Homeಮುಖಪುಟಛತ್ತೀಸ್‌ಗಢ | 'ಹಸ್‌ದೇವ್ ಅರಣ್ಯ'ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಅದಾನಿ ಜೊತೆಗಿನ ಎರಡನೇ ಹಂತದ ಕಲ್ಲಿದ್ದಲು ಗಣಿಗಾರಿಕೆಗೆ ಅರಣ್ಯ ನಾಶ

- Advertisement -
- Advertisement -

ಛತ್ತೀಸ್‌ಗಢದ ‘ಹಸ್‌ದೇವ್ ಅರಣ್ಯ’ದಲ್ಲಿ ಗುರುವಾರ ಹಿಂಸಾಚಾರ ಭುಗಿಲೆದ್ದಿದ್ದು, ಕಲ್ಲಿದ್ದಲು ಗಣಿಗಾರಿಕೆಗೆ ಮರಗಳನ್ನು ಕಡಿಯುವ ವಿಚಾರದಲ್ಲಿ ಸ್ಥಳೀಯ ಆದಿವಾಸಿಗಳು ಮತ್ತು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟಿದೆ.

ಇಂಡಿಯನ್‌ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಘಟನೆಯಲ್ಲಿ ಹಲವಾರು ಪ್ರತಿಭಟನಾಕಾರರು ಮತ್ತು 13 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಕಂದಾಯ ಸಿಬ್ಬಂದಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ (RRVUNL)ನ ಪಾರ್ಸಾ ಕಲ್ಲಿದ್ದಲು ಬ್ಲಾಕ್ ಗಣಿಗಾರಿಕೆ ಯೋಜನೆಯ ಭಾಗವಾಗಿ ಸುರ್ಗುಜಾ ಜಿಲ್ಲೆಯ ಫತೇಪುರ್ ಮತ್ತು ಸಾಲಿ ಗ್ರಾಮಗಳ ಬಳಿ ಮರಗಳನ್ನು ಕಡಿಯಲು ಸರ್ಕಾರ ಗುರುವಾರ ಮುಂದಾಗಿತ್ತು. ಇದಕ್ಕೆ ಸ್ಥಳೀಯ ಆದಿವಾಸಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕಲ್ಲಿದ್ದಲು ಗಣಿಗಾರಿಕೆಗಾಗಿ ಹಸ್‌ದೇವ್ ಅರಣ್ಯ ವ್ಯಾಪ್ತಿಯ ಆರು ಗ್ರಾಮಗಳ ಸುತ್ತಮುತ್ತಲಿನ ಸುಮಾರು 5,000 ಮರಗಳನ್ನು ಕಡಿಯಲು ನಿರ್ಧರಿಸಲಾಗಿದೆ ಎಂದು ವರದಿಗಳು ಹೇಳಿವೆ.

ಗುರುವಾರ ಮರಗಳನ್ನು ಕಡಿಯಲು ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸುತ್ತಾರೆ ಎಂದು ತಿಳಿದ ಸ್ಥಳೀಯರು, ಬುಧವಾರ ರಾತ್ರಿಯಿಂದಲೇ ಉದ್ದೇಶಿತ ಮರ ಕಡಿಯುವ ಸ್ಥಳದಲ್ಲಿ ಜಮಾಯಿಸಿದ್ದರು. ಅವರನ್ನು ತಡೆಯಲು ಸುಮಾರು 400 ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಸ್ಥಳೀಯರು ದೊಣ್ಣೆ, ಕತ್ತಿ, ಬಾಣ ಮತ್ತು ಕೊಡಲಿಗಳೊಂದಿಗೆ ಶಸ್ತ್ರಸಜ್ಜಿತರಾಗಿ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ ನಂತರ ಹಿಂಸಾಚಾರ ಪ್ರಾರಂಭವಾಯಿತು ಎಂಬ ಆರೋಪವನ್ನು ಸುರ್ಗುಜಾ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಪಟೇಲ್ ನಿರಾಕರಿಸಿದ್ದಾರೆ. “ಗ್ರಾಮಸ್ಥರು ಹಿಂಸಾತ್ಮಕವಾಗಿ ನಮ್ಮ ಮೇಲೆ ಹಲ್ಲೆ ನಡೆಸಿದರು. ಅವರನ್ನು ಎದುರಿಸಲು ಮತ್ತು ಸ್ಥಳದಿಂದ ಚದುರಿಸಲು ನಾವು ಪ್ರತಿಕ್ರಿಯಿಸಿದ್ದೇವೆ” ಎಂದಿದ್ದಾರೆ.

