Homeಕರ್ನಾಟಕಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ: ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ

ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ: ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ

- Advertisement -
- Advertisement -

“ಕಾಂಗ್ರೆಸ್​ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ” ಎಂದು ಹೇಳಿಕೆ ನೀಡುವ ಮೂಲಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿವಾದ ಸೃಷ್ಟಿಸಿದ್ದಾರೆ.

ತುಮಕೂರಿನ ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ನೀಡುವ ಭರದಲ್ಲಿ ಹಳ್ಳಿಯ ಹೆಣ್ಣು ಮಕ್ಕಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ.

ಜನರನ್ನು ಉದ್ದೇಶಿಸಿ ಮಾತನಾಡಿದ ಹೆಚ್‌ಡಿಕೆ “ಸ್ವಲ್ಪ ಗಮನ ಇಟ್ಟು ಎರಡು ಮಾತುಗಳನ್ನು ಕೇಳಿ. ಇವತ್ತಿನ ಕಾಂಗ್ರೆಸ್ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದರಿಂದ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ. ಈ ರೀತಿ ಉಚಿತ ಯೋಜನೆ ಕೊಟ್ಟರೆ ಹಳ್ಳಿಯ ತಾಯಂದಿರ ಬದುಕು ಏನಾಗಬೇಕು? ಈ ಬಗ್ಗೆ ಎಲ್ಲರೂ ಯೋಚನೆ ಮಾಡಬೇಕಿದೆ. ನಿಮ್ಮ ಕುಟುಂಬದ ಬದುಕೇನಾಗಬೇಕು ಯೋಚನೆ ಮಾಡಬೇಕಿದೆ. ಅವರಿಗೆ ಐದು ಉಚಿತ ಗ್ಯಾರಂಟಿ ಬಿಟ್ಟು ಬೇರೆ ಏನೂ ಇಲ್ಲ” ಎಂದು  ಟೀಕಿಸಿದ್ದಾರೆ.

“ಬೆಳಗ್ಗೆ ಎದ್ದು ಯಾವ ಪತ್ರಿಕೆ ನೋಡಿದರೂ ಗ್ಯಾರಂಟಿಯದ್ದೇ ಜಾಹೀರಾತು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಫೋಟೋಗಳನ್ನು ಹಾಕಿಕೊಂಡು, ಈಗಾಗಲೇ ₹300 ಕೋಟಿಯಷ್ಟು ಹಣವನ್ನು ಜಾಹೀರಾತಿಗಾಗಿ ಖರ್ಚು ಮಾಡಿದ್ದಾರೆ. ಅದೆಲ್ಲವೂ ನಿಮ್ಮ ದುಡ್ಡು. ಈ ಹಣ ಕಾಂಗ್ರೆಸ್ ಕಚೇರಿಯಿಂದಲೋ ಅಥವಾ ಅವರ ಜೇಬಿನಿಂದ ಹಾಕಿರುವ ದುಡ್ಡಲ್ಲ. ರೈತರು ಬೆಳೆ ನಷ್ಟ ಅನುಭವಿಸುತ್ತಿದ್ದರೂ ಕೇಂದ್ರ ಸರ್ಕಾರ ದುಡ್ಡು ಕೊಟ್ಟಿಲ್ಲ ಎಂದು ದೂರುತ್ತಿದ್ದಾರೆ” ಎಂದಿದ್ದಾರೆ. ಈ ಮೂಲಕ ಬರ ಪರಿಹಾರ ನೀಡದ ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ : ಚುನಾವಣಾಧಿಕಾರಿಗಳ ಜೊತೆ ಕಾಣಿಸಿಕೊಂಡ ಬಿಜೆಪಿ ಏಜೆಂಟ್: ದೂರು ದಾಖಲಿಸಿದ ಕಾಂಗ್ರೆಸ್ ಅಭ್ಯರ್ಥಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ: ಅಂತರಾಷ್ಟ್ರೀಯ ಮಾಧ್ಯಮಗಳಲ್ಲೂ ಸುದ್ದಿಯಾದ ಪ್ರಜ್ವಲ್‌ ರೇವಣ್ಣ

0
ಹಾಸನದ ಪೆನ್‌ಡ್ರೈವ್‌ ವೈರಲ್‌ ಕೇಸ್‌ ಮತ್ತು ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ದೇಶದಲ್ಲಿ ಭಾರೀ ಸುದ್ದಿಯಾಗಿತ್ತು, ಇದೀಗ ಈ ಸುದ್ದಿ ಅಂತರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲೂ ವರದಿಯಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಓದುಗರನ್ನು,...