Homeಮುಖಪುಟವಿಕಾಸ್ ದುಬೆ ಎನ್‌ಕೌಂಟರ್‌; ಯುಪಿ ಪೊಲೀಸ್‌ಗೆ ಕ್ಲೀನ್‌ ಚಿಟ್‌- ಯಾರೂ ಪುರಾವೆ ನೀಡಿಲ್ಲ!

ವಿಕಾಸ್ ದುಬೆ ಎನ್‌ಕೌಂಟರ್‌; ಯುಪಿ ಪೊಲೀಸ್‌ಗೆ ಕ್ಲೀನ್‌ ಚಿಟ್‌- ಯಾರೂ ಪುರಾವೆ ನೀಡಿಲ್ಲ!

- Advertisement -
- Advertisement -

ಕಳೆದ ವರ್ಷ ನಡೆದ ದರೋಡೆಕೋರ ವಿಕಾಸ್ ದುಬೆಯ ಎನ್‌ಕೌಂಟರ್‌‌‌ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ತನಿಖಾ ಆಯೋಗವು ತನ್ನ ವರದಿಯಲ್ಲಿ ತಿಳಿಸಿದೆ. ಸಾಕಷ್ಟು ಪುರಾವೆಗಳೊಂದಿಗೆ ಮುಂದೆ ಬರದಿರುವುದಕ್ಕೆ ಸಾರ್ವಜನಿಕರನ್ನು, ಮಾಧ್ಯಮಗಳನ್ನು ಮತ್ತು ಅಪರಾಧಿಯ ಕುಟುಂಬವನ್ನು ತನಿಖಾ ಆಯೋಗವು ದೂಷಿಸಿದೆ ಎಂದು ವರದಿಯಾಗಿದೆ.

ದರೋಡೆಕೋರ ವಿಕಾಸ್ ದುಬೆ ಹಾಗೂ ಸಹಚರರು ಹೊಂಚು ಹಾಕಿ ಎಂಟು ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿ ಕೊಂದಿದ್ದರು. ಇದಾದ ನಂತರ ಪರಾರಿಯಾಗಿದ್ದ ದುಬೆಯನ್ನು ಉತ್ತರ ಪ್ರದೇಶದ ಹೊರಗೆ ಬಂಧನ ಮಾಡಲಾಗಿತ್ತು. ಅಲ್ಲಿಂದ ದುಬೆಯನ್ನು ಪೊಲೀಸ್ ಬೆಂಗಾವಲಿನಲ್ಲಿ ಮತ್ತೆ ಯುಪಿಗೆ ಕರೆತರಲಾಗಿತ್ತು.

ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು 

ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ ಹೊಡೆದಿದ್ದು, ಈ ಸಮಯದಲ್ಲಿ ದುಬೆ ಪೊಲೀಸರ ಬಂದೂಕನ್ನು ಕಿತ್ತು, ತಪ್ಪಿಸಿಕೊಳ್ಳಲು ಯತ್ನಿಸಿ ಪೊಲೀಸರ ಮೇಲೆ ಗುಂಡು ಹಾರಿಸಿದ್ದಕ್ಕೆ ದುಬೆಯನ್ನು ಎನ್‌ಕೌಂಟರ್‌ ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದರು.

ಎನ್‌ಕೌಂಟರ್‌‌ ಬಗ್ಗೆ ಪೊಲೀಸ್ ಹೇಳಿಕೆಯ ಆಯಾಮವನ್ನು ಅಲ್ಲಗಳೆಯಲು ಯಾವುದೇ ಪುರಾವೆಗಳಿಲ್ಲ, ಆದರೆ ಅದನ್ನು ಅವರ ಹೇಳಿಕೆಯ ಪರವಾಗಿ ಸಾಕಷ್ಟು ಪುರಾವೆಗಳು ಇವೆ ಎಂದು ಮೂವರು ಸದಸ್ಯರ ವಿಚಾರಣಾ ಸಮಿತಿಯು ಯುಪಿ ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.

ವಿಕಾಸ್ ದುಬೆಯನ್ನು ನಕಲಿ ಎನ್ಕೌಂಟರ್‌ನಲ್ಲಿ ಕೊಲ್ಲಲಾಗಿದೆ, ಆದ್ದರಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕೆಂದು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಕೆಯಾಗಿತ್ತು. ಹಾಗಾಗಿ ಕೋರ್ಟ್ ಪ್ರಕರಣದ ತನಿಖೆಗೆ ನ್ಯಾಯಾಂಗ ಸಮಿತಿಯನ್ನು ರಚಿಸಿತ್ತು.

ಇದನ್ನೂ ಓದಿ:  ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ

ನ್ಯಾಯಮೂರ್ತಿ ಬಿ.ಎಸ್. ಚೌಹಾನ್ ನೇತೃತ್ವದ ವಿಚಾರಣಾ ಆಯೋಗವು ಪೊಲೀಸರ ವಿರುದ್ಧ ಯಾರೂ ಯಾವುದೇ ಪುರಾವೆಗಳೊಂದಿಗೆ ಮುಂದೆ ಬರಲಿಲ್ಲ ಎಂದು ಹೇಳಿದ್ದಾಗಿ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

“ನಾವು ಸಾಕ್ಷ್ಯಗಳನ್ನು ಸಂಗ್ರಹಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ, ಸಾರ್ವಜನಿಕರಿಗೆ ಮತ್ತು ಮಾಧ್ಯಮಗಳಿಗೆ ಅವರ ಆಯಾಮವನ್ನು ನೀಡುವಂತೆ ಕೇಳಿಕೊಂಡಿದ್ದೇವೆ. ಮಾಧ್ಯಮಗಳು ಯುಪಿ ಪೊಲೀಸರ ವಿರುದ್ಧ ಅನೇಕ ‘ಸುದ್ದಿಗಳನ್ನು’ ಬರೆದಿದ್ದವು, ಆದರೆ ಯಾವುದೂ ಯಾವುದೇ ಪುರಾವೆಗಳನ್ನು ನೀಡಿಲ್ಲ” ಎಂದು ಮೂಲಗಳು ತಿಳಿಸಿವೆ.

“ನಾಗರಿಕರು ಮತ್ತು ಮಾಧ್ಯಮಗಳು ತಮಗೆ ಸಹಕಾರ ನೀಡದೆ ಇರುವುದು ವಿಚಾರಣಾ ಆಯೋಗವನ್ನು ರಚಿಸಿರುವ ಉದ್ದೇಶ ಸೋಲುವಂತಾಗಿದೆ” ಎಂದು ಸಮಿತಿ ಹೇಳಿದೆ.

ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ!

ಸಮಿತಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ವಿಕಾಸ್ ದುಬೆ ಅವರ ಪತ್ನಿ ಅಥವಾ ಕುಟುಂಬ ಸದಸ್ಯರು ಕೂಡಾ ಪೊಲೀಸರ ವಿರುದ್ಧ ಯಾವುದೇ ಪುರಾವೆಗಳೊಂದಿಗೆ ಮುಂದೆ ಬರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಸಾಕ್ಷ್ಯಾಧಾರ ನೀಡುವಂತೆ ಸ್ಥಳೀಯ ಪತ್ರಿಕೆಗಳಲ್ಲಿ ನೋಟಿಸ್ ನೀಡಲಾಗಿತ್ತು ಆದರೆ ಯಾರೂ ಸಾಕ್ಷಿಗಳೊಂದಿಗೆ ಹಾಜರಾಗಲಿಲ್ಲ ಎಂದು ತನಿಖಾ ಆಯೋಗ ಹೇಳಿದೆ.

“ಪ್ರಕರಣದ ಬಗ್ಗೆ ಮಾಧ್ಯಮಗಳು ಪೊಲೀಸರ ವಿರುದ್ದ ಭಾರಿ ಮಾತನಾಡಿತ್ತು. ಆದರೆ ಸಮಿತಿಯ ಕೋರಿಕೆಯ ಹೊರತಾಗಿಯು ಯುಪಿ ಪೊಲೀಸರ ವಿರುದ್ಧ ಸಾಕ್ಷ್ಯ ನೀಡಲು ಮಾಧ್ಯಮಗಳು ಏಕೆ ಮುಂದೆ ಬರಲಿಲ್ಲ?” ಎಂದು ಸಮಿತಿಯು ಪ್ರಶ್ನಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ವಿಡಿಯೊ ನೋಡಿ: ರಾಜ್ಯ ಸರ್ಕಾರ ಸಂಬಳ ನೀಡದೆ ಇದ್ದಿದ್ದಕ್ಕೆ ಭಿಕ್ಷಾಟನೆ ನಡೆಸಿದ ಕೆಎಸ್‌ಆರ್‌ಟಿಸಿ ನೌಕರರನ ಮಗು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...