Homeಕರ್ನಾಟಕನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

- Advertisement -
- Advertisement -

‘ವಿಜಯವಾಣಿ.ನೆಟ್‌‌’ ಎಂಬ ಕನ್ನಡದ ಸುದ್ದಿ ವೆಬ್‌ಸೈಟ್‌‌, ಶ್ರೀಲಂಕಾ ಮೂಲದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರ ಬಗ್ಗೆಗಿನ ಸುದ್ದಿಯೊಂದಕ್ಕೆ ತೀರಾ ಅಸಂಬದ್ಧವಾದ ಹೆಡ್‌ಲೈ‌ನ್‌ ನೀಡಿ ‘ವಿಕೃತಿ’ ಮೆರೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬಹುಕೋಟಿ ವಂಚನೆ ಆರೋಪ ಎದುರಿಸುತ್ತಿರುವ ಸುಕೇಶ್‌‌‌ ಚಂದ್ರಶೇಖರ್‌‌‌ ಅವರೊಂದಿಗೆ ಹಣ ವರ್ಗಾವಣೆ ಮಾಡಿರುವ ಕಾರಣಕ್ಕೆ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರನ್ನು ಜಾರಿ ನಿರ್ದೇಶನಾಲಯ ಇತ್ತೀಚೆಗೆ ವಶಕ್ಕೆ ಪಡೆದುಕೊಂಡಿತ್ತು. ಜೊತೆಗೆ ದೇಶ ಬಿಟ್ಟು‌ ಹೊರ ಹೋಗದಂತೆ ನಟಿಗೆ ಸೂಚನೆ ಕೂಡಾ ನೀಡಿತ್ತು. ಈ ಮಧ್ಯೆ‌ ಸುಕೇಶ್‌ ಮತ್ತು ಜಾಕ್ವೆಲಿನ್ ಅವರ ಖಾಸಗಿಕ್ಷಣದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು.

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

ಇದರ ನಂತರ, ತನ್ನ ಖಾಸಗಿ ಕ್ಷಣದ ಚಿತ್ರಗಳನ್ನು ಪ್ರಸಾರ ಮಾಡದಂತೆ, ಈ ಹಿಂದೆ ಪತ್ರಕರ್ತೆ ಆಗಿಯೂ ಕೆಲಸ ನಿರ್ವಹಿಸಿದ್ದ ಜಾಕ್ವೆಲಿನ್ ಮಾಧ್ಯಮಗಳಿಗೆ ವಿನಂತಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದರು.

ನಟಿಯ ಈ ಹೇಳಿಕೆಯ ಬಗ್ಗೆ ಅನೇಕ ಮಾಧ್ಯಮಗಳು ವರದಿ ಕೂಡಾ ಮಾಡಿದ್ದವು. ಅದರಂತೆ ಕನ್ನಡದ ಪತ್ರಿಕೆ ವಿಜಯವಾಣಿಯ ಆನ್‌ಲೈನ್ ರೂಪವಾದ, ‘ವಿಜಯವಾಣಿ.ನೆಟ್‌’ ಕೂಡಾ ಈ ಬಗ್ಗೆ ಸುದ್ದಿಯೊಂದನ್ನು ಜನವರಿ 9, 2022 ರಂದು ಮಾಡಿತ್ತು. ಜೊತೆಗೆ ತನ್ನದೆ ಸುದ್ದಿ ಜಾಲವಾದ ‘ದಿಗ್ವಿಜಯ ನ್ಯೂಸ್‌’ ನ ಫೇಸ್‌ಬುಕ್‌ ಪೇಜ್‌ನಲ್ಲೂ ಅದನ್ನು ಪ್ರಕಟಿಸಿತ್ತು.

ನಟಿಯ ಈ ಹೇಳಿಕೆಯ ಆಧಾರದಲ್ಲಿ ಸುದ್ದಿ ಪ್ರಕಟಿಸಿದ್ದ ‘ವಿಜಯವಾಣಿ.ನೆಟ್‌’ ಜಾಕ್ವೆಲಿನ್‌ ಹೇಳಿರದೇ ಇರುವ ವಾಕ್ಯವನ್ನು ಬಳಸಿ, ‘ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿ’ ಎಂದು ಹೆಡ್‌ಲೈನ್‌ನಲ್ಲೇ ನೇರವಾಗಿ ಬರೆದು ವಿಕೃತಿ ಮೆರೆದಿದೆ.

ಇಷ್ಟೇ ಅಲ್ಲದೆ, ಸುದ್ದಿಯ ಮೊದಲ ಪ್ಯಾರಾದಲ್ಲೂ, “ಕೋಟಿಗಟ್ಟಲೆ ಹಣವನ್ನು ಪಡೆದು ‘ತನ್ನದೆಲ್ಲಾ ಅರ್ಪಿಸಿಕೊಂಡಿರುವ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್’ ಈಗ ಭಾರಿ ಪೇಚಿಗೆ ಸಿಲುಕಿದ್ದಾರೆ” ಎಂದು ಬರೆದು ತನ್ನ ವಿಕೃತಿಯನ್ನು ಮತ್ತೇ ಪುನರಾವರ್ತಿಸಿದೆ. (ಇಡೀ ಸುದ್ದಿಯ ಆರ್ಕೈವ್‌ ಲಿಂಕ್ ಇಲ್ಲಿದೆ.)

ಇದನ್ನೂ ಓದಿ:200 ಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಟಿ ನೋರಾ ಫತೇಹಿಗೆ ಸಮನ್ಸ್

ಸುದ್ದಿ ಜಾಲತಾಣಗಳು ತನ್ನ ಸುದ್ದಿಯನ್ನು ಓದುಗರನ್ನು ಸೆಳೆಯುವುದಕ್ಕಾಗಿ ಆಕರ್ಷಕ ಹೆಡ್‌ಲೈನ್‌ ನೀಡುವುದು ಸಾಮಾನ್ಯವಾಗಿದೆ. ಆದರೆ ವಿಜಯವಾಣಿ.ನೆಟ್‌ ಆಕರ್ಷಕ ಹೆಡ್‌ಲೈನ್‌ ಬರೆಯಲು ಹೋಗಿ ವಿಕೃತಿ ಮೆರೆದಿದೆ.

ವಿಜಯವಾಣಿ.ನೆಟ್‌‌ ಸುದ್ದಿಯ ಹೆಡ್‌ಲೈನ್‌

ವಿಜಯವಾಣಿ.ನೆಟ್‌‌ ತನ್ನ ಸುದ್ದಿಯ ಹೆಡ್‌ಲೈನ್‌ನಲ್ಲಿ, “ ‘ಅವ್ನು ಎಲ್ಲೆಲ್ಲೋ ಕಿಸ್‌ ಕೊಟ್ಟಿರೋ ದೃಶ್ಯ ಪ್ರಸಾರ ಮಾಡ್ಬೇಡಿ ಪ್ಲೀಸ್‌’ ಎಂದು ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿಯ ಮನವಿ!” ಎಂದು ಬರೆದಿದೆ. ಆದರೆ ನಟಿ ತನ್ನ ಹೇಳಿಕೆಯಲ್ಲಿ ಎಲ್ಲೂ ಈ ರೀತಿಯಾಗಿ ಹೇಳಿಯೆ ಇಲ್ಲ.

ಇದನ್ನೂ ಓದಿ:ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ವಾಸ್ತವದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್‌‌ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದೇನು?

ದೇಶವನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದ ನಟಿ, ‘‘ಈ ದೇಶ ಮತ್ತು ಇಲ್ಲಿನ ಜನರು ಯಾವಾಗಲೂ ನನಗೆ ಅಪಾರ ಪ್ರೀತಿ ಮತ್ತು ಗೌರವವನ್ನು ನೀಡಿದ್ದಾರೆ. ಇದರಲ್ಲಿ ನಾನು ಬಹಳಷ್ಟು ಕಲಿಯಲು ಸಹಾಯ ಮಾಡಿದ ನನ್ನ ಮಾಧ್ಯಮದ ಸ್ನೇಹಿತರು ಸೇರಿದ್ದಾರೆ. ಸದ್ಯ ನಾನು ಬಹಳ ಕಷ್ಟದ ಸಮಯದಲ್ಲಿದ್ದೇನೆ. ಇದನ್ನೂ ನನ್ನ ಸ್ನೇಹಿತರು ಮತ್ತು ಅಭಿಮಾನಿಗಳು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ. ನನ್ನ ಗೌಪ್ಯತೆ ಮತ್ತು ವೈಯಕ್ತಿಕ ಬದುಕಿನ ಚಿತ್ರಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸ್ನೇಹಿತರನ್ನು ವಿನಂತಿಸುತ್ತೇನೆ. ನೀವು ನಿಮ್ಮ ಪ್ರೀತಿಪಾತ್ರರಿಗೆ ಏನು ಮಾಡಲು ಬಯಸುವುಲ್ಲವೊ, ಹಾಗೆ ನನಗೂ ಮಾಡುವುದಿಲ್ಲ ಎಂಬ ನಂಬಿಕೆಯಿದೆ. ನ್ಯಾಯ ಮತ್ತು ಒಳ್ಳೆಯತನ ಮೇಲುಗೈ ಸಾಧಿಸುತ್ತದೆ ಎಂದು ಆಶಿಸುತ್ತೇನೆ. ಧನ್ಯವಾದಗಳು” ಎಂದು ಬರೆದಿದ್ದರು.

ನಟಿ ಜಾಕ್ವೆಲಿನ್ ಟ್ವೀಟ್

ಇದನ್ನೂ ಓದಿ:ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸಾಮಾಜಿಕ ಜಾಲತಾಣದಲ್ಲಿ ಜಾಕ್ವೆಲಿನ್ ಅವರು, ನೀವು ನಿಮ್ಮ ಪ್ರೀತಿ ಪಾತ್ರರ ಖಾಸಗಿ ಚಿತ್ರಗಳನ್ನು ವೈರಲ್ ಮಾಡುವುದಿಲ್ಲವೋ, ಹಾಗೆಯೇ ನನ್ನ ಚಿತ್ರಗಳನ್ನೂ ವೈರಲ್ ಮಾಡಬೇಡಿ ಎಂದು ಸ್ಪಷ್ಟವಾಗಿ ಮಾಧ್ಯಮಗಳಿಗೆ ಮನವಿ ಮಾಡಿಕೊಂಡಿದ್ದರು.

ವಿಜಯವಾಣಿ.ನೆಟ್‌ ಸುದ್ದಿಯ ಈ ಹೆಡ್‌ಲೈನ್‌ಗೆ ಸಾಮಾಜಿಕ ಜಾಲತಣದಲ್ಲಿ ತೀವ್ರ ಆಕ್ರೋಶ ಕೂಡಾ ವ್ಯಕ್ತವಾಗಿದೆ.

ಪತ್ರಕರ್ತ ಅಲ್ಮೈಡಾ ಗ್ಲಾಡ್‌ಸನ್ ಅವರು, “ನ್ಯೂಸ್‌ ಡೆಸ್ಕ್‌ಗಳಲ್ಲಿ ಸ್ಯಾಡಿಸ್ಟ್‌ಗಳು, ಲಂಪಟರು, ಕಾಮುಕರು ತುಂಬಿದ್ದಾರೆ. ಇವರು ನಟಿಯ ಹೇಳಿಕೆಯನ್ನಷ್ಟೇ ತಿರುಚಿಲ್ಲ ಬದಲಾಗಿ ಕೊನೆಗೆ ತಮ್ಮ ಲಂಪಟತನದ ಪರಮಾವಧಿಯನ್ನು ತೋರಿಸಲು ‘ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿ’ ಎನ್ನುವ ಧೂರ್ತ ಹೇಳಿಕೆಯನ್ನೂ ಬರೆದು ಹಾಕಿದ್ದಾರೆ. ಇದರರ್ಥವೇನು? ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿಯೆಂದರೆ ಏನು? ಈ ‘ಎಲ್ಲ’ದರ ಅರ್ಥವೇನು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...