಿ ನಿಮ್ಮನ್ನು ಅಧಿಕಾರದ ಗದ್ದುಗೆ ಮೇಲೆ ಕೂರಿಸಿರುವುದು ಆಪರೇಷನ್‌ ಕಮಲ ಮಾಡಲಿ ಎಂದಲ್ಲ. ನಮ್ಮ ಆಸೆ ಬಿಜೆಪಿ ಬಾವುಟ ಹಾರಿಸಬೇಕು ಎಂಬುದಲ್ಲ, ಕೇಸರಿ ಬಾವುಟ ಹಾರಿಸಬೇಕು ಎಂಬುದಾಗಿತ್ತು” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...