Homeಮುಖಪುಟವಿಕಾಸ್ ದುಬೆಯ ಬಂಧನ ಪೂರ್ವ ನಿರ್ಧರಿತ: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪ

ವಿಕಾಸ್ ದುಬೆಯ ಬಂಧನ ಪೂರ್ವ ನಿರ್ಧರಿತ: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪ

ಗಡಿಗಳೆಲ್ಲವೂ ಮುಚ್ಚಿರುವಾಗ, ಪೊಲೀಸರು ಎಚ್ಚರದಿಂದಿರುವಾಗ ವಿಕಾಸ್ ದುಬೆ ಕಾನ್ಪುರದಿಂದ ದೆಹಲಿ ಬಳಿಯ ಫರಿದಾಬಾದ್‌‌ಗೆ ಅಲ್ಲಿಂದ ಉಜ್ಜಯಿನಿಗೆ ಹೇಗೆ ಪ್ರಯಾಣಿಸಿದ ಕಾಂಗ್ರೆಸ್ ವ್ಯಂಗ್ಯವಾಗಿ ಪ್ರಶ್ನಿಸಿದೆ.

- Advertisement -
- Advertisement -

ದರೋಡೆಕೋರ ವಿಕಾಸ್ ದುಬೆಯ ಬಂಧನವನ್ನು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಪೂರ್ವ ನಿರ್ಧರಿತ ಎಂದು ಆರೋಪಿಸಿದೆ. ಜುಲೈ 3 ರಂದು ತನ್ನನ್ನು ಬಂಧಿಸಲು ಬಂದ ಎಂಟು ಪೊಲೀಸರನ್ನು ಕೊಂದ ದುಬೆಯನ್ನು ಮಧ್ಯಪ್ರದೇಶದ ಉಜ್ಜಯಿನಿಯ ಪೊಲೀಸರು ಇಂದು ಬಂಧಿಸಿ ಉತ್ತರ ಪ್ರದೇಶ ಪೊಲೀಸರಿಗೆ ಮಾಹಿತಿ ನೀಡಿದ್ದರು.

ದುಬೆಯ ಬಂಧನವನ್ನು ಮಧ್ಯಪ್ರದೇಶ ಸರ್ಕಾರ ತನ್ನ ರಾಜಕೀಯ ಲಾಭಕ್ಕೆ ಪಡೆಯಲು ಮುಂದಾಗಿದ್ದು, ಮುಖ್ಯಮಂತ್ರಿ ಶಿವರಾಜ್ ಚೌಹಾನ್ ಟ್ವೀಟ್ ಮಾಡಿ “ಮಹಾಕಲ್‌ಗೆ ಹೋಗುವ ಮೂಲಕ ತಮ್ಮ ಪಾಪಗಳು ತೊಳೆಯುತ್ತವೆ ಎಂದು ಭಾವಿಸುವವರು ಭಗವಂತನನ್ನು ಅರ್ಥಮಾಡಿಕೊಂಡಿಲ್ಲ. ನಮ್ಮ ಸರ್ಕಾರ ಯಾವುದೇ ಅಪರಾಧಿಯನ್ನು ಬಿಡುವುದಿಲ್ಲ” ಎಂದು ಬರೆದಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಟ್ವೀಟ್ ಮಾಡಿ, ದುಬೆಯ ಬಂಧನವು ಶರಣಾಗತಿಯೆ ಅಥವಾ ಬಂಧನವೇ ಎಂದು ಸ್ಪಷ್ಟಪಡಿಸುವಂತೆ ಸರ್ಕಾರವನ್ನು ಕೇಳಿದ್ದಾರೆ. ದುಬೆಯ ಫೋನ್ ದಾಖಲೆಯನ್ನು ಸಾರ್ವಜನಿಕಗೊಳಿಸಿ ದರೋಡೆ ಕೋರರೊಂದಿಗೆ ಸಹಕರಿಸಿದ ಜನರನ್ನು ಬಹಿರಂಗಪಡಿಸುವಂತೆ ಹೇಳಿದ್ದಾರೆ.

ಉಜ್ಜಯಿನಿ ಪೊಲೀಸರಿಗೆ ಸುಳಿವು ದೊರೆತ ನಂತರ ವಿಕಾಸ್ ದುಬೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದ್ದರು. ಅಷ್ಟೇ ಅಲ್ಲದೆ ಜುಲೈ 3 ರಂದು 650 ಕಿ.ಮೀ ದೂರದ ಕಾನ್ಪುರದಲ್ಲಿ ಘಟನೆ ನಡೆದ ನಂತರ ತಾನು ಪೊಲೀಸರಲ್ಲಿ ಎಚ್ಚರದಲ್ಲಿ ಇರಬೇಕೆಂದು ಮಧ್ಯಪ್ರದೇಶದಾದ್ಯಂತ ಪೊಲೀಸರಿಗೆ ತಿಳಿಸಿದ್ದೆ ಎಂದು ಹೇಳಿದ್ದಾರೆ.

ವಿಕಾಸ್ ದುಬೆ ಬಂಧನವು ಯುಪಿ ಪೊಲೀಸರ ಸಂಪೂರ್ಣವಾಗಿ ವಿಫಲತೆಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. “ಎಚ್ಚರಿಕೆಯ ಹೊರತಾಗಿಯೂ, ಉಜ್ಜಯಿನಿಯವರೆಗೂ ತಲುಪಿರುವುದು ಭದ್ರತೆಯಲ್ಲಿನ ವಿಫಲತೆ ಹಾಗೂ ಸಹಭಾಗಿತ್ವವನ್ನು ಬಹಿರಂಗಪಡಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಕಾನ್ಪುರದ ಸ್ಥಳೀಯ ಪೊಲೀಸ್ ಅಧಿಕಾರಿಗಳು ವಿಕಾಸ್ ದುಬೆ ಹೆಸರನ್ನು ಮೋಸ್ಟ್ ವಾಂಟೆಡ್ ಅಪರಾಧಿಗಳ ಪಟ್ಟಿಯಿಂದ ಹೊರಗಿಟ್ಟಿದ್ದಾರೆ ಎಂಬ ವರದಿಗಳನ್ನು ಪ್ರಿಯಾಂಕ ಗಾಂಧಿ ಉಲ್ಲೇಖಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ವಿಕಾಸ್ ದುಬೆ ದೇವಾಲಯದಿಂದ ಬರಿಗಾಲಿನಿಂದ ನಡೆದುಕೊಂಡು ಹೊರಗೆ ಹೋಗುವುದು ಹಾಗೂ ಖಾಸಗಿ ಭದ್ರತಾ ಸಿಬ್ಬಂದಿ ಅವರೊಂದಿಗೆ ನಡೆದುಕೊಂಡು ಹೋಗುತ್ತಿರುವುದು ಕಾಣಬಹುದಾಗಿದೆ.

ಈ ಬಗ್ಗೆ ತೀವ್ರ ದಾಳಿ ಮಾಡಿದ ಯುವ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಬಿ.ವಿ, “ಇದು ಪೂರ್ವ ನಿರ್ಧರಿತ ಘಟನೆ, ಯಾವ ಕೋನದಿಂದ ಭಯೋತ್ಪಾದಕ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಕಂಡುಬರುತ್ತದೆ?. ಈ ವೀಡಿಯೊ ಇದಕ್ಕೆ ಪುರಾವೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

 

ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ, ಪೊಲೀಸರು ಎಚ್ಚರಿಕೆಯಿಂದ ಇದ್ದರು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್ “ಒಳ್ಳೆಯ ಜೋಕ್” ಎಂದು ಹೇಳಿದ್ದಾರೆ.

ಪೊಲೀಸರು ಎಷ್ಟು ಜಾಗರೂಕರಾಗಿದ್ದರು ಎಂದರೆ ಉತ್ತರ ಪ್ರದೇಶದ ವಿಕಾಸ್ ಮಧ್ಯಪ್ರದೇಶದಲ್ಲಿದ್ದಾನೆ ಎಂದು ಪೊಲೀಸರು ತಿಳಿದಾಗ ಆತನೆ ತನ್ನನ್ನು ತಾನು ಗುರುತಿಸಿಕೊಳ್ಳಲು ಕಿರುಚಿ ಕೊಂಡಿದ್ದಾನೆ, ಎಂದು ಶ್ರೀನಿವಾಸ್ ವ್ಯಂಗ್ಯ ಮಾಡಿದ್ದಾರೆ.

ಗಡಿಗಳೆಲ್ಲವೂ ಮುಚ್ಚಿರುವಾಗ, ಪೊಲೀಸರು ಎಚ್ಚರದಿಂದಿರುವಾಗ ವಿಕಾಸ್ ದುಬೆ ಕಾನ್ಪುರದಿಂದ ದೆಹಲಿ ಬಳಿಯ ಫರಿದಾಬಾದ್‌‌ಗೆ, ನಂತರ ಉಜ್ಜಯಿನಿಗೆ ಹೇಗೆ ಪ್ರಯಾಣಿಸಿದ. ಉಜ್ಜಯಿನಿ ತಲುಪಲು ಆತನೇನು ’ಮಿಸ್ಟರ್‌ ಇಂಡಿಯಾ’ ಆಗಿ ಮಾರ್ಪಾಟಾಗಿದ್ದಾನೆಯೆ ಎಂದು ಕಾಂಗ್ರೆಸ್‌ ನಾಯಕ ಪ್ರಶ್ನಿಸಿದ್ದಾರೆ.

ಮಿಸ್ಟರ್‌ ಇಂಡಿಯಾ ಎಂಬುವುದು 1980 ರ ದಶಕದಲ್ಲಿ ಅನಿಲ್ ಕುಮಾರ್ ನಟಿಸಿದ ಚಲನಚಿತ್ರದ ಪಾತ್ರವಾಗಿದೆ. ಅದರಲ್ಲಿರುವ ನಾಯಕ ’ಮಿಸ್ಟರ್‌ ಇಂಡಿಯಾ’ ಇದ್ದಕ್ಕಿಂದತೆ ಪ್ರತ್ಯಕ್ಷ ಹಾಗೂ ಅಪ್ರತ್ಯಕ್ಷನಾಗುತ್ತಾನೆ.


ಓದಿ: 8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆ ಬಂಧನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...