ಪೊಲೀಸ್ ಕಾನ್‌ಸ್ಟೇಬಲ್ ಭೋಲಾರಾಮ್ ರಾಜ್‌ವಾಡೆ ಅವರ ಕಾಲಿಗೆ ಸ್ಥಳೀಯರು ಬಾಣ ಬಿಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಚಿಕಿತ್ಸೆಗಾಗಿ ರಾಯಪುರಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಛತ್ತೀಸ್‌ಗಢದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. “ಹಸ್‌ದೇವ್ ಅರಣ್ಯದಲ್ಲಿ ಪೊಲೀಸ್ ಬಲವನ್ನು ಹಿಂಸಾತ್ಮಕವಾಗಿ ಬಳಸಿಕೊಳ್ಳುವ ಮೂಲಕ ಆದಿವಾಸಿಗಳ ಅರಣ್ಯ ಮತ್ತು ಭೂಮಿಯನ್ನು ಬಲವಂತವಾಗಿ ಕಬಳಿಸುವ ಪ್ರಯತ್ನವು ಆದಿವಾಸಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಹಸ್‌ದೇವ್ ಅರಣ್ಯದಲ್ಲಿ ಮರಗಳನ್ನು ಕಡಿಯದಂತೆ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿತ್ತು. ಸರ್ವಾನುಮತ ಎಂದರೆ ಅದಕ್ಕೆ ಬಿಜೆಪಿ ಕೂಡ ಒಪ್ಪಿಗೆ ಸೂಚಿಸಿತ್ತು. ಆದರೆ, ಈಗ ಅಧಿಕಾರಕ್ಕೆ ಬಂದ ತಕ್ಷಣ ಬಿಜೆಪಿ ನಿರ್ಣಯವನ್ನು ಮರೆತಿದೆ. ಹಸ್‌ದೇವ್‌ನ ಮೂಲ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸುತ್ತಿದೆ” ಎಂದಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಪ್ರತಿಭಟನಾನಿರತ ಸ್ಥಳೀಯ ನಿವಾಸಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ಶತಮಾನಗಳಿಂದ ಅರಣ್ಯಗಳ ಮಾಲೀಕರಾಗಿರುವ ಆದಿವಾಸಿಗಳನ್ನು ಅದಾನಿಯ ಗಣಿಗಾಗಿ ಹೊರಹಾಕಲಾಗುತ್ತಿದೆ” ಎಂದು ಹೇಳಿದ್ದಾರೆ.

ಏನಿದು ಕಲ್ಲಿದ್ದಲು ಗಣಿಗಾರಿಕೆ? 

ದಶಕದ ಹಿಂದೆ ಹಸ್‌ದೇವ್ ಅರಣ್ಯದಲ್ಲಿ ಸುಮಾರು 5 ಬಿಲಿಯನ್ ಟನ್ ಕಲ್ಲಿದ್ದಲು ನಿಕ್ಷೇಪವಿದೆ ಎಂಬ ಮಾಹಿತಿ ಬಯಲಾಗಿತ್ತು. ಆಗಲೇ ಅದಾನಿಯಂತಹ ಕಂಪನಿಗಳ ಕಣ್ಣು ದಟ್ಟ ಅರಣ್ಯದ ಮೇಲೆ ಬಿದ್ದಿತ್ತು. ಅಂದುಕೊಂಡಂತೆ ಅರಣ್ಯ ಪ್ರದೇಶದಲ್ಲಿ ಸುಮಾರು 23 ಕಲ್ಲಿದ್ದಲು ಗಣಿಗಳು ಪ್ರಾರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿತು. ಈ ಪೈಕಿ ಐದು ಗಣಿಗಳು ಈಗಾಗಲೇ ಕಾರ್ಯ ನಿರ್ವಹಣೆಯ ವಿವಿಧ ಹಂತಗಳಲ್ಲಿವೆ.

