Homeಕರ್ನಾಟಕವಿಜಯಪುರ: ರಾಷ್ಟ್ರಧ್ವಜದ ಮೇಲೆ ಕುಳಿತು ಬಿಜೆಪಿ ಶಾಸಕನ ಪುತ್ರ ಸವಾರಿ!

ವಿಜಯಪುರ: ರಾಷ್ಟ್ರಧ್ವಜದ ಮೇಲೆ ಕುಳಿತು ಬಿಜೆಪಿ ಶಾಸಕನ ಪುತ್ರ ಸವಾರಿ!

- Advertisement -
- Advertisement -

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ವೇಳೆ ಬಿಜೆಪಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರ ಪುತ್ರ ಭರತ್‌ಗೌಡ ಪಾಟೀಲ ಅವರು ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದಾರೆಂಬ ಆರೋಪ ಬಂದಿದೆ.

ತ್ರಿವರ್ಣ ಧ್ವಜವನ್ನು ಆನೆ ಮೇಲೆ ಹೊದಿಸಿ, ನಂತರ ಅದರ ಮೇಲೆ ಕುಳಿತು ಸವಾರಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾಸಕ ಮತ್ತು ಅವರ ಪುತ್ರ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಹಲವರು ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕುರಿತು ಪತ್ರಕರ್ತ ಇಮ್ರಾನ್‌ಖಾನ್‌ ವಿಡಿಯೊ ಪೋಸ್ಟ್ ಮಾಡಿದ್ದಾರೆ. ಭರತ್‌ಗೌಡ ಅವರು ಆನೆಯ ಮೇಲೆ ಕುಳಿತು, ಬಸವಣ್ಣವರ ಭಾವಚಿತ್ರಕ್ಕೆ ಹೂಗಳನ್ನು ಅರ್ಪಣೆ ಮಾಡುವುದನ್ನು ಕಾಣಬಹುದು. ಜೊತೆಗೆ ಕೇಸರಿ, ಬಿಳಿ, ಹಸಿರು ಬಣ್ಣದ ಭಾವುಟವನ್ನು ಆನೆಯ ಮೇಲೆ ಹೊದಿಸಲಾಗಿದ್ದು, ಭರತ್ ಅವರು ಕೇಸರಿ ಬಣ್ಣದ ಮೇಲೆ ಕುಳಿತಿರುವುದನ್ನು ವಿಡಿಯೊದಲ್ಲಿ ಗುರುತಿಸಬಹುದು. ಅನೇಕರು ಜೈಕಾರ ಕೂಗುವುದು ವಿಡಿಯೊದಲ್ಲಿ ದಾಖಲಾಗಿದೆ.

ಈ ವಿಡಿಯೊವನ್ನು ‘ನಾನುಗೌರಿ.ಕಾಂ’ ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಿಲ್ಲ. ಆದರೆ ‘ಎ.ಎಸ್.ಪಾಟೀಲ್‌ ನಡಹಳ್ಳಿ’ ಹೆಸರಿನ ಫೇಸ್‌ಬುಕ್‌ ಖಾತೆಯಲ್ಲಿ ಭರತ್ ಪಾಟೀಲ್‌ ಅವರ ಸಮರ್ಥನೆಗಳಿರುವ ಪೋಸ್ಟರ್‌ಗಳನ್ನು ಹಂಚಿಕೊಳ್ಳಲಾಗಿದೆ.

‘ನನ್ನ ಪಾಲಿಗೆ ಹೆತ್ತ ತಾಯಿ, ಭಾರತ ಮಾತೆ ಇಬ್ಬರೂ ಒಂದೇ’ ಎಂಬ ಶೀರ್ಷಿಕೆಯಲ್ಲಿ ಪೋಸ್ಟರ್‌‌ ಮಾಡಿ ಹಂಚಿಕೊಂಡಿರುವುದನ್ನು ಗಮನಿಸಬಹುದು.

“ಮೊಸರಲ್ಲಿ ಕಲ್ಲು ಹುಡುಕುವವರನ್ನು ಎಂದಿಗೂ ಒಪ್ಪಿಸಲಾಗದು. ಏನೇ ಮಾಡಿದರು ತಪ್ಪು ಹುಡುಕಲೇ ಬೇಕೆಂದುಕೊಂಡವರನ್ನ ಮೆಚ್ಚಿಸಲು ಹೇಗೆ ಸಾಧ್ಯ? ದೇಶಪ್ರೇಮದಲ್ಲೂ ವಿಷ ಬೀಜ ಬಿತ್ತುವ ಕೆಲಸ ಮಾಡಿದ್ದಾರೆ. ತ್ರಿವರ್ಣವನ್ನು ಹೊದ್ದು ನಡೆಯುತ್ತಿದ್ದ ಐರಾವತದ ಮೇಲೆ ಕುಳಿತು, ಭಾರತದ ರಾಷ್ಟ್ರ ಧ್ವಜ ನಮ್ಮೆಲ್ಲರ ಹೆಮ್ಮೆ, ಗರ್ವ, ದೇಶಪ್ರೇಮ, ಭಾವೈಕ್ಯತೆ ಪ್ರತೀಕ ಎಂದು ಸಂದೇಶ ಸಾರಿದ್ದೇನೆ” ಎಂದು ಪೋಸ್ಟರ್‌ನಲ್ಲಿ ಸಮರ್ಥಿಸಿಕೊಳ್ಳಲಾಗಿದೆ.

ಇದನ್ನೂ ಓದಿರಿ: ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಫೋಟೋ- ಪರಿಚಯ ಕಿತ್ತೆಸೆದ ಬಿಜೆಪಿ ಸರ್ಕಾರ; ಜನಾಕ್ರೋಶ

“ಕೆಲವು ಕಿಡಿಗೇಡಿಗಳು ಹಾಲಿಗೆ ಹುಳಿ ಹಿಂಡುವ ಕೆಲಸ ಮಾಡಿದ್ದಾರೆ. ನನ್ನ ಪಾಲಿಗೆ ಹೆತ್ತತಾಯಿ, ಭಾರತ ಮಾತೆ ಇಬ್ಬರೂ ಒಂದೇ. ತಾಯಿಗೆ ಅವಮಾನ ಮಾಡುವಂತಹ ಕೆಲಸ ನನ್ನಿಂದ ಎಂದಿಗೂ ಆಗುವುದಿಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...