Homeಕರ್ನಾಟಕಬಾಲಕನನ್ನು ಬೆತ್ತಲುಗೊಳಿಸಿ, ಬಣ್ಣ ಸುರಿದು ಚಿತ್ರಹಿಂಸೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

ಬಾಲಕನನ್ನು ಬೆತ್ತಲುಗೊಳಿಸಿ, ಬಣ್ಣ ಸುರಿದು ಚಿತ್ರಹಿಂಸೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

ಬಾಲಕನನ್ನು ಅಮಾನವೀಯವಾಗಿ ನಡೆಸಿಕೊಂಡ ವಿಷಯ ಇಂದು ವಿಧಾನ ಪರಿಷತ್‌ನಲ್ಲಿ ಚರ್ಚೆ ನಡೆದು, ಬಿ.ಕೆ ಹರಿಪ್ರಸಾದ್, ಪ್ರಕಾಶ್ ರಾಥೋಡ್, ತೇಜಸ್ವಿನಿ ಗೌಡ ಮುಂತಾದವರು ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಮೀಪದ ವಡ್ಡೋಡಗಿ ಗ್ರಾಮದಲ್ಲಿ ಕ್ಷುಲ್ಲಕ ವಿಷಯಕ್ಕೆ ಬಾಲಕನನ್ನು ಬೆತ್ತಲುಗೊಳಿಸಿ ಬಣ್ಣ ಸುರಿದು ಚಿತ್ರಹಿಂಸೆ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕ ಪ್ರಕಾಶ್ ರಾಥೋಡ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಾಲಕನ ಮೇಲೆ ದೌರ್ಜನ್ಯವೆಸಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಕೂಡಲೇ ಜಿಲ್ಲಾ ಪೋಲಿಸರು ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬಾಲಕನನ್ನು ಅಮಾನವೀಯವಾಗಿ ನಡೆಸಿಕೊಂಡ ವಿಷಯ ಇಂದು ವಿಧಾನ ಪರಿಷತ್‌ನಲ್ಲಿ ಬಹಳ ಹೊತ್ತು ಚರ್ಚೆಯಾಯಿತು. ಸದನದ ಶೂನ್ಯವೇಳೆಯಲ್ಲಿ ಪ್ರಕಾಶ್ ರಾಥೋಡ್ ಪ್ರಶ್ನೆ ಎತ್ತಿದ್ದರೆ, ಅದಕ್ಕೆ ದನಿಗೂಡಿಸಿದ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, “ಸಮರ್ಪಕ ತನಿಖೆ ನಡೆದು ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗಬೇಕು. ಆ ಮೂಲಕ ಇಂತಹ ಅಮಾನುಷ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು” ಎಂದರು.

ಸಭಾಪತಿ ಸ್ಥಾನದಲ್ಲಿದ್ದ ತೇಜಸ್ವಿನಿ ಗೌಡರವರು ಪ್ರತಿಕ್ರಿಯಿಸಿ, ಇಂತಹ ಅಮಾನವೀಯ ಪ್ರಕರಣಗಳು ನಡೆಯಬಾರದು ಎಂದರು. ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಈ ಘಟನೆಯ ಬಗ್ಗೆ ತೀವ್ರ ನೋವಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಪ್ರಕರಣದ ವಿವರ 

ಊರಿನ ಪ್ರಭಾವಿ ಸುಮುದಾಯದ ವ್ಯಕ್ತಿಯೊಬ್ಬರಿಗೆ ಬೈದಿದ್ದಾರೆ ಎಂದು ಆರೋಪಿಸಿ 12 ವರ್ಷದ ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಮೀಪದ ವಡ್ಡೋಡಗಿ ಗ್ರಾಮದಲ್ಲಿ ಜರುಗಿತ್ತು.

ಘಟನೆಯು ಹೋಳಿ ಹಬ್ಬದ ಮರುದಿನ ಮಾರ್ಚ್‌ 18 ರಂದು ನಡೆದಿತ್ತು. ಆದರೆ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಇದರ ನಂತರ ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಈ ದೂರನ್ನು ಆಧರಿಸಿ ಆರೋಪಿ ಹಣಮಂತರಾಯನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಹೋಳಿಯ ದಿನದಂದು ಕುರುಬ ಸಮುದಾಯದ ಬಾಲಕನು, ರೆಡ್ಡಿ ಸಮುದಾಯಕ್ಕೆ ಸೇರಿದ್ದ ಹಣಮಂತರಾಯನನ್ನು ಬೈದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಹಣಮಂತರಾಯ ಬಾಲಕನನ್ನು ಹೋಳಿಯ ಮರುದಿನ ತನ್ನ ಅಂಗಡಿಯ ಮುಂದಿನ ವಿದ್ಯುತ್‌ ಕಂಬಕ್ಕೆ ಕಟ್ಟಿ ಬೆತ್ತಲೆಯಾಗಿಸಿ, ಮೈಗೆ ಮತ್ತು ಗುಪ್ತಾಂಗಕ್ಕೆ ಬಣ್ಣ ಮತ್ತು ಸುಟ್ಟ ಆಯಿಲ್‌ ಅನ್ನು ಎರಚಿ ವಿಕೃತಿ ಮೆರೆದಿದ್ದಲ್ಲದೆ, ಹಲ್ಲೆ ಕೂಡಾ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಹಿಂದ ರೈತ ಸಂಘದ ರಾಜ್ಯಾಧ್ಯಕ್ಷ ಮಲ್ಲಪ್ಪ ಎಸ್‌. ಬಿದರಿ, “ಬಾಲಕನ್ನು ಬಸವನ ಬಾಗೇವಾಡಿ ಸರಕಾರಿ ಆಸ್ಪತ್ರೆಯಿಂದ ಜಿಲ್ಲಾ ಆಸ್ಪತೆಗೆ ದಾಖಲಿಸಲಾಗಿದೆ. ಜಿಲ್ಲಾಡಳಿತವೆ ಹೆಚ್ಚಿನ ಚಿಕಿತ್ಸೆಯ ಎಲ್ಲಾ ವೆಚ್ಚವನ್ನು ಭರಿಸಬೇಕು. ಘಟನೆಯ ಅಘಾತದಿಂದ ಸಂತ್ರಸ್ತ ಬಾಲಕ ಮಾನಸಿಕ ಸ್ಥಿಮಿತ ಕಳೆದುಕೊಂಡು ದುಃಖದಲ್ಲಿದ್ದಾರೆ. ಬಾಲಕನ ತಂದೆ-ತಾಯಿಗೆ ಬೆದರಿಕೆಯು ಬಂದಿದೆ ಎಂದು ತಿಳಿದು ಬಂದಿದ್ದು, ಅವರ ರಕ್ಷಣೆಯನ್ನೂ ಕೂಡಾ ಜಿಲ್ಲಾಡಳಿತ ಮಾಡಬೇಕು. ಅದಕ್ಕಾಗಿ ಸೂಕ್ತ ಕ್ರಮವನ್ನು ಜರುಗಿಸಬೇಕು” ಎಂದು ಹೇಳಿದ್ದಾರೆ.

“ಘಟನೆಯಲ್ಲಿ ಸ್ವತಃ ಪೊಲೀಸರೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಸಂತ್ರಸ್ತ ಬಾಲಕನ ಪೋಷಕರು ಬಡವರಾಗಿದ್ದು, ಬಲಿಷ್ಠ ಸಮುದಾಯದ ವಿರುದ್ದ ಧ್ವನಿ ಎತ್ತಲು ಹೆದರುತ್ತಾರೆ. ಆದರೆ ನಾವು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ನಂತರ ಪ್ರಕರಣ ದಾಖಲಾಗಿ ಬಂಧನ ಆಗಿದೆ. ಅಲ್ಲಿಯವರೆಗೂ ಯಾರೂ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ” ಎಂದು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಮಲ್ಲಪ್ಪ ಎಸ್‌. ಬಿದರಿ ಹೇಳಿದ್ದಾರೆ.

ಆರೋಪಿಯ ವಿರುದ್ಧ ಇದುವರೆಗೂ ‘ಪೋಕ್ಸೋ’ ದಾಖಲಿಸದ ಪೊಲೀಸರು

ಆರೋಪಿ ಹಣಮಂತರಾಯನ ವಿರುದ್ಧ ಐಪಿಸಿ ಸೆಕ್ಷನ್‌‌ 323, 342, 504, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಒಬ್ಬ ಆರೋಪಿಯನ್ನು ಬಂದಿಸಿದ್ದೇವೆ ಎಂದು ಬಸವನ ಬಾಗೇವಾಡಿ ಪೊಲೀಸ್ ಸಿಬ್ಬಂದಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ. ಆದರೆ ಬಾಲಕನನ್ನು ಬೆತ್ತಲೆ ಮಾಡಿ ವಿಕೃತವಾಗಿ ಹಿಂಸೆ ನೀಡಿರುವುದರ ವಿರುದ್ದ ಪೊಲೀಸರು ‘ಪೋಕ್ಸೋ’ ಅಡಿಯಲ್ಲಿ ಪ್ರಕರಣದ ದಾಖಲಿಸಿಲ್ಲ ಎಂಬುವುದು ಗಮನಾರ್ಹವಾಗಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಸವನ ಬಾಗೆವಾಡಿ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ್ ಪಾಟೀಲ್, “ಘಟನೆಯ ಸಂಬಂಧ ಈಗಾಗಲೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಪೋಕ್ಸೋ ಅಡಿಯಲ್ಲಿ ದಾಖಲಿಸುವ ಬಗ್ಗೆ ನಾವು ಮೇಲಾಧಿಕಾರಿಯ ಅಭಿಪ್ರಾಯ ತೆಗೆದುಕೊಳ್ಳುತ್ತಿದ್ದೇವೆ. ಲೈಂಗಿಕ ಉದ್ದೇಶ ಇದ್ದರೆ ಮಾತ್ರ ಅದನ್ನು ದಾಖಲಿಸಹುದು ಎಂದು ಹೇಳಲಾಗುತ್ತಿದೆ, ಅದರ ಬಗ್ಗೆ ಗಮನಿಸುತ್ತಿದ್ದೇವೆ. ಒಂದು ವೇಳೆ ಈ ಪ್ರಕರಣದಲ್ಲಿ ಅದು ಒಳಪಟ್ಟಿದ್ದರೆ ಅದನ್ನು ಸೇರಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಕ್ಸೋ ಕಾಯ್ದೆ-2012ಯು ಲೈಂಗಿಕ ಹಲ್ಲೆ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವರ್ತನೆಗಳಂತಹ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವುದಕ್ಕಾಗಿ, ಮಕ್ಕಳ ಹಿತಾಸಕ್ತಿ ಮತ್ತು ಒಳಿತಿನ ರಕ್ಷಣೆಗಾಗಿ ಜಾರಿಗೆ ತರಲಾಗಿತ್ತು. ಈ ಕಾಯ್ದೆಯು 18 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಯಾವುದೇ ವ್ಯಕ್ತಿಯನ್ನು ಮಗು ಎಂದು ವ್ಯಾಖ್ಯಾನಿಸುತ್ತದೆ. ಮತ್ತು ಆ ಮಗುವಿನ ದೈಹಿಕ ಆರೋಗ್ಯ, ಭಾವನಾತ್ಮಕ, ಭೌದ್ಧಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಪ್ರತೀ ಹಂತದಲ್ಲಿಯೂ ಆದ್ಯತೆ ನೀಡಿ ಖಾತ್ರಿಪಡಿಸುತ್ತದೆ. ಈ ಕಾಯ್ದೆ ಲಿಂಗ ತಟಸ್ತವಾಗಿದೆ. (ಕಾಯ್ದೆಯ ಬಗ್ಗೆ ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಅವರು, “ಪೋಕ್ಸೋ ಕಾಯ್ದೆಯ ಉದ್ದೇಶ ಮಕ್ಕಳ ರಕ್ಷಣೆಯಾಗಿದೆ. ಲೈಂಗಿಕ ಉದ್ದೇಶವೆ ಇರಬೇಕು ಎಂದು ನಿಯಮ ಏನೂ ಇಲ್ಲ. ಲೈಂಗಿಕ ದೌರ್ಜನ್ಯದಿಂದ ರಕ್ಷಣೆ ಎಂಬುವುದು ಈ ಕಾಯ್ದೆಯ ಮುಖ್ಯ ಉದ್ದೇಶವಾಗಿದೆಯಾದರೂ, ಮಕ್ಕಳ ಸುರಕ್ಷತೆಗೆ ದಕ್ಕೆ ಬಂದರೆ ಈ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವಕನ ಹಣೆ ಮೇಲೆ ಆ್ಯಸಿಡ್‌‌ನಿಂದ ‘ತ್ರಿಶೂಲ’, ‘ಓಂ’ ಚಿತ್ರ ಬರೆದು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...