Homeಕರ್ನಾಟಕವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಚಿತ್ರ ಹಿಂಸೆ; ಇನ್ನೂ ‘ಪೋಕ್ಸೋ’ ದಾಖಲಿಸದ ಪೊಲೀಸರು!

ವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಚಿತ್ರ ಹಿಂಸೆ; ಇನ್ನೂ ‘ಪೋಕ್ಸೋ’ ದಾಖಲಿಸದ ಪೊಲೀಸರು!

ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಲಾಗಿದೆ

- Advertisement -
- Advertisement -

ಊರಿನ ಪ್ರಭಾವಿ ಸುಮುದಾಯದ ವ್ಯಕ್ತಿಯೊಬ್ಬರಿಗೆ ಬೈದಿದ್ದಾರೆ ಎಂದು ಆರೋಪಿಸಿ 12 ವರ್ಷದ ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಮೀಪದ ವಡ್ಡೋಡಗಿ ಗ್ರಾಮದಲ್ಲಿ ನಡೆದಿದೆ.

ಘಟನೆಯು ಹೋಳಿ ಹಬ್ಬದ ಮರುದಿನ ಮಾರ್ಚ್‌ 18 ರಂದು ನಡೆದಿತ್ತು. ಆದರೆ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಇದರ ನಂತರ ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಈ ದೂರನ್ನು ಆಧರಿಸಿ ಆರೋಪಿ ಹಣಮಂತರಾಯನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ವಿವಾಹೇತರ ಸಂಬಂಧ ಆರೋಪ; ಮಹಿಳೆಯನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ- ವಿಡಿಯೊ ವೈರಲ್‌, ಪ್ರಕರಣ ದಾಖಲು

ಹೋಳಿಯ ದಿನದಂದು ಕುರುಬ ಸಮುದಾಯದ ಬಾಲಕನು, ರೆಡ್ಡಿ ಸಮುದಾಯಕ್ಕೆ ಸೇರಿದ್ದ ಹಣಮಂತರಾಯನನ್ನು ಬೈದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಹಣಮಂತರಾಯ ಬಾಲಕನನ್ನು ಹೋಳಿಯ ಮರುದಿನ ತನ್ನ ಅಂಗಡಿಯ ಮುಂದಿನ ವಿದ್ಯುತ್‌ ಕಂಬಕ್ಕೆ ಕಟ್ಟಿ ಬೆತ್ತಲೆಯಾಗಿಸಿ, ಮೈಗೆ ಮತ್ತು ಗುಪ್ತಾಂಗಕ್ಕೆ ಬಣ್ಣ ಮತ್ತು ಸುಟ್ಟ ಆಯಿಲ್‌ ಅನ್ನು ಎರಚಿ ವಿಕೃತಿ ಮೆರೆದಿದ್ದಲ್ಲದೆ, ಹಲ್ಲೆ ಕೂಡಾ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಹಿಂದ ರೈತ ಸಂಘದ ರಾಜ್ಯಾಧ್ಯಕ್ಷ ಮಲ್ಲಪ್ಪ ಎಸ್‌. ಬಿದರಿ, “ಬಾಲಕನ್ನು ಬಸವನ ಬಾಗೇವಾಡಿ ಸರಕಾರಿ ಆಸ್ಪತ್ರೆಯಿಂದ ಜಿಲ್ಲಾ ಆಸ್ಪತೆಗೆ ದಾಖಲಿಸಲಾಗಿದೆ. ಜಿಲ್ಲಾಡಳಿತವೆ ಹೆಚ್ಚಿನ ಚಿಕಿತ್ಸೆಯ ಎಲ್ಲಾ ವೆಚ್ಚವನ್ನು ಭರಿಸಬೇಕು. ಘಟನೆಯ ಅಘಾತದಿಂದ ಸಂತ್ರಸ್ತ ಬಾಲಕ ಮಾನಸಿಕ ಸ್ಥಿಮಿತ ಕಳೆದುಕೊಂಡು ದುಃಖದಲ್ಲಿದ್ದಾರೆ. ಬಾಲಕನ ತಂದೆ-ತಾಯಿಗೆ ಬೆದರಿಕೆಯು ಬಂದಿದೆ ಎಂದು ತಿಳಿದು ಬಂದಿದ್ದು, ಅವರ ರಕ್ಷಣೆಯನ್ನೂ ಕೂಡಾ ಜಿಲ್ಲಾಡಳಿತ ಮಾಡಬೇಕು. ಅದಕ್ಕಾಗಿ ಸೂಕ್ತ ಕ್ರಮವನ್ನು ಜರುಗಿಸಬೇಕು” ಎಂದು ಹೇಳಿದ್ದಾರೆ.

