Homeಮುಖಪುಟಫಾರಂ-7 ಮೂಲಕ ಆಕ್ಷೇಪ: ಬಿಜೆಪಿ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯುವಂತೆ ವಿಜಯೇಂದ್ರ ಒತ್ತಾಯ

ಫಾರಂ-7 ಮೂಲಕ ಆಕ್ಷೇಪ: ಬಿಜೆಪಿ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯುವಂತೆ ವಿಜಯೇಂದ್ರ ಒತ್ತಾಯ

- Advertisement -
- Advertisement -

ಚುನಾವಣಾ ಆಯೋಗದ ನಿಯಮಾನುಸಾರ ಫಾರಂ-7 ಸಲ್ಲಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಎಫ್‌ಐಆರ್ (FIR) ದಾಖಲಿಸಿರುವುದನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಈ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ. ರಾಜ್ಯ ಡಿಜಿಪಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಸಚಿವರು ಚುನಾವಣಾ ಆಯೋಗದ ಮುಂದೆ ಧರಣಿ ನಡೆಸಿದ ಬಳಿಕ ಪೊಲೀಸರ ಮೇಲೆ ತೀವ್ರ ಒತ್ತಡ ಹೇರಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದರು.

ಮತದಾರರ ಪಟ್ಟಿಯಲ್ಲಿ ಅನರ್ಹರು ಅಥವಾ ನಿಯಮಬಾಹಿರವಾಗಿ ಸೇರ್ಪಡೆಯಾದ ಹೆಸರುಗಳಿದ್ದರೆ, ಯಾವುದೇ ನಾಗರಿಕ ಫಾರಂ-7 ಮೂಲಕ ಆಕ್ಷೇಪ ಸಲ್ಲಿಸುವುದು ಚುನಾವಣಾ ಆಯೋಗವೇ ನೀಡಿರುವ ಕಾನೂನುಬದ್ಧ ಅವಕಾಶವಾಗಿದೆ. ಅರ್ಜಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದು ಅಥವಾ ತಿರಸ್ಕರಿಸುವುದು ಆಯೋಗದ ಕೆಲಸವಾಗಿದ್ದರೂ, ಈ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡು ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸುವ ಮೂಲಕ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಅನ್ಯಾಯವಾಗಿ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯದಿದ್ದರೆ ಪೊಲೀಸ್ ಠಾಣೆಗಳ ಮುಂದೆ ಪ್ರತಿಭಟನೆ ನಡೆಸುವುದು ಸೇರಿದಂತೆ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

ಇದೇ ವೇಳೆ ಎಸ್‌ಐಟಿ (SIT) ರಚನೆ ಕುರಿತು ಮುಖ್ಯಮಂತ್ರಿಗಳ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ವಿಜಯೇಂದ್ರ, “ಅಧಿಕಾರದಲ್ಲಿದ್ದೇವೆ ಎಂಬ ಕಾರಣಕ್ಕೆ ಪೊಲೀಸ್ ವ್ಯವಸ್ಥೆಯನ್ನು ಮನಬಂದಂತೆ ಬಳಸಿಕೊಳ್ಳಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳು ಗೂಂಡಾಗಿರಿ, ದಾದಾಗಿರಿ ಮಾಡಲು ಹೊರಟಿದ್ದಾರೆ, ತಾವು ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಎಂಬುದನ್ನು ಮತ್ತೆ ನೆನಪು ಮಾಡಿಕೊಳ್ಳಲು ಹೊರಟಂತಿದೆ. ಆದರೆ ಅಧಿಕಾರ ಯಾರಪ್ಪನ ಮನೆಯ ಆಸ್ತಿಯಲ್ಲ, ಅಧಿಕಾರದ ದುರುಪಯೋಗವನ್ನು ತಕ್ಷಣ ನಿಲ್ಲಿಸಬೇಕು” ಎಂದು ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರದ ಒತ್ತಡಕ್ಕೆ ಮಣಿದು ಕಾರ್ಯಕರ್ತರ ಮೇಲೆ ಕೇಸ್ ಹಾಕಿರುವುದನ್ನು ಖಂಡಿಸಿದ ಅವರು, ಕಾರ್ಯಕರ್ತರ ರಕ್ಷಣೆ ತಮ್ಮ ಜವಾಬ್ದಾರಿಯಾಗಿದ್ದು, ಪ್ರಕರಣಗಳನ್ನು ವಾಪಸ್ ಪಡೆಯದಿದ್ದರೆ ಅದರ ಪರಿಣಾಮವನ್ನು ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...