2023ರಲ್ಲಿ ಹಸ್‌ದೇವ್ ಅರಣ್ಯದ ಮಧ್ಯದಲ್ಲಿ ಒಂದು ಗಣಿಯು ಕಾರ್ಯಾರಂಭ ಮಾಡಿದೆ. ಅದಕ್ಕೆ ಪಾರ್ಸಾ ಈಸ್ಟ್ ಕೇಟೆ ಬಸನ್ (ಪಿಇಕೆಬಿ) ಎಂದು ಹೆಸರಿಸಲಾಗಿದೆ. ರಾಜಸ್ಥಾನ ರಾಜ್ಯ ಸರ್ಕಾರದ ವಿದ್ಯುತ್ ಉತ್ಪಾದನಾ ಕಂಪನಿಯಾದ ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ (RVUNL) ಒಡೆತನ ಈ ಗಣಿಯಿಂದ ಕಲ್ಲಿದ್ದಲು ತೆಗೆಯುವ ಪ್ರಕ್ರಿಯೆಯನ್ನು ಅದಾನಿ ಕಂಪನಿಗೆ ಕೊಡಲಾಗಿದೆ. ಹೆಸರಿಗೆ ರಾಜಸ್ತಾನ ವಿದ್ಯುತ್ ನಿಗಮದ ಒಡೆತನ ಮಾಲೀಕತ್ವ ಇದ್ದರೂ, ಗಣಿಗಾರಿಕೆಯ ಎಲ್ಲಾ ಪ್ರಕ್ರಿಯೆಗಳನ್ನು ಅದಾನಿ ಕಂಪನಿ ಮಾಡುತ್ತಿದೆ. 2026ರ ಹೊತ್ತಿಗೆ ಈ ಗಣಿಯ ಕಲ್ಲಿದ್ದಲು ಮುಗಿಯುವ ಸಾಧ್ಯತೆ ಇದೆ.

2020ರಲ್ಲಿ, ರಾಜಸ್ಥಾನ ವಿದ್ಯುತ್ ನಿಗಮ ಕೇಂದ್ರ ಪರಿಸರ ಸಚಿವಾಲಯಕ್ಕೆ ಪತ್ರ ಬರೆದು ಪಿಇಕೆಬಿಯಲ್ಲಿ ಕಲ್ಲಿದ್ದಲು ವೇಗವಾಗಿ ಕ್ಷೀಣಿಸುತ್ತಿದೆ. ಹಾಗಾಗಿ, ಎರಡನೇ ಹಂತದ ಗಣಿಗಾರಿಕೆ ಆರಂಭಕ್ಕೆ ಅನುಮೋದನೆ ಕೋರಿತ್ತು. ಸ್ಥಳೀಯರ ತೀವ್ರ ವಿರೋಧದ ನಡುವೆಯೂ 2022ರಲ್ಲಿ ಎರಡನೇ ಹಂತದ ಗಣಿಗಾರಿಕೆಗೆ ಅನುಮೋದನೆ ನೀಡಲಾಗಿದೆ. ಈಗ ಗಣಿಗಾರಿಕೆ ಪ್ರಾರಂಭಿಸಲು ಮರಗಳನ್ನು ಕಡಿಯಲು ಅಧಿಕಾರಿಗಳು ಮುಂದಾಗಿದ್ದಾರೆ.

ದಕ್ಷಿಣ ಭಾರತದಲ್ಲಿ ಪಶ್ಚಿಮ ಘಟ್ಟಗಳಿದ್ದಂತೆ ಉತ್ತರ ಭಾರತದಲ್ಲಿ ಹಸ್‌ದೇವ್ ಅರಣ್ಯವಿದೆ. ಅದನ್ನು ಉತ್ತರದ ‘ಶ್ವಾಸಕೋಸ’ ಎಂದು ಕರೆಯಲಾಗುತ್ತದೆ. ಶತಮಾನಗಳಿಂದ ಆದಿವಾಸಿಗಳು ಮತ್ತು ಸಾವಿರಾರು ವನ್ಯ ಜೀವಿಗಳ ನೆಲೆಯಾಗಿರುವ ಈ ಅರಣ್ಯವನ್ನು ಆದಿವಾಸಿಗಳು ‘ಪೂಜ್ಯನೀಯವಾಗಿ’ ಕಾಣುತ್ತಾರೆ. ಅಂತಹ ಅರಣ್ಯದ ನಾಶಕ್ಕೆ ಸರ್ಕಾರವೇ ಮುಂದಾಗಿರುವುದು ಆತಂಕದ ವಿಚಾರ.

ಇದನ್ನೂ ಓದಿ : ಜಾರ್ಖಂಡ್ ಚುನಾವಣೆ | ಎನ್‌ಡಿಎ ಸೀಟು ಹಂಚಿಕೆ ಪೂರ್ಣ – ಬಿಜೆಪಿ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...