“ಘಟನೆಯಲ್ಲಿ ಸ್ವತಃ ಪೊಲೀಸರೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಸಂತ್ರಸ್ತ ಬಾಲಕನ ಪೋಷಕರು ಬಡವರಾಗಿದ್ದು, ಬಲಿಷ್ಠ ಸಮುದಾಯದ ವಿರುದ್ದ ಧ್ವನಿ ಎತ್ತಲು ಹೆದರುತ್ತಾರೆ. ಆದರೆ ನಾವು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ನಂತರ ಪ್ರಕರಣ ದಾಖಲಾಗಿ ಬಂಧನ ಆಗಿದೆ. ಅಲ್ಲಿಯವರೆಗೂ ಯಾರೂ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ” ಎಂದು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಮಲ್ಲಪ್ಪ ಎಸ್‌. ಬಿದರಿ ಹೇಳಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು 

ಆರೋಪಿಯ ವಿರುದ್ಧ ಇದುವರೆಗೂ ‘ಪೋಕ್ಸೋ’ ದಾಖಲಿಸದ ಪೊಲೀಸರು

ಆರೋಪಿ ಹಣಮಂತರಾಯನ ವಿರುದ್ಧ ಐಪಿಸಿ ಸೆಕ್ಷನ್‌‌ 323, 342, 504, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಒಬ್ಬ ಆರೋಪಿಯನ್ನು ಬಂದಿಸಿದ್ದೇವೆ ಎಂದು ಬಸವನ ಬಾಗೇವಾಡಿ ಪೊಲೀಸ್ ಸಿಬ್ಬಂದಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ. ಆದರೆ ಬಾಲಕನನ್ನು ಬೆತ್ತಲೆ ಮಾಡಿ ವಿಕೃತವಾಗಿ ಹಿಂಸೆ ನೀಡಿರುವುದರ ವಿರುದ್ದ ಪೊಲೀಸರು ‘ಪೋಕ್ಸೋ’ ಅಡಿಯಲ್ಲಿ ಪ್ರಕರಣದ ದಾಖಲಿಸಿಲ್ಲ ಎಂಬುವುದು ಗಮನಾರ್ಹವಾಗಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಸವನ ಬಾಗೆವಾಡಿ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ್ ಪಾಟೀಲ್, “ಘಟನೆಯ ಸಂಬಂಧ ಈಗಾಗಲೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಪೋಕ್ಸೋ ಅಡಿಯಲ್ಲಿ ದಾಖಲಿಸುವ ಬಗ್ಗೆ ನಾವು ಮೇಲಾಧಿಕಾರಿಯ ಅಭಿಪ್ರಾಯ ತೆಗೆದುಕೊಳ್ಳುತ್ತಿದ್ದೇವೆ. ಲೈಂಗಿಕ ಉದ್ದೇಶ ಇದ್ದರೆ ಮಾತ್ರ ಅದನ್ನು ದಾಖಲಿಸಹುದು ಎಂದು ಹೇಳಲಾಗುತ್ತಿದೆ, ಅದರ ಬಗ್ಗೆ ಗಮನಿಸುತ್ತಿದ್ದೇವೆ. ಒಂದು ವೇಳೆ ಈ ಪ್ರಕರಣದಲ್ಲಿ ಅದು ಒಳಪಟ್ಟಿದ್ದರೆ ಅದನ್ನು ಸೇರಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಕ್ಸೋ ಕಾಯ್ದೆ-2012ಯು ಲೈಂಗಿಕ ಹಲ್ಲೆ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವರ್ತನೆಗಳಂತಹ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವುದಕ್ಕಾಗಿ, ಮಕ್ಕಳ ಹಿತಾಸಕ್ತಿ ಮತ್ತು ಒಳಿತಿನ ರಕ್ಷಣೆಗಾಗಿ ಜಾರಿಗೆ ತರಲಾಗಿತ್ತು. ಈ ಕಾಯ್ದೆಯು 18 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಯಾವುದೇ ವ್ಯಕ್ತಿಯನ್ನು ಮಗು ಎಂದು ವ್ಯಾಖ್ಯಾನಿಸುತ್ತದೆ. ಮತ್ತು ಆ ಮಗುವಿನ ದೈಹಿಕ ಆರೋಗ್ಯ, ಭಾವನಾತ್ಮಕ, ಭೌದ್ಧಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಪ್ರತೀ ಹಂತದಲ್ಲಿಯೂ ಆದ್ಯತೆ ನೀಡಿ ಖಾತ್ರಿಪಡಿಸುತ್ತದೆ. ಈ ಕಾಯ್ದೆ ಲಿಂಗ ತಟಸ್ತವಾಗಿದೆ. (ಕಾಯ್ದೆಯ ಬಗ್ಗೆ ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಅವರು, “ಪೋಕ್ಸೋ ಕಾಯ್ದೆಯ ಉದ್ದೇಶ ಮಕ್ಕಳ ರಕ್ಷಣೆಯಾಗಿದೆ. ಲೈಂಗಿಕ ಉದ್ದೇಶವೆ ಇರಬೇಕು ಎಂದು ನಿಯಮ ಏನೂ ಇಲ್ಲ. ಲೈಂಗಿಕ ದೌರ್ಜನ್ಯದಿಂದ ರಕ್ಷಣೆ ಎಂಬುವುದು ಈ ಕಾಯ್ದೆಯ ಮುಖ್ಯ ಉದ್ದೇಶವಾಗಿದೆಯಾದರೂ, ಮಕ್ಕಳ ಸುರಕ್ಷತೆಗೆ ದಕ್ಕೆ ಬಂದರೆ ಈ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವಕನ ಹಣೆ ಮೇಲೆ ಆ್ಯಸಿಡ್‌‌ನಿಂದ ‘ತ್ರಿಶೂಲ’, ‘ಓಂ’ ಚಿತ್ರ ಬರೆದು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆರೋಪಿ ಹಣಮಂತರಾಯನ ವಿರುದ್ದ ಪೊಲೀಸರು ಈ ಕೂಡಲೇ ಫೋಕ್ಸೋ ಕಾನೂನಿನ ಅಡಿಯಲ್ಲಿ ದೂರು ದಾಕಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...