Homeಕರ್ನಾಟಕವಿಜಯೇಂದ್ರ ಒಬ್ಬರಿಂದಲೇ ಎಲ್ಲವೂ ಆಗಲ್ಲ: ಕೆ.ಎಸ್ ಈಶ್ವರಪ್ಪ

ವಿಜಯೇಂದ್ರ ಒಬ್ಬರಿಂದಲೇ ಎಲ್ಲವೂ ಆಗಲ್ಲ: ಕೆ.ಎಸ್ ಈಶ್ವರಪ್ಪ

- Advertisement -
- Advertisement -

ಬಿಜೆಪಿ ನೂತನ ಅಧ್ಯಕ್ಷರನ್ನಾಗಿ ಬಿಎಸ್‌ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು, ವಿಜಯೇಂದ್ರ ಒಬ್ಬರಿಂದಲೇ ಎಲ್ಲವೂ ಆಗಲ್ಲ. ಅವರು ಒಬ್ಬ ನಾಯಕ ಮಾತ್ರ ಎಂದಿದ್ದಾರೆ.

ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಯಾರೋ ಒಬ್ಬ ವ್ಯಕ್ತಿಯಿಂದ ಪಕ್ಷ ಬೆಳೆಯಲ್ಲ ಭಾರತೀಯ ಜನತಾ ಪಾರ್ಟಿ ಯಾರ ಮೇಲೂ ನಿಂತಿಲ್ಲ. ನರೇಂದ್ರ ಮೋದಿ ಕೂಡಾ ಓರ್ವ ಬಿಜೆಪಿಯಲ್ಲಿ ಕಾರ್ಯಕರ್ತರು. ನಾನು ಕೂಡ ಕಾರ್ಯಕರ್ತ” ಎಂದು ಹೇಳಿದ್ದಾರೆ.

”ವಿಜಯೇಂದ್ರ ಒಬ್ಬರಿಂದಲೇ ಎಲ್ಲವೂ ಆಗಲ್ಲ. ಅವರು ಒಬ್ಬ ನಾಯಕ ಮಾತ್ರ, ಎಲ್ಲರೂ ಒಟ್ಟಾಗಿ 28 ಸ್ಥಾನ ಗೆಲ್ಲುತ್ತೇವೆ. ಸಾಮೂಹಿಕ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ ಎಂದು ಹೇಳಿದರು. “ದೇಶದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿದೆ ಎನ್ನುವುದು ಗೊತ್ತಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಕಾಂಗ್ರೆಸ್ ಪಕ್ಷ ಎಲ್ಲಿದೆ? ಕರ್ನಾಟಕದಲ್ಲಿ ಕಾಂಗ್ರೆಸ್ ಒಡೆದು ಚೂರಾಗಿದೆ” ಎಂದು ಟೀಕಿಸಿದ್ದಾರೆ.

”ಕುಟುಂಬ ರಾಜಕಾರಣದ ಬಗ್ಗೆ ಟ್ವಿಟ್ ಮಾಡಲು ಕಾಂಗ್ರೆಸ್ ಗೆ ಅಧಿಕಾರ ಇದೆಯೇ? ನೆಹರೂ, ಇಂದಿರಾಗಾಂಧಿ, ಎಎಸಿಸಿ ಅಧ್ಯಕ್ಷರು ಕುಟುಂಬದವರು. ಎಲ್ಲೂ ವಿರೋಧವಿಲ್ಲ, ಬಿಜೆಪಿಯಲ್ಲಿ ಎಲ್ಲಾ ಒಟ್ಟಾಗಿದ್ದೇವೆ. ವಿಜಯೇಂದ್ರ ಅವರಿಂದ ಸಂಘಟನೆ ಬೆಳೆಯುತ್ತದೆ” ಎಂದು ಹೇಳಿದರು.

ರಾಜ್ಯ ಬಿಜೆಪಿಯ ಅಧ್ಯಕ್ಷರನ್ನಾಗಿ ವಿಜಯೇಂದ್ರ ನೇಮಕವಾದ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಯಡಿಯೂರಪ್ಪನವರ ಮಗನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡುವ ಮೂಲಕ ಬಿಜೆಪಿ ಲೀಡರ್ ಲೆಸ್ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ. ದಶಕಗಳ ಕಾಲ ಪಕ್ಷದಲ್ಲಿ ದುಡಿದವರು ಹಲವರಿದ್ದರೂ “ಎಳೆ ಹುಡುಗ”ನಿಗೆ ಪಟ್ಟ ಕಟ್ಟುವ ಮೂಲಕ ಉಳಿದವರೆಲ್ಲ ಅನರ್ಹರು ಎಂಬ ಸಂದೇಶ ನೀಡಿದ್ದೇ ಅಥವಾ ಕುಟುಂಬ ರಾಜಕಾರಣಕ್ಕೆ ಮಣಿದಿದ್ದೇ ? ರಾಜ್ಯ ಬಿಜೆಪಿ ಉತ್ತರಿಸುವುದೇ?” ಎಂದು ಕೇಳಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆ್ಯನಿಮೇಟೆಡ್ ವಿಡಿಯೋ ಹಂಚಿಕೆ: ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

0
ಕಾಂಗ್ರೆಸ್ ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲಿದೆ ಎಂಬ ಸಂದೇಶ ಸಾರುವ ಆ್ಯನಿಮೇಟೆಡ್ ವಿಡಿಯೋ ಪೋಸ್ಟ್ ಮಾಡಿರುವುದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ದ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ. ಮೇ 